16 C
Bangalore
Thursday, December 12, 2019

ಸಾವೆಂದರೆ ಸಂಬಂಧಿಕರೇ ದೂರ…

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅಂಕೋಲಾ: ಈ ಊರಿನಲ್ಲಿ ಮಳೆಗಾಲದ ವೇಳೆ ಸಾವಾದರೆ ಸಂಬಂಧಿಕರೇ ಸಾವಿರ ಕಿ.ಮೀ. ದೂರ ಸರಿಯುತ್ತಾರೆ. ಇದಕ್ಕೆ ಕಾರಣ ಸತ್ತವರ ಶವವನ್ನು ನೀರಿನಲ್ಲಿಯೇ ಹೊತ್ತುಕೊಂಡು ಸಾಗಬೇಕಾದ ಅನಿವಾರ್ಯತೆ.

ಇದು ಅಂಕೋಲಾ ಪಟ್ಟಣ ವ್ಯಾಪ್ತಿಯ ಕೇಣಿ ಊರಿನ ಪಡ್ತಿ ಸಮಾಜದ ಜನರ ನರಕಯಾತನೆ. ಹಳ್ಳದ ಆಚೆ ಸ್ಮಶಾನ ಇರುವುದರಿಂದ ಮಳೆಗಾಲದಲ್ಲಿ ಹಳ್ಳಕ್ಕೆ ಅಪಾರ ನೀರು ಬರುತ್ತದೆ. ಇದರಿಂದ ಸಮಾಜದ ಯಾರಾದರೂ ಸಾವನ್ನಪ್ಪಿದರೆ ಶವವನ್ನು ಹಳ್ಳದ ನೀರಿನಲ್ಲಿಯೇ ಹೊತ್ತು ಸಾಗಬೇಕಾಗಿದೆ.

ಬುಧವಾರ ಕೇಣಿ ಪಡ್ತಿ ಸಮಾಜದ ರಾಮ ನಾರಾಯಣ ಗಾಂವಕರ ಎಂಬುವವರು ಮೃತಪಟ್ಟಿದ್ದರು. ಇವರ ಶವವನ್ನು ನೀರಿನಲ್ಲೇ ಹೊತ್ತು ಸಾಗಿಸಲಾಯಿತು.

ಕಳೆದ ವರ್ಷ ಜುಲೈ 12ರಂದು ಕೇಣಿ ಗಾಂವರವಾಡಾದ ಸುಶೀಲಾ ಪುತ್ತು ಗಾಂವಕರ ಎಂಬುವವರು ಮೃತಪಟ್ಟ ವೇಳೆ ಅವರ ಶವವನ್ನು ನೀರಿನಲ್ಲಿ ಹೊತ್ತು ಸಾಗಿಸಿದ್ದರು. ಈ ಕುರಿತು ಜುಲೈ 13ರಂದು ವಿಜಯವಾಣಿಯು ‘ತುಂಬಿದ ಹಳ್ಳವೇ ಶವ ಹೊರುವ ದಾರಿ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.

ಆಗ ಕೇಣಿ ಹಳ್ಳಕ್ಕೆ ಕಾಲುಸಂಕ ನಿರ್ವಿುಸಬೇಕು ಎಂದು ಪಟ್ಟು ಹಿಡಿದ ಜನತೆ ಪುರಸಭೆ ಎದುರು ಪ್ರತಿಭಟನೆ ನಡೆಸಿದ್ದರು. ಅಂದು ಸ್ಥಳಕ್ಕೆ ಭೇಟಿ ನೀಡಿದ್ದ ಪುರಸಭೆ ಅಧಿಕಾರಿಗಳು ಕೇಣಿ ಹಳ್ಳಕ್ಕೆ ಕಾಲುಸಂಕ ನಿರ್ವಿುಸುವ ಭರವಸೆ ನೀಡಿದ್ದರು. ಮಳೆಗಾಲ ಕಳೆದು ಮತ್ತೊಂದು ಮಳೆಗಾಲ ಬಂದರೂ ಈ ಜನರ ಸಮಸ್ಯೆ ಹಾಗೆಯೇ ಉಳಿದುಕೊಂಡಿದೆ.

ಕಾಲು ಸಂಕ ನಿರ್ವಿುಸಿ ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು ತಮಗೆ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಹೀಗಾಗಿ, ಮಳೆಗಾಲ ಬಂದರೆ ಇಲ್ಲಿನ ಜನರಿಗೆ ನರಕಯಾತನೆ ಬಂತೆಂಬ ಚಿಂತೆಯಲ್ಲಿದ್ದಾರೆ.

ನಮ್ಮ ಪಡ್ತಿ ಸಮಾಜದ ರುದ್ರಭೂಮಿಗೆ ಶವ ಸಾಗಿಸಲು ಮಳೆಗಾಲದಲ್ಲಿ ಹರಸಾಹಸ ಪಡಬೇಕಾಗುತ್ತದೆ. ಈ ಕುರಿತು ಅಧಿಕಾರಿ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ. | ಗಂಗಾಧರ ಗಾಂವಕರ, ಸ್ಥಳೀಯ

ಮಳೆಗಾಲದಲ್ಲಿ ಸಾರ್ವಜನಿಕರು ಪುರಸಭೆ ವಿರುದ್ಧ ಪ್ರತಿಭಟನೆ ನಡೆಸಿದಾಗ ನಾನು ಈ ಭಾಗದ ಪುರಸಭೆ ಸದಸ್ಯನಾಗಿದ್ದೆ. ಆಗ ಮಳೆಗಾಲ ಮುಗಿದ ನಂತರ ಕಾಲು ಸಂಕ ನಿರ್ವಿುಸಿಕೊಡುವುದಾಗಿ ಭರವಸೆ ನೀಡಿದ್ದೆ. ಆದರೆ, ಕೆಲ ಸ್ಥಳೀಯರು ತಕ್ಷಣ ಕಾಲು ಸಂಕದ ಬದಲಿಗೆ ದೊಡ್ಡ ಪೈಪ್ ಹಾಕಿ ರಸ್ತೆ ನಿರ್ವಿುಸಬೇಕು ಎಂದು ಪಟ್ಟು ಹಿಡಿದಿದ್ದರು. ಹೀಗಾಗಿ, ಪುರಸಭೆ ನಿಧಿಯಿಂದ 2 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಮಾಡಲಾಗಿತ್ತು. ಆದರೆ, ಮಳೆಗಾಲ ಮುಗಿಯುವಷ್ಟರಲ್ಲಿ ನೀರಿನ ಸೆಳೆತಕ್ಕೆ ಸಂಪೂರ್ಣ ಕೊಚ್ಚಿ ಹೋಯಿತು. ನಂತರ ನಮ್ಮ ಅಧಿಕಾರಾವಧಿಯೂ ಮುಗಿಯಿತು. | ಸಂದೀಪ ಬಂಟ ಪುರಸಭೆ ಮಾಜಿ ಸದಸ್ಯ

ನಾನು ಅಂಕೋಲಾ ಪುರಸಭೆಗೆ ಬಂದ ನಂತರ ಸ್ಥಳೀಯರು ಕಾಲುಸಂಕದ ಕುರಿತು ನನ್ನ ಗಮನಕ್ಕೆ ತಂದರು. ತಕ್ಷಣ ನಾನು ಅವರ ಜೊತೆ ತೆರಳಿ ಸ್ಥಳ ಪರಿಶೀಲಿಸಿ 2019-20ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಲಾಯಿತು. ಕಾಲುಸಂಕ ನಿರ್ವಣಕ್ಕೆ 7.95 ಲಕ್ಷ ರೂ. ವೆಚ್ಚದಲ್ಲಿ ನೀಲನಕ್ಷೆ ತಯಾರಿಸಿ ಟೆಂಡರ್ ಕರೆಯಲು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದಿದ್ದು, ಸದ್ಯದಲ್ಲಿಯೇ ಟೆಂಡರ್ ಕರೆಯಲಾಗುವುದು. | ಬಿ. ಪ್ರಲ್ಹಾದ ಮುಖ್ಯಾಧಿಕಾರಿ, ಪುರಸಭೆ, ಅಂಕೋಲಾ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...