ಸೆಂಟ್ರಲ್ ಜೈಲಿನಲ್ಲಿ ನೇಣು ಬಿಗಿದುಕೊಂಡ ಕೈದಿ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ನಗರದ ಹೊರವಲಯದಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಆತನ ಸಾವಿನ ಬಗ್ಗೆ ಸಂಶಯವಿದೆ ಎಂದು ಕುಟುಂಬದವರು ದೂರಿದ್ದಾರೆ.

ಕಾಳಗಿ ತಾಲೂಕಿನ ಅರಣಕಲ್ ಗ್ರಾಮದ ಸಿದ್ದಪ್ಪ ಶಿವಶರಣಪ್ಪ (34) ಎಂಬುವರೇ ಜೈಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಕೈದಿ. ಸಿದ್ದಪ್ಪ ತನ್ನ ಕೊರಳಿಗೆ ಹಾಕಿಕೊಂಡಿದ್ದ ಶಾಲಿನಿಂದಲೇ ಜೈಲಿನ ಕೋಣೆಯ ಬಾಗಿಲ ಚೌಕಟ್ಟಿಗೆ ನೇಣು ಬಿಗಿದುಕೊಂಡಿದ್ದಾನೆ. ನೇತಾಡುತ್ತಿರುವುದು ನೋಡಿ ಇಳಿಸಿ ಅಸ್ಪತ್ರೆಗೆ ಸಾಗಿಸಿದಾಗ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

2014ರಲ್ಲಿ ಅರಣಕಲ್ದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನು ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗೆ ಆತನ ತೀವ್ರ ಘಾಸಿಗೊಂಡು ಮಾನಸಿಕ ಖಿನ್ನತೆಗೊಳಗಾಗಿದ್ದ. ವೈದ್ಯರಿಗೂ ತೋರಿಸಲಾಗಿತ್ತು. ಮಾನಸಿಕ ಒತ್ತಡದಲ್ಲಿಯೇ ಅತ ನೇಣು ಹಾಕಿಕೊಂಡಿದ್ದಾನೆ ಎಂದು ಜೈಲಿನ ಅಧಿಕಾರಿಗಳು ನೀಡಿರುವ ದೂರಿನಲ್ಲಿ ಹೇಳಿದ್ದಾರೆ. ಆದರೆ, ಆತನ ಕುಟುಂಬದವರು ಇದನ್ನು ನಿರಾಕರಿಸುತ್ತಿದ್ದಾರೆ. ಯಾರೋ ಕಿರುಕುಳ ನೀಡಿದ್ದರಿಂದ ಹೀಗಾಗಿರಬಹುದು, ಈ ಕುರಿತು ಸತ್ಯಾಂಶ ಬಯಲಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಎಸ್ಪಿ ಯದಾ ಮಾಟರ್ಿನ್ ಮಾರ್ಬನ್ಯಾಂಗ್, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ, ಗ್ರಾಮೀಣ ಡಿಎಸ್ಪಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಜಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯನ್ನು ಉಪ ವಿಭಾಗಾಧಿಕಾರಿ ಸಮ್ಮುಖದಲ್ಲಿ ನಡೆಸಿ ವಿಡಿಯೋ ಚಿತ್ರೀಕರಣ ಮಾಡಲಾಯಿತು. ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಫರಹತಾಬಾದ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.