ಸಿಎಎ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ

blank

ಮೈಸೂರು: ದೇಶದ ಜನರ ಐಕ್ಯತೆಗೆ ಧಕ್ಕೆ ತರುತ್ತಿರುವ ಎನ್‌ಆರ್‌ಸಿ, ಸಿಎಎ, ಎನ್‌ಪಿಆರ್ ಹಿಂಪಡೆಯಬೇಕೆಂದು ಒತ್ತಾಯಿಸಿ ಅಖಿಲ ಭಾರತ ಸಮಿತಿ ಕರೆ ನೀಡಿರುವ ಪ್ರತಿಭಟನೆ ಬೆಂಬಲಿಸಿ ಎಐಟಿಯುಸಿ ಸಂಘಟನೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಜಮಾವಣೆಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಜನವಿರೋಧಿ, ಕಾರ್ಮಿಕ ವಿರೋಧಿ ಬಜೆಟ್ ಮಂಡಿಸಿದ್ದು, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಲೇಬರ್ ಕೋಡ್‌ಗಳನ್ನು ಬದಲಾಯಿಸುತ್ತಿದೆ. ಅಲ್ಲದೆ ಸೌಹಾರ್ದತೆ ಹಾಗೂ ದುಡಿಯುವ ಜನರ ಐಕ್ಯತೆಗೆ ಧಕ್ಕೆ ತರುವ ಎನ್‌ಆರ್‌ಸಿ, ಸಿಎಎ, ಎನ್‌ಪಿಆರ್ ಕಾಯ್ದೆ ಜಾರಿಗೊಳಿಸಿ ದೇಶದ ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಕಿಡಿಕಾರಿದರು.

ಬೆಲೆ ಏರಿಕೆ, ನಿರುದ್ಯೋಗ, ಕೈಗಾರಿಕೆಗಳ ಮುಚ್ಚುವಿಕೆ, ಕಾಯಂ ಹುದ್ದೆಗಳ ಗುತ್ತಿಗೆಕರಣ, ಪುಡಿಗಾಸಿನ ವೇತನದಿಂದ ಕುಸಿಯುತ್ತಿರುವ ಆದಾಯ, ಕೈಗೆಟುಕದಿರುವ ದುಬಾರಿ ಶಿಕ್ಷಣ, ಆರೋಗ್ಯ ಸೇವೆಗಳು, ರೈತರ ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಕುಸಿತ, ಸಬ್ಸಿಡಿಗಳ ಕಡಿತ ಇತ್ಯಾದಿ ಸಮಸ್ಯೆಗಳಿಗೆ ಕೇಂದ್ರ ಪರಿಹಾರ ನೀಡುತ್ತಿಲ್ಲ. ದಿವಾಳಿಯಾಗುತ್ತಿರುವ ಸಾರ್ವಜನಿಕ ಬ್ಯಾಂಕ್‌ಗಳ ವಿಲೀನಗೊಳಿಸುವ ಮೂಲಕ ಕಾರ್ಪೋರೇಟ್ ಮಾಲೀಕರಿಗೆ ಇನ್ನಷ್ಟು ಮಣೆ ಹಾಕಲು ಮುಂದಾಗಿದೆ.

ದೇಶದ ಶೇ.73ರಷ್ಟು ಸಂಪತ್ತಿನ ಒಡೆಯರಾದ ಕೆಲವೇ ಶ್ರೀಮಂತ ಉದ್ಯಮಿಗಳಿಗೆ ಇನ್ನಷ್ಟು ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಜೆಟ್ ಜನರ ಆಶೋತ್ತರಗಳಿಗೆ ಸ್ಪಂದಿಸುವ ಬದಲು ಮಾಲೀಕರಿಗೆ ಮಾತ್ರ ಒಳಿತನ್ನು ಮಾಡಲು ಹೊರಟಿದೆ. ಇಂತಹ ಜನವಿರೋಧಿ-ಕಾರ್ಮಿಕ ವಿರೋಧಿ ಕೇಂದ್ರದ ಬಜೆಟನ್ನು ದುಡಿಯುವ ಜನರು ತಿರಸ್ಕರಿಸಬೇಕು. ಕೂಡಲೇ ಕಾರ್ಮಿಕರಿಗೆ ಹಾಗೂ ದೇಶದ ಜನರಿಗೆ ವಿರುದ್ಧವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ ಸೇರಿದಂತೆ ಇತರರಿದ್ದರು.

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…