22.8 C
Bengaluru
Saturday, January 18, 2020

ಸಿದ್ದಿ ಜನಾಂಗದಿಂದ ಸಚಿವ ಪ್ರಲ್ಹಾದ ಜೋಶಿಗೆ ಸನ್ಮಾನ

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಹುಬ್ಬಳ್ಳಿ:ಕೇಂದ್ರ ಸರ್ಕಾರ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಸಿದ್ದಿ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ (ಎಸ್​ಟಿ) ಸೇರಿಸಿದ ಹಿನ್ನೆಲೆಯಲ್ಲಿ ಸಿದ್ದಿ ಬುಡಕಟ್ಟು ಭೂ ಹೋರಾಟ ಸಮಿತಿ ಸದಸ್ಯರು ಭಾನುವಾರ ಇಲ್ಲಿನ ಮಯೂರಿ ಎಸ್ಟೇಟ್​ನ ಸ್ವಗೃಹದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಸನ್ಮಾನಿಸಿದರು.

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ನೂರಕ್ಕೂ ಹೆಚ್ಚು ಸಿದ್ದಿ ಜನರು ಸಚಿವರಿಗೆ ಸಿಹಿ ತಿನ್ನಿಸಿ, ಹೂವಿನ ಹಾರ ಹಾಕಿ ಸಂತಸ ಹಂಚಿಕೊಂಡರು. ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಸಿದ್ದಿ ಬುಡಕಟ್ಟು ಹೋರಾಟ ಸಮಿತಿ ಅಧ್ಯಕ್ಷ ಇಬ್ರಾಹಿಂಸಾಬ್ ಗುಂಜಾವತಿ ಮಾತನಾಡಿ, 2003ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಜನಾಂಗದವರನ್ನು ಎಸ್​ಟಿ ಸಮುದಾಯಕ್ಕೆ ಸೇರಿಸಿ ಅಂದಿನ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಧಾರವಾಡ ಜಿಲ್ಲೆ ಕಲಘಟಗಿಯ 3 ಸಾವಿರ ಹಾಗೂ ಬೆಳಗಾವಿ ಜಿಲ್ಲೆ ಖಾನಾಪುರದ 1200ಕ್ಕೂ ಹೆಚ್ಚು ಸಿದ್ದಿ ಜನಾಂಗದವರನ್ನು ಮಾತ್ರ ಸಮುದಾಯಕ್ಕೆ ಸೇರಿಸಿರಲಿಲ್ಲ. ಮೋದಿ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿರುವುದು ಸಂತಸದ ವಿಚಾರ. ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದಷ್ಟು ಬೇಗ ನಮಗೆ ಆದೇಶ ಪ್ರತಿ ನೀಡಬೇಕು ಎಂದು ಮನವಿ ಮಾಡಿದರು. ಹಲವು ವರ್ಷಗಳಿಂದ ಬಾಕಿ ಇದ್ದ ಬೇಡಿಕೆಗೆ ಮೋದಿ ಸರ್ಕಾರ ಸ್ಪಂದಿಸಿದ್ದು, ಫೆಬ್ರವರಿ ಒಳಗೆ ಆದೇಶ ಹೊರಡಿಸಲಾಗುವುದು ಎಂದು ಜೋಶಿ ಭರವಸೆ ನೀಡಿದರು.

ಸಿದ್ದಿ ಸಮಾಜದ ಮುಖಂಡ ಇಮಾಮಸಾಬ್ ಕಕ್ಕೇರಿ, ಗೌಸುಸಾಬ್ ಗುಂಜಾವತಿ, ಮೌಲಾಸಾಬ ಗುಂಜಾವತಿ, ಹಸನಸಾಬ ಗುಂಜಾವತಿ, ಕಾತೇನಬಿ ಕಕ್ಕೇರಿ, ನೂರಜಾನ ಬಿರ್ಜಿ, ಬೀಬಿಜಾನ ಗುಂಜಾವತಿ, ಮತ್ತಿತರರ್ದಿರು.

ಕಾಂಗ್ರೆಸ್​ನಿಂದ ದೊಂಬಿ ಸೃಷ್ಟಿಸುವ ಯತ್ನ
ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಯಾವುದೇ ವ್ಯಕ್ತಿಯ ಪೌರತ್ವ ಕಿತ್ತುಕೊಳ್ಳುವ ಅಂಶವಿಲ್ಲ. ಆದರೆ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಇನ್ನಿತರ ಪಕ್ಷಗಳು ಸುಳ್ಳು ಸುದ್ದಿ ಹಬ್ಬಿಸಿ ದೇಶದಲ್ಲಿ ದೊಂಬಿ ಸೃಷ್ಟಿಸುವ ಪ್ರಯತ್ನ ಮಾಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ಅಧಿವೇಶನ ಐತಿಹಾಸಿಕ ಮಸೂದೆಗಳ ಅಂಗೀಕರಿಸುವ ಮೂಲಕ ಯಶಸ್ವಿಯಾಗಿದೆ. ಮೋದಿ ಅವರ ಮಹತ್ವದ ನಿರ್ಧಾರಗಳನ್ನು ಸಹಿಸಲಾಗದೇ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದರು.

ಹೊಸ ಡಿಸಿಎಂ ಇಲ್ಲ: ಹೊಸ ಉಪಮುಖ್ಯಮಂತ್ರಿ ಸ್ಥಾನ ನೀಡುವ ಕುರಿತ ಪ್ರಸ್ತಾಪ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಶೀಘ್ರದಲ್ಲೇ ರಾಷ್ಟ್ರೀಯ ನಾಯಕರ ಜತೆ ರ್ಚಚಿಸಿ ಸಚಿವ ಸಂಪುಟ ಸಭೆ ವಿಸ್ತರಣೆ ಮಾಡುತ್ತಾರೆ ಎಂದು ಹೇಳಿದರು.

ರಾಹುಲ್, ಸೋನಿಯಾ ನಕಲಿ ಗಾಂಧಿಗಳು: ರಾಹುಲ್ ಗಾಂಧಿ ಉದ್ಧವ್ ಠಾಕ್ರೆ ಆಗಬಹುದು. ಆದರೆ, ಸಾವರ್ಕರ್ ಆಗಲು ಸಾಧ್ಯವೇ ಇಲ್ಲ. ಅನುಕೂಲಕ್ಕೆ ತಕ್ಕಂತೆ ಯಾರೊಂದಿಗೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ರಾಹುಲ್, ಸೋನಿಯಾ, ಪ್ರಿಯಾಂಕಾ, ವಾದ್ರಾ ಇವರೆಲ್ಲ ನಕಲಿ ಗಾಂಧಿಗಳು. ಹಾಗಾಗಿ, ಅವರು ಸಾವರ್ಕರ್ ಮತ್ತಿತರರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದು ಜೋಶಿ ವಾಗ್ದಾಳಿ ಮಾಡಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...