ಸಿಂಗಾರಗೊಂಡ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆ

18MDG2 paint

ಮೂಡಿಗೆರೆ: ಗೌಡಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಗ್ರಾಮದ ಯುವಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಸೇರಿ ಆಕರ್ಷಕ ರೂಪ ನೀಡಿದ್ದಾರೆ. ಸರ್ಕಾರಿ ಶಾಲೆ ಉಳಿಸುವುದು, ಶಾಲೆಗೆ ಮಕ್ಕಳನ್ನು ಆಕರ್ಷಿಸುವುದು, ಕನ್ನಡ ಭಾಷೆ ಉಳಿಸಿ ಬೆಳೆಸುವುದು, ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಬೇಕು ಎಂಬ ಧ್ಯೇಯದೊಂದಿಗೆ ಗ್ರಾಮದ ಹುಡುಗರು, ವಿವಿಧ ಸಂಘ ಸಂಸ್ಥೆಗಳು ದಾನಿಗಳ ನೆರವು ಪಡೆದು ಶಾಲೆಗೆ ಸುಣ್ಣ ಬಣ್ಣ ಬಳಿದು ಆಕರ್ಷಕವಾದ ಚಿತ್ತಾರಗಳನ್ನು ಮೂಡಿಸಿ ವಿಶಿಷ್ಟ ರೂಪ ನೀಡಿದ್ದಾರೆ.
ವಿದ್ಯಾರ್ಥಿಗಳ ಕೊರತೆಯಿಂದ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪಿದೆ. ಕೆಲವೆಡೆ ಶಾಲೆ ತೆರೆದಿದ್ದರೂ ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿ ಇದ್ದರೂ ಕೂಡ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಲು ಮುಂದಾಗಿರುವ ಯುವಕರ ತಂಡದ ಪ್ರಯತ್ನಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.
ಶಾಲೆಗೆ ವಿದ್ಯಾರ್ಥಿಗಳು, ಪಾಲಕರನ್ನು ಆಕರ್ಷಿಸಬೇಕಾದರೆ ಶಾಲೆಯ ಪರಿಸರ ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯ ಗೋಡೆಯನ್ನು ವಿಶಿಷ್ಟವಾದ ಚಿತ್ರಕಲೆಯೊಂದಿಗೆ ಸಿಂಗರಿಸಿ ಆಕರ್ಷಕ ರೂಪ ನೀಡಲಾಗಿದೆ. ವರ್ಣಚಿತ್ರ ಕಲಾವಿದ ಹುಬ್ಬಳ್ಳಿಯ ಯಲ್ಲಪ್ಪ ವೈ ಕುಂಬಾರ, ಚಿತ್ರದುರ್ಗದ ಶಿವಕುಮಾರ್ ಕಂದಿಗೆರೆ, ತುಮಕೂರಿನ ಕಾರ್ತಿಕ್ ಅವರ ತಂಡ ಹಾಗೂ ಕರ್ನಾಟಕ ಬಲಸೇನೆ ತಂಡದ ಸದಸ್ಯರು ಶಾಲೆಯ ಗೋಡೆ ಮತ್ತು ಕಾಂಪೌಂಡ್‌ಗೆ ಆಕರ್ಷಕ ವರ್ಣಚಿತ್ರಗಳನ್ನು ಮೂಡಿಸಿದ್ದಾರೆ.
ಪಶ್ಚಿಮಘಟ್ಟಗಳ ಪರ್ವತ ಸಾಲು, ಪೂರ್ಣಚಂದ್ರ ತೇಜಸ್ವಿ, ದ.ರಾ.ಬೇಂದ್ರೆ, ಡಾ.ರಾಜಕುಮಾರ್, ಭಗತ್ ಸಿಂಗ್ ಸೇರಿದಂತೆ ಅನೇಕ ಮಹನೀಯರ ಚಿತ್ರಗಳನ್ನು ಗೋಡೆಯ ಮೇಲೆ ಬಿಡಿಸಿದ್ದಾರೆ.
ನಮ್ಮೂರ ಸರ್ಕಾರಿ ಕನ್ನಡ ಶಾಲೆ ಉಳಿಸೋಣ ಬನ್ನಿ ಎಂಬ ಕರೆಯೊಂದಿಗೆ ಗ್ರಾಮೀಣ ಪ್ರದೇಶದ ಯುವಕರು ಸರ್ಕಾರಿ ಶಾಲೆಯ ಬಗ್ಗೆ ಕಾಳಜಿ ವಹಿಸಿರುವುದರಿಂದ ವಿದ್ಯಾರ್ಥಿಗಳನ್ನು ಶಾಲೆಗೆ ಆಕರ್ಷಿಸಲು ಪೂರಕವಾಗಿದೆ.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…