More

  ಸೋಮಶೇಖರ ರೆಡ್ಡಿ ವಿರುದ್ಧ ಪ್ರತಿಭಟನೆ

  ಗದಗ: ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಪ್ರಚೋದನಕಾರಿಯಾಗಿ ಮಾತನಾಡಿರುವ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಭಾನುವಾರ ಗದಗ ಬೆಟಗೇರಿ ಅಂಜುಮನ್ ಎ ಇಸ್ಲಾಂ ಸಂಸ್ಥೆ ವತಿಯಿಂದ ಪ್ರತಿಭಟನೆ ಮಾಡಲಾಯಿತು.

  ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅವರ ಪ್ರತಿಕೃತಿ ದಹಿಸಿ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

  ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮಾಡುವವರಿಗೆ ಬಹಿರಂಗವಾಗಿ ಜೀವ ಬೇದರಿಕೆ ಹಾಕಿ ಎಚ್ಚರಿಕೆ ನೀಡಿದ್ದಾರೆ. ಸಮಾಜದ ಸ್ವಾಸ್ಥ ಮತ್ತು ಶಾಂತಿಗೆ ಭಂಗ ತರುವ ಪ್ರಯತ್ನ ನಡೆಸಿದ್ದಾರೆ. ಆದ್ದರಿಂದ ಕೂಡಲೇ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.

  ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ನಾಡಿನಲ್ಲಿ ಜಾತಿ ಧರ್ಮದ ವಿಷ ಬೀಜ ಬಿತ್ತುತ್ತಿರುವ ಶಾಸಕರ ಮೇಲೆ ಕಠಿಣ ಕ್ರಮ ಕೈಗೊಂಡು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸೋಮಶೇಖರರೆಡ್ಡಿ ವಿರುದ್ಧ ಕ್ರಮಕೈಗೊಳ್ಳದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾಗತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ನಂತರ ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು.

  ಅಂಜುಮನ್-ಎ-ಇಸ್ಲಾಂ ಸಂಸ್ಥೆ ಅಧ್ಯಕ್ಷ ಮಹ್ಮದ್​ಯುೂಸೂಫ್ ನಮಾಜಿ, ಉಪಾಧ್ಯಕ್ಷ ಬಾಬಾಜಾನ್ ಬಳಗಾನೂರ, ಕಾರ್ಯದರ್ಶಿ ಇಮ್ತಿಯಾಜ್ ಮಾನ್ವಿ, ಬಾಷಾಸಾಬ ಮಲ್ಲಸಮುದ್ರ, ಮುನ್ನಾ ಶೇಖ, ಅನ್ವರ್ ಶಿರಹಟ್ಟಿ, ಉಮರ್​ಫಾರೂಕ್ ಹುಬ್ಬಳ್ಳಿ, ಎಂ.ಎನ್. ಶಾಲಗಾರ, ಜುನೇದ ಉಮಚಗಿ, ಇಲಿಯಾಸ್ ಕೈರಾತಿ, ಮುಜಫರ್ ಮುಲ್ಲಾ, ಮೆಹಬೂಬ ಧಾರವಾಡ, ಎಂ.ಡಿ. ಮಾಳಿಕೊಪ್ಪ, ವಿನೋದ ಶಿದ್ಲಿಂಗ, ಮಹ್ಮದಸಾಬ ಮುಲ್ಲಾ, ಶಾಬಾಜ್ ಮುಲ್ಲಾ, ಮಕ್ತುಂ ಮುಲ್ಲಾ, ರಿಯಾಜ್ ಪಾಮಡಿ, ಮಲ್ಲಿಕ್ ಹಂಪಾಪಟ್ಟಣ, ನಿಜಾಮುದ್ದಿನ ಕಾತರಕಿ, ಅನ್ವರ್ ಬಾಗೇವಾಡಿ ಮತ್ತಿತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts