- ಚಾಮರಾಜನಗರ : ಹನೂರು ಭಾಗದಲ್ಲಿ ಗುರುವಾರ ತಡರಾತ್ರಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಿತು. ಹನೂರು ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಸಿಡಿಲಿಗೆ ಹಸು ಬಲಿಯಾಗಿದ್ದರೆ, ಕುರಟ್ಟಿ ಹೊಸೂರು ಗ್ರಾಮದಲ್ಲಿ ಮನೆಯ ಚಾವಣಿ ಹಾರಿಹೋಗಿದ್ದು, ಗೋಡೆಗೆ ಹಾನಿಯಾಗಿದೆ.
ಮಲ್ಲಯ್ಯನಪುರ ಗ್ರಾಮದಲ್ಲಿ ಮಾದೇಶ್ ಎಂಬವರು ಜಮೀನಿನ ಕೊಟ್ಟಿಗೆಯಲ್ಲಿ ಹಸುವನ್ನು ಕಟ್ಟಿ ಹಾಕಿದ್ದರು. ರಾತ್ರಿ 11 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಯಿತು. ಈ ವೇಳೆ ಸಿಡಿಲು ಬಡಿದು ಹಸು ಮೃತಪಟ್ಟಿದೆ. ಪರಿಹಾರಕ್ಕಾಗಿ ಮಾದೇಶ್ ಒತ್ತಾಯಿಸಿದ್ದಾರೆ.- ಕುರಟ್ಟಿಹೊಸೂರು ಗ್ರಾಮದಲ್ಲಿ ಗಾಳಿ ಸಹಿತ ಜೋರು ಮಳೆಯಾಯಿತು. ಪರಿಣಾಮ ಸುಬ್ರಮಣ್ಯಶೆಟ್ಟಿ ಎಂಬುವರ ಮನೆಯ ಚಾವಣಿ ಸಂಪೂರ್ಣ ಹಾರಿಹೋಗಿದ್ದು, ಗೋಡೆ ಬಿರುಕು ಬಿಟ್ಟಿದೆ. ಸದ್ಯ ಮನೆಯಲ್ಲಿದ್ದವರಿಗೆ ಯಾವುದೇ ಅನಾಹುತವಾಗಿಲ್ಲ. ಆದರೆ ಕೆಲ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದೆ. ಇದೇ ಗ್ರಾಮದ ಪೊನ್ನುಶೆಟ್ಟಿ ಎಂಬುವರ ಜಮೀನಿನಲ್ಲಿ 2 ಎಕರೆಯಲ್ಲಿನ ಜೋಳದ ಸಲು ನೆಲಕಚ್ಚಿದೆ. ಆದ್ದರಿಂದ ಸಂಬಂಧಪಟ್ಟ ಅಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಸಂತ್ರಸ್ತರು ಒತ್ತಾಯಿಸಿದ್ದಾರೆ.
ಸಿಡಿಲಿಗೆ ಹಸು ಬಲಿ, ಹಾರಿಹೋದ ಮನೆಯ ಚಾವಣಿ : ನೆಲ ಕಚ್ಚಿದ ಎರಡು ಎಕರೆಯಲ್ಲಿ ಬೆಳೆದಿದ್ದ ಜೋಳ

ಹೋಟೆಲ್ ಸ್ಟೈಲ್ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe
ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…
ಚಿನ್ನದ ಮೇಲೆ ಲೋನ್ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan
Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…
ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips
ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…