ಸುಸ್ಥಿರ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ

blank

ಬಾಗಲಕೋಟೆ: ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಸಹಕಾರಿ ಸಂಘಗಳ ಆರ್ಥಿಕ ಸಮತೋಲನವನ್ನು ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.

ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ವಿಭಾಗದ ಮಹಿಳಾ ಸಹಕಾರ ಸಂಘಗಳ ಪದಾಽಕಾರಿಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಗುರುವಾರ ಹಮ್ಮಿಕೊಂಡಿದ್ದÀ ರಾಜ್ಯ ಮಟ್ಟದ ಹೈಟೆಕ್ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಸಂಘಟಿತವಾಗಿ ಕಾರ್ಯ ನಿರ್ವಹಿಸಿ, ತಮ್ಮ ನಿರ್ಧಾರ ಶಕ್ತಿಯನ್ನು ಬಳಸಿಕೊಂಡರೆ ಸಹಕಾರಿ ಸಂಘಗಳು ಸಮರ್ಥವಾಗಿ ಬೆಳೆಯಲು ಸಾಧ್ಯ. ಸಂಸ್ಥೆಯ ಲಾಭದಾಯಕ ನಿರ್ವಹಣೆಗೆ ಸಂಚಾಲಕರು ತಮ್ಮ ಜ್ಞಾನ ಮತ್ತು ಅನುಭವವನ್ನು ಬಳಸಿಕೊಳ್ಳಬೇಕು. ಸಹಕಾರಿ ಸಂಘಗಳು ಕೇವಲ ವ್ಯವಹಾರ ನಡೆಸಲು ಮಾತ್ರವಲ್ಲ, ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗೆ ಸಹಕಾರಿಯಾಗಬೇಕು ಎಂದರು.

ಕರ್ನಾಟಕ ಸಹಕಾರ ಕುರಿ ಮಹಾಮಂಡಳಿ ಉಪಾಧ್ಯಕ್ಷ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಕಾಶಿನಾಥ್ ಬಿ. ಹುಡೇದ ಸಹಕಾರಿ ಸಂಘಗಳ ಬೆಳವಣಿಗೆ ಇತಿಹಾಸದ ಕುರಿತಾಗಿ ಮಾತನಾಡಿದರು. ಈ ತರಬೇತಿ ಕಾರ್ಯಕ್ರಮ ಮಹಿಳೆಯರಲ್ಲಿ ಆತ್ಮಸ್ಥೆÊರ್ಯ ವೃದ್ಧಿಸುವುದರ ಜೊತೆಗೆ ಅವರ ನಿರ್ವಹಣಾ ಕೌಶಲಗಳನ್ನು ವೃದ್ಧಿಸಲು ಸಹಾಯ ಮಾಡುತ್ತದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಖಿ ಸ್ಟಾಪ್ ೧ ಸೆಂಟರ್ ನವನಗರದ ಆಡಳಿತಾಽಕಾರಿ ಶಂಕರಮ್ಮ ಜಮ್ಮನಕಟ್ಟಿ ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ನೀಡಿದರು. ಸಖಿ ಸ್ಟಾಪ್ ೧ ಸೆಂಟರ್ ನವನಗರ ಕಾನೂನು ಸಲಹೆಗಾರರಾದ ಸೀಮಾ ಇದ್ದಲಗಿ ಕಾನೂನು ಅರಿವು ಕುರಿತು ಮಾಹಿತಿ ನೀಡಿದರು. ಸ್ವಯಂ ಉದ್ಯೋಗ ತರಬೇತಿದಾರರಾದ ಗೀತಾ ಹಂಪಿಹೊಳಿಮಠ ಸ್ವಯಂ ಉದ್ಯೋಗದ ಕುರಿತು ಮಾಹಿತಿ ಹಂಚಿಕೊ0ಡರು.

ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಸಂಗಣ್ಣ ಜೆ. ಹಂಡಿ, ಸುರೇಶ ಹಾದಿಮನಿ, ಮುತ್ತಪ್ಪ ಬಿ. ಹುಗ್ಗಿ, ಈರಯ್ಯ ಬಿ. ಹಿರೇಮಠ್, ರಂಗಪ್ಪ ಎಲ್. ಮರೆಗುದ್ದಿ, ವಿಜಯಲಕ್ಷಿ÷್ಮÃ ಜಿ. ಪಾಟೀಲ್, ವೀರಯ್ಯ ಎಸ್. ಭದ್ರಗೌಡ ಮತ್ತು ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಪದಾಽಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…