ಸೋಲು-ಗೆಲುವಿಗೆ ಕಾಂಗ್ರೆಸ್ ಹೊಣೆಯಲ್ಲ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಶಿರಸಿ: ರಾಷ್ಟ್ರ ನಾಯಕರ ನಿರ್ಣಯದಂತೆ ಜಿಲ್ಲೆಯಲ್ಲಿ ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡ್ತುತೇವೆ, ಗೆಲುವಿಗೆ ಶ್ರಮಿಸುತ್ತೇವೆ. ಆದರೆ, ಚುನಾವಣೆಯ ನಂತರ ಸೋಲು ಗೆಲುವಿಗೆ ಕಾಂಗ್ರೆಸ್​ಅನ್ನು ದೂಷಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಜೆಡಿಎಸ್ ನಾಯಕರಿಗೆ ಸೂಚಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿದ್ಯಾಧಿರಾಜ ಕಲಾ ಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಪರಸ್ಪರ ವಿಶ್ವಾಸ ಮುಖ್ಯ. ಈ ಹಿಂದಿನ ಯಾವ ಚುನಾವಣೆಗಳಲ್ಲಿಯೂ ಈ ರೀತಿಯ ವಾತಾವರಣವಿರಲಿಲ್ಲ. ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು, ಕಾರ್ಯಕರ್ತರು ಪರಸ್ಪರ ದೂಷಿಸಿಕೊಂಡಿದ್ದರು. ನನ್ನ ಬಗ್ಗೂ ಆರೋಪಗಳನ್ನು ಹೇಳಿದ್ದರು. ಈ ಚುನಾವಣೆಯ ಸಲುವಾಗಿ ನಾವು ಹಿಂದಿನ ಎಲ್ಲ ಘಟನೆಗಳನ್ನು ಮರೆಯುತ್ತೇವೆ. ಒಗ್ಗಟ್ಟಿನಿಂದ ಜೆಡಿಎಸ್ ಗೆಲ್ಲಿಸಲು ಶ್ರಮಿಸುತ್ತೇವೆ. ಆದರೆ, ಯಾವ ಕಾರಣಕ್ಕೂ ಕಾಂಗ್ರೆಸ್ ಕಾರ್ಯಕರ್ತರ ಆತ್ಮ ವಿಶ್ವಾಸ, ಒಗ್ಗಟ್ಟು ನಾಶವಾಗುವ ಸ್ಥಿತಿ ಬರಬಾರದು. ಚುನಾವಣೆಯ ಬಳಿಕ ದೇಶಪಾಂಡೆ ಕೈಕೊಟ್ಟರು, ಹೆಬ್ಬಾರ ಮೋಸ ಮಾಡಿದರು ಎಂಬ ಆರೋಪ ನಮ್ಮ ಮೇಲೆ ಬರಬಾರದು. ಪರಸ್ಪರ ಆರೋಪಿಸುವ ಆಟ ನಡೆಯಬಾರದು’ ಎಂದು ಈಗಲೇ ರಕ್ಷಣಾತ್ಮಕ ಬ್ಯಾಟಿಂಗ್ ನಡೆಸಿದರು.

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಶಕ್ತಿ. ಈ ಶಕ್ತಿಯನ್ನು ಕೇವಲ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಆಗಿದೆ ಎಂಬ ಕಾರಣಕ್ಕಾಗಿ ಜೆಡಿಎಸ್​ಗಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈ ಒಪ್ಪಂದಕ್ಕೆ ಗೌರವ ಕೊಡಬೇಕಾದುದು ಪ್ರತಿಯೊಬ್ಬ ಕಾರ್ಯಕರ್ತರ ಜವಾಬ್ದಾರಿ. ಗೆಲುವು ಸುಮ್ಮನೆ ಸಾಧ್ಯವಿಲ್ಲ. ಅದಕ್ಕೆ ಪೂರಕ ವಾತಾವರಣ ಅಗತ್ಯತೆ ಇದೆ. ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಆರ್. ನಾಯ್ಕ ಒಟ್ಟಿಗೆ ಕುಳಿತು ಕಾರ್ಯ ಯೋಜನೆ ಹಾಕಿಕೊಳ್ಳಲಿ ಎಂದು ಹೇಳಿದರು.

ಜೆಡಿಎಸ್ ಪ್ರಮುಖ ಬಸವರಾಜ ಹೊರಟ್ಟಿ ಮಾತನಾಡಿ, ‘ಕಾಂಗ್ರೆಸ್​ಗೆ ಟಿಕೆಟ್ ತಪ್ಪಿದ್ದು ಆರ್. ವಿ. ದೇಶಪಾಂಡೆ ಅವರಿಗೆ ನೋವಾಗಿದೆ. ಈ ಬಗ್ಗೆ ನನಗೂ ಅರಿವಿದೆ. ಆದರೆ, ಮೈತ್ರಿ ಧರ್ಮ ಪಾಲಿಸಲೇಬೇಕಾಗಿದ್ದು ನಮ್ಮ ಕರ್ತವ್ಯ. ಮೈತ್ರಿಯಲ್ಲಿ ಸಣ್ಣ ಸಣ್ಣ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ಆದರೆ, ರಾಷ್ಟ್ರದ ಹಿತದೃಷ್ಠಿಯಿಂದ ನಾವು ಎಲ್ಲವನ್ನೂ ಮರೆಯಬೇಕಾಗುತ್ತದೆ. ಈ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಭಿನ್ನಾಭಿಪ್ರಾಯಗಳು ಬಿಜೆಪಿ ಪಕ್ಷದಲ್ಲಿಯೂ ಇದ್ದು, ಅದರ ಲಾಭವನ್ನು ಪಡೆಯುವತ್ತ ನಾವು ಯತ್ನಿಸಬೇಕಾಗಿದೆ’ ಎಂದರು.

ಅಭ್ಯರ್ಥಿ ಆನಂದ ಆಸ್ನೋಟಿಕರ್ ಮಾತನಾಡಿ, ‘ಕಾಂಗ್ರೆಸ್ ಬೆಂಬಲ ಇಲ್ಲದೇ ನನ್ನ ಗೆಲುವು ಅಸಾಧ್ಯ. ಸಂಸದನಾದ ಮೇಲೆ ಕಾಂಗ್ರೆಸ್ ಪ್ರಮುಖರು ನನ್ನ ರಾಜೀನಾಮೆಯನ್ನು ಕೇಳಿದರೂ ನಾನು ನೀಡಲು ಸಿದ್ಧನಿದ್ದೇನೆ’ ಎಂದರು.

ಶಾಸಕರಾದ ಶಿವರಾಮ ಹೆಬ್ಬಾರ, ವಿಧಾನ ಪರಿಷತ್ ಸದಸ್ಯ ಶ್ರೀಕಾಂತ ಘೊಟ್ನೇಕರ, ಮಾಜಿ ಶಾಸಕರಾದ ಎಚ್.ಎನ್. ಕೋನರೆಡ್ಡಿ, ಶಾರದಾ ಶೆಟ್ಟಿ, ಜೆ. ಡಿ. ನಾಯ್ಕ, ಯು. ಆರ್. ಸಭಾಪತಿ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಆರ್. ನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಇತರರಿದ್ದರು.

ಎಂಪಿ ಮಾಡುವುದು ನನ್ನ ಕೈಲಿಲ್ಲ:

ಜೆಡಿಎಸ್ ಬೆಂಬಲಿಸುತ್ತಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಪಸ್ವರ ಕೇಳಿಬರುತ್ತಿರುವುದು ಸತ್ಯ. ಆದರೆ, ರಾಷ್ಟ್ರ ಮಟ್ಟದಲ್ಲಿ ನಿರ್ಣಯವಾದಾಗ ಹೊಂದಿಕೊಂಡು ಹೋಗುವುದು ಅನಿವಾರ್ಯ ಎಂದು ಆರ್. ವಿ. ದೇಶಪಾಂಡೆ ಹೇಳಿದರು. ಕಾರ್ಯಕ್ರಮದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು,‘ಸಮ್ಮಿಶ್ರ ಸರ್ಕಾರದಲ್ಲಿ ಕಳೆದ ಒಂದು ವರ್ಷದಿಂದ ಉತ್ತಮ ಕಾರ್ಯಕ್ರಮಗಳನ್ನು ನೀಡ್ತುತಿದ್ದೇವೆ. ಈ ಮೈತ್ರಿಯಿಂದ ಕಾಂಗ್ರೆಸ್ ಪ್ರಬಲವಾಗುತ್ತದೆಯೋ, ದುರ್ಬಲವಾಗುತ್ತದೆಯೋ ಮುಂದಿನ ದಿನಗಳಲ್ಲಿ ಗೊತ್ತಾಗಬೇಕು. ಆದರೆ, ಇಂದು ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವುದು ಅನಿವಾರ್ಯ. ಆನಂದ ಅಸ್ನೋಟಿಕರ್​ಗೆ ಮಾತ್ರವಲ್ಲ, ಅವರ ಕುಟುಂಬಕ್ಕೂ ಈ ಹಿಂದೆ ನಾನು ಆಶೀರ್ವಾದ ಮಾಡಿದ್ದೆ. ಈಗ ಎಂಪಿಯನ್ನಾಗಿಸುವುದು ನನ್ನ ಕೈಲಿಲ್ಲ. ಜನರ ಕೈಲಿದೆ’ ಎಂದರು.

ಇದೊಂದು ವಿಲಕ್ಷಣ ಸನ್ನಿವೇಶ :‘ಯಾವುದೇ ಪರಿಸ್ಥಿತಿ ಬಂದರೂ ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಟಿಕೆಟ್ ಕೈ ತಪ್ಪದಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ನನಗೆ ಆದೇಶಿಸಿದ್ದರು. ಆದರೆ, ರಾಷ್ಟ್ರಮಟ್ಟದ ಹೊಂದಾಣಿಕೆಯ ನಿರ್ಧಾರದ ಮುಂದೆ ನಾನು ಏನೂ ಮಾಡಲಾಗಿಲ್ಲ. ಈ ಬಗ್ಗೆ ಕಾರ್ಯಕರ್ತರ ಕ್ಷಮೆ ಯಾಚಿಸುತ್ತೇನೆ ’ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು.

ನಗರದ ವಿದ್ಯಾಧಿರಾಜ ಕಲಾ ಕ್ಷೇತ್ರದಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಹಲವಾರು ಬಾರಿ ಗೆದ್ದಿದ್ದೇನೆ, ಸೋತೂ ಅನುಭವ ಇದೆ. ಆದರೆ, ನನ್ನ ರಾಜಕೀಯ ಜೀವನದಲ್ಲಿ ಇಂತಹ ವಿಲಕ್ಷಣ ಸನ್ನಿವೇಶ ಎದುರಿಸ್ತುತಿರುವುದು ಮೊದಲ ಬಾರಿ ಎಂದರು.

ಕಳೆದ ನಾಲ್ಕು ತಿಂಗಳ ಈಚೆ ಯಾರು ನನ್ನ ಬಗ್ಗೆ ಏನು ಮಾತನಾಡಿದ್ದಾರೆ ಎಂಬುದನ್ನು ನಾನು ನೆನಪು ಮಾಡಿಕೊಳ್ಳುವುದಿಲ್ಲ. ಹಾಗೊಮ್ಮೆ ನೆನಪು ಮಾಡಿಕೊಂಡರೆ ಚುನಾವಣೆ ಪ್ರಚಾರಕ್ಕೆ ತೆರಳುವುದು ಕಷ್ಟವಾಗುತ್ತದೆ. ಈ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸುವುದು ನನ್ನ ಕರ್ತವ್ಯವಾಗಿದ್ದು, ಅದನ್ನು ನಿಷ್ಠೆಯಿಂದ ಮಾಡುತ್ತೇನೆ’ ಎಂದರು.

ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ,‘ಜೆಡಿಎಸ್ ಮತ್ತು ನಮ್ಮ ಸ್ಥಿತಿಯನ್ನು ಹೋಲಿಕೆ ಮಾಡಿಕೊಂಡಾಗ ಕಾಂಗ್ರೆಸ್​ಗೆ ಸಮರ್ಥವಾಗಿ ಚುನಾವಣೆ ಎದುರಿಸುವ ಶಕ್ತಿ ಇದೆ. ಮೈತ್ರಿ ಹೊಂದಾಣಿಕೆ ಮಾಡಿಕೊಂಡಾಗ ಒಂದೆಡೆ ಲಾಭ, ಇನ್ನೊಂದೆಡೆ ಹಾನಿ ಸಹಜ. ರಾಜ್ಯದ 21 ಕಡೆಗಳಲ್ಲಿ ಕಾಂಗ್ರೆಸ್​ನ್ನು ಜೆಡಿಎಸ್ ಪಕ್ಷ ಬೆಂಬಲಿಸುವ ಕಾರಣ ಜಿಲ್ಲೆಯಲ್ಲಿ ನಾವು ಸಹಕರಿಸಲೇಬೇಕಿದೆ’ ಎಂದರು.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....