20.4 C
Bengaluru
Sunday, January 19, 2020

ಸಾವಿರ ಕೋ.ರೂ. ಬಿಡುಗಡೆ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...


ನವಲಗುಂದ: ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಅದರಲ್ಲಿ ನವಲಗುಂದ ಮತಕ್ಷೇತ್ರಕ್ಕೆ ಬಹುಪಾಲು ದೊರೆತಿದೆ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ತಾಲೂಕಿನ ಅಮರಗೋಳ ಗ್ರಾಮದಲ್ಲಿ ಬೆಣ್ಣಿಹಳ್ಳಕ್ಕೆ ಅಳವಡಿಸಿದ ಏತ ನೀರಾವರಿ ಯೋಜನೆಗೆ ಶನಿವಾರ ಪ್ರಾಯೋಗಿಕವಾಗಿ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

1980ರಲ್ಲಿ ನೀರಿನ ಕರ ಸಂಗ್ರಹಣೆ ವಿರುದ್ದ ಹೋರಾಡಿದ್ದರ ಫಲವಾಗಿ ರೈತರ ಬೇಡಿಕೆಗಳು ಇಂದು ಒಂದೊಂದಾಗಿ ಈಡೇರುತ್ತಿವೆ. ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದಲ್ಲಿ ಅನಗತ್ಯವಾಗಿ ನೂರಾರು ಕ್ಯೂಸೆಕ್ ನೀರು ಹರಿದು ಹೋಗುತ್ತಿತ್ತು. ಅದನ್ನು ತಡೆದು ಬೆಳವಟಗಿ, ಅಮರಗೋಳ, ಅಳಗವಾಡಿ, ಗೊಬ್ಬರಗುಂಪಿ, ಮತ್ತು ಹುಣಸಿಕಟ್ಟಿ ಗ್ರಾಮಗಳ ರೈತರ ಜಮೀನಿಗೆ ನೀರು ಪೂರೈಸಲು 48 ಕೋಟಿ ರೂ. ವೆಚ್ಚದಲ್ಲಿ ಗೊಬ್ಬರಗುಂಪಿ ಬಳಿ ತುಪ್ಪರಿಹಳ್ಳ ಮತ್ತು ಅಮರಗೋಳದ ಹತ್ತಿರ ಬೆಣ್ಣಿ ಹಳ್ಳಕ್ಕೆ ಏತ ನೀರಾವರಿ ಯೋಜನೆ ಕೈಗೊಳ್ಳಲಾಗಿತ್ತು. 2012ರಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದರು ಎಂದರು.

ಎರಡೂ ಏತ ನೀರಾವರಿಗೆ ನೈಸರ್ಗಿಕವಾಗಿ ಬೆಣ್ಣಿಹಳ್ಳದ ನೀರು ಬರಲು ಮತ್ತೆ 6.25 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗೊಳಿಸಲಾಗಿದೆ. ಒಟ್ಟಾರೆ 54 ಕೋ.ರೂ. ವೆಚ್ಚದಲ್ಲಿ ಏತ ನೀರಾವರಿ ಯೋಜನೆಗಳು ಪೂರ್ಣಗೊಳ್ಳಲಿವೆ. ಈ ಯೋಜನೆಯಿಂದ 9,808 ಎಕರೆ ಪ್ರದೇಶಕ್ಕೆ ನೀರು ಪೂರೈಕೆಯಾಗಲಿದೆ. ಮಲಪ್ರಭಾ ಜಲಾಶಯದಿಂದ ನೀರು ತಲುಪದ ರೈತರಿಗೆ ಈ ಯೋಜನೆ ಸದ್ಬಳಕೆಯಾಗಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ 138 ಕೀ.ಮೀ. ವ್ಯಾಪ್ತಿಯಲ್ಲಿ ಹರಿಯುವ ನೀರಿಗೆ ಏತ ನೀರಾವರಿ ಕಲ್ಪಿಸಿದ್ದು ಐತಿಹಾಸಿಕ. ಆದು ನವಲಗುಂದ ಮತಕ್ಷೇತ್ರದಲ್ಲಿ ಆಗಿರುವುದು ಹೆಮ್ಮೆಯ ವಿಷಯ ಎಂದರು.

ರೈತ ಮುಖಂಡ ಸುಭಾಸಚಂದ್ರಗೌಡ ಪಾಟೀಲ ಮಾತನಾಡಿ, ಮಹದಾಯಿ, ಕಳಸಾ ಬಂಡೂರಿ ಯೋಜನೆ, ಏತ ನೀರಾವರಿ ಮೊದಲಾದ ಯೋಜನೆಗಳು ಈಡೇರಿತ್ತಿವೆ. ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರು ರೈತಪರ ಚಿಂತನೆಯುಳ್ಳರಾಗಿದ್ದಾರೆ ಎಂದರು. ಇಂಜಿನಿಯರ್ ವಿ.ಬಿ. ಮೊನಿಪಾಟೀಲ, ಎಸ್.ಎಂ. ಸಂಕನಗೌಡರ, ಡಾ. ಎಂ.ಬಿ. ಮುನೇನೊಪ್ಪ, ನಾಗಪ್ಪ ಹರ್ತಿ ಇದ್ದರು.

ವಿವಿಧ ಇಲಾಖೆಗಳಡಿ 1000 ಕೋ.ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ್ದು, ಅದರಲ್ಲಿ ಎರಡನೇ ಹಂತದ ನೀರಾವರಿ ಯೋಜನೆ ಅಭಿವೃದ್ಧಿ ಕಾಮಗಾರಿ (ಇಆರ್​ಎಂ) ಕೈಗೊಳ್ಳಲಾಗುತ್ತಿದೆ. ಉಪ ಕಾಲುವೆಗಳ ಅಭಿವೃದ್ಧಿ, ಮುಖ್ಯ ಕಾಲುವೆಗಳ ಮರು ನವೀಕರಣ, ಏತ ನೀರಾವರಿ, ಬಸ್ ನಿಲ್ದಾಣ ನಿರ್ವಣ, ಪುರಸಭೆ ಮತ್ತು ಇತರ ಇಲಾಖೆಗಳಡಿ 1 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದಾರೆ. ಶೀಘ್ರದಲ್ಲಿ ದಿನಾಂಕ ನಿಗದಿಪಡಿಸಲಾಗುವುದು.
|ಶಂಕರ ಪಾಟೀಲ ಮುನೇನಕೊಪ್ಪ ಶಾಸಕ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...