More

  ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನ ನೀಡಿ- ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಆಗ್ರಹ

  ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ನೀಡಬೇಕೆಂದು ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಸಂಚಾಲಕ ಬಿ.ವೀರಣ್ಣ ಒತ್ತಾಯಿಸಿದ್ದಾರೆ.
  ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟಬಹುಮತ ಬರಲು ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಇಬ್ಬರ ಪರಿಶ್ರಮ ಬಹಳ ದೊಡ್ಡದಿದೆ. ಅದರಲ್ಲಿ ಹೆಚ್ಚು ಪರಿಶ್ರಮ ಹಾಕಿರುವ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದರು.
  ಸಿದ್ದರಾಮಯ್ಯ ಒಂದು ಸಮುದಾಯದವರನ್ನು ಓಲೈಕೆ ಮಾಡಿಲ್ಲ. ಸರ್ವ ಜನಾಂಗದವರು ಅವರನ್ನು ಮೆಚ್ಚಿದ್ದಾರೆ. ಒಂದು
  ವೇಳೆ ಕಾಂಗ್ರೆಸ್‌ ಹೈಕಮಾಂಡ್ ಸಿದ್ದರಾಮಯ್ಯಗೆ ಸ್ಥಾನವನ್ನು
  ನೀಡದೇ ಮುಂಬರುವ ಲೋಕಸಭಾ ಚುನಾವಣೆ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಅಹಿಂದವರ್ಗದವರು ಕಾಂಗ್ರೆಸ್ ದೂರ ಉಳಿಯುವಆತಂಕ ಎದುರಾಗಲಿದೆ ಎಂದರು.
  ಸರ್ವ ಜನಾಂಗವನ್ನು ಪ್ರೀತಿಸುವ ಸಿದ್ದರಾಮಯ್ಯ ಜನಮಾನಸದಲ್ಲಿ ದೇವರಾಜ ಅರಸು ಎಂದೇ ಕರೆಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿರುವ ಸಿದ್ದರಾಮಯ್ಯ ಅಹಿಂದ ನಾಯಕ. 13 ಬಾರಿ ಬಜೆಟ್ ಮಂಡನೆ ಮಾಡಿರುವ ಹೆಗ್ಗಳಿಕೆ ಹೊಂದಿದ್ದಾರೆ ಹಿಂದಿನ ಐದು ವರ್ಷ ಉತ್ತಮ ಆಡಳಿತ ನೀಡಿದ್ದಾರೆ. ನಾನಾ ಭಾಗ್ಯಗಳ ಮುಖಾಂತರ ನೀಡುವುದರ ಮೂಲಕ ರಾಜ್ಯದ ಜನತೆಯ ನೆರವಾಗಿದ್ದಾರೆ ಎಂದರು.
  ಸುದ್ದಿಗೋಷ್ಠಿಯಲ್ಲಿ ಸಿದ್ದಪ್ಪ ಅಡಾಣಿ, ಮಹೇಶ್ ಪೈಲ್ವಾನ್,
  ಕೆ.ಕಾಳಾಚಾರಿ, ಪ್ರಕಾಶ್, ಕೆ.ರೇವಣಸಿದ್ದಪ್ಪ, ಡಿ.ತಿಪ್ಪಣ್ಣ,
  ಸುರೇಶ್‌ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts