ಬಳ್ಳಾರಿ : ಬೇವಿನ ಹಾಗೂ ಕೊಬ್ಬರಿ ಎಣ್ಣೆ ಮಿಶ್ರಣ ಮಾಡಿ ಕೈಕಾಲುಗಳಿಗೆ ಹಚ್ಚಿ ಮಲಗಿಕೊಳ್ಳುವುದರಿಂದ ಡೆಂಘೆ ನಿಯಂತ್ರಿಸಬಹುದು ಎಂದು ಡಿಎಚ್ಒ ಡಾ. ವೈ. ರಮೇಶಬಾಬು ಹೇಳಿದರು.
ಇಲ್ಲಿನ ಗಾಂಧಿನಗರ, ನಾಗಲಕೇರಿ ಪ್ರದೇಶಗಳ ಮನೆಗಳಿಗೆ ಈಡಿಸ್ ಈಜಿಪ್ಟ್ ಸೊಳ್ಳೆ ಉತ್ಪತಿ ತಾಣಗಳ ನಿರ್ಮೂಲನಾ ದಿನದ ಅಂಗವಾಗಿ ಶುಕ್ರವಾರ ಭೇಟಿ ನೀಡಿ ಮಾತನಾಡಿದರು. ಡೆಂಘೆ ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಲಕ್ಷಣಗಳ ಆಧರಿಸಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಸಾರ್ವಜನಿಕರು ಮನೆಯ ಒಳಗೆ ಸೊಳ್ಳೆಗಳ ಉತ್ಪತ್ತಿಯನ್ನು ಮಾಡುವ ಫ್ರೀಜ್‌ನ ಹಿಂಭಾಗ, ಅಲಂಕೃತವಾಗಿ ಬಳಸುವ ಮನಿ ಪ್ಲಾಂಟ್ ಕುಂಡಗಳು (ಬಾಟಲ್), ಸ್ನಾನ ಗೃಹದಲ್ಲಿರಬಹುದಾದ ತೊಟ್ಟಿ ಸೇರಿದಂತೆ ಮುಚ್ಚಳ ಮುಚ್ಚಲು ಸಾಧ್ಯವಿಲ್ಲದ ಸಿಮೆಂಟ್ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರು ಖಾಲಿ ಮಾಡಿ, ಶುಚಿಗೊಳಿಸಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್. ಅಬ್ದುಲ್ಲಾ, ಮಾತನಾಡಿ, ವಾರದಲ್ಲಿ ಒಂದು ದಿನ ಶುಕ್ರವಾರ ಡೆಂಘೆ ರೋಗ ಹರಡುವ ಈಡಿಸ್ ಸೊಳ್ಳೆ ನಿರ್ಮೂಲನಾ ದಿನದವಲ್ಲದೆ ಯಾವುದೇ ಜ್ವರ ಪ್ರಕರಣ ವರದಿಯಾದರೂ ಸಹ ವೈದ್ಯಕೀಯ ಸಿಬ್ಬಂದಿಯು ಮನೆ ಭೇಟಿ ಮಾಡಿ, ಶಂಕೀತವೆಂದು ಪರಿಭಾವಿಸಿ ನೀರು ಸಂಗ್ರಹಕಗಳ ಪರೀಕ್ಷೆ, ಜಿಲ್ಲಾ ಕೀಟ ಶಾಸ್ತ್ರಜ್ಞರ ಮೂಲಕ ಸೊಳ್ಳೆ ಸಂಗ್ರಹಿಸಿ ಹೆಚ್ಚಿನ ಪರೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದರು.
ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳಿ
ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್ ಇರಬಹುದು!!
ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….
ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…
ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್!
ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…