18 C
Bangalore
Thursday, December 5, 2019

ಸೇತುವೆಗೆ ಬರೀ ರೂ. 60 ಸಾವಿರ!

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಧಾರವಾಡ: ಸತತ ಒಂದು ವಾರ ಸುರಿದ ಧಾರಾಕಾರ ಮಳೆಯಿಂದ ಹಾಳಾಗಿರುವ ರಸ್ತೆ, ಸೇತುವೆಗಳ ತಾತ್ಕಾಲಿಕ ದುರಸ್ತಿ ಕೆಲಸವನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಆದರೆ, ಅನುದಾನದ ಕೊರತೆ ಕಾರಣದಿಂದ ಕೆಲಸಗಳು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತಿದೆ.

ಪ್ರಕೃತಿ ವಿಕೋಪ ಪರಿಹಾರ ಮಾರ್ಗಸೂಚಿ ಪ್ರಕಾರ, ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೀಡಾದ ಸೇತುವೆಗೆ ಕೇವಲ 60 ಸಾವಿರ ರೂ. ಕೊಡಲಾಗುತ್ತದೆ. ರಾಜ್ಯ ಹೆದ್ದಾರಿಗೆ ಕಿ.ಮೀ.ಗೆ 1 ಲಕ್ಷ ರೂ. ಮಾತ್ರ ಕೊಡಲು ಅವಕಾಶವಿದೆ. ಹೀಗಾಗಿ, ಸೇತುವೆ ಹಾಗೂ ರಸ್ತೆಗಳ ದುರಸ್ತಿ, ಮರು ನಿರ್ಮಾಣ ವಿಳಂಬವಾಗಬಹುದು ಎನ್ನಲಾಗುತ್ತಿದೆ.

ಕೆಲ ಕಡೆಗಳಲ್ಲಿ ರಸ್ತೆಗಳು ಹಾಳಾಗಿದ್ದರೆ, ಕೆಲವೆಡೆ ಸೇತುವೆಗಳು ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದ್ದವು. ಅನೇಕ ಗ್ರಾಮದ ಜನರು ಸುತ್ತುಬಳಸಿಯೂ ಹೋಗಲಾಗದ ಸ್ಥಿತಿ ನಿರ್ವಣವಾಗಿತ್ತು. ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ನಡೆಸಿದ ಅಧಿಕಾರಿಗಳು, ಈಗ ತಾತ್ಕಾಲಿಕ ದುರಸ್ತಿ ಮಾಡಿಸಲು ಮುಂದಾಗಿದ್ದಾರೆ.

ಧಾರವಾಡ, ಕಲಘಟಗಿ ತಾಲೂಕಿನಲ್ಲಿ ಈವರೆಗಿನ ಸಮೀಕ್ಷೆ ಪ್ರಕಾರ 29 ಕಡೆಗಳಲ್ಲಿ 41.19 ಕಿ.ಮೀ. ರಸ್ತೆ (ಸೇತುವೆ ಸೇರಿ) ಹಾಳಾಗಿದೆ. ಇದರ ದುರಸ್ತಿಗೆ 8.06 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.ಆದರೆ ಎನ್​ಡಿಆರ್​ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ಪಡೆದು ಕೆಲಸ ಮಾಡುವಂತಾದರೆ ಕೆಲ ರಸ್ತೆಗಳನ್ನು ಮಾತ್ರ ದುರಸ್ತಿ ಮಾಡಲು ಅಸಾಧ್ಯ. ಹೀಗಾಗಿ ಅಧಿಕಾರಿಗಳು ಈ ಪರಿಹಾರ ಬರುವವರೆಗೆ ಕಾಯದೆ ಮಾನವೀಯತೆ ದೃಷ್ಟಿಯಿಂದ ಗುತ್ತಿಗೆದಾರರ ಮೂಲಕ ದುರಸ್ತಿ ಕಾರ್ಯ ಮಾಡಿಸಲು ಮುಂದಾಗಿದ್ದಾರೆ.

ಸವದತ್ತಿ ರಸ್ತೆಯಲ್ಲಿ ಇನಾಮಹೊಂಗಲ ಬಳಿ ಸೇತುವೆ ಕುಸಿದ ಪರಿಣಾಮ ಗರಗ-ಬೆಳವಡಿ-ಕರಿಕಟ್ಟಿ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ರಸ್ತೆ ದುರಸ್ತಿ ಕಾರ್ಯ ಬೆಳಗಾವಿ ಜಿಲ್ಲೆ ವ್ಯಾಪ್ತಿಗೆ ಸಂಬಂಧಿಸಿದ್ದರಿಂದ, ಅಲ್ಲಿನ ಅಧಿಕಾರಿಗಳು ದುರಸ್ತಿ ಕಾರ್ಯ ನಡೆಸುವವರೆಗೂ ಧಾರವಾಡದಿಂದ ಪರ್ಯಾಯ ಮಾರ್ಗವಾಗಿಯೇ ಸಂಚರಿಸುವುದು ಅನಿವಾರ್ಯವಾಗಿದೆ.

ಧಾರವಾಡ ತಾಲೂಕಿನ ಎಲ್ಲ ಶಾಶ್ವತ ಕಾಮಗಾರಿಗಳಿಗೆ ಅಂದಾಜು 50.08 ಕೋಟಿ ರೂ. ಅಂದಾಜುಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ರಸ್ತೆಗಳ ಹಾನಿ ವೀಕ್ಷಣೆಗೆ ಇಲಾಖೆಯ ಕಾರ್ಯದರ್ಶಿ ಜಿಲ್ಲೆಗೆ ಆಗಮಿಸಲಿದ್ದು, ಅವರಿಗೆ ಸಹ ಪ್ರಸ್ತಾವ ಸಲ್ಲಿಕೆಯಾಗಲಿದೆ.

ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ತಾತ್ಕಾಲಿಕ ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶಾಶ್ವತ ದುರಸ್ತಿ ಕಾರ್ಯವನ್ನು ಅನುದಾನ ಬಿಡುಗಡೆಯಾದ ಬಳಿಕ ಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...