ಶಿವಮೊಗ್ಗ: ಸಿಇಟಿ ಮಾದರಿಯಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಬೇಕು ಎಂದು ಎನ್ಎಸ್ಯುುಐ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಶೀಘ್ರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರಿಂದ ಪಾಲಕರು ಮತ್ತು ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಸಿಲುಕುವುದನ್ನು ತಪ್ಪಿಸಬಹುದು. ಸಿಇಟಿ ಮಾದರಿ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳಿಗೂ ಉಪಯುಕ್ತವಾಗಲಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಸ್ಪಷ್ಟ ಚಿತ್ರಣವಿಲ್ಲದೆ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಸದ್ಯ ಪರೀಕ್ಷೆ ನಡೆಸುವ ಸಾಧ್ಯತೆಗಳಿಲ್ಲ. ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರಬೇಕೆಂದು ಶಿಕ್ಷಣ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರಶ್ನೆಪತ್ರಿಕೆ ಮಾದರಿ ಪ್ರಕಟಿಸಿದರೆ ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಸಿದ್ಧತೆ ನಡೆಸಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎನ್ಎಸ್ಯುುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾಧ್ಯಕ್ಷ ಎಚ್.ಎಸ್.ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ ಇತರರಿದ್ದರು.