ಸೌಲಭ್ಯ ಬಳಸಿಕೊಂಡು ಉನ್ನತ ಹುದ್ದೆ ಅಲಂಕರಿಸಿ

blank

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು ಇವುಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.


ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕಿನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರಕುವಂತೆ ಮಾಡಲು ದಿ.ಮಹದೇವಪ್ರಸಾದ್ ಗ್ರಾಮಾಂತರ ಪ್ರದೇಶಗಳಲ್ಲಿಗೂ ಕಾಲೇಜು ಆರಂಭಿಸಿದ್ದರು. ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಸವಲತ್ತುಗಳ ಒದಗಿಸಿಕೊಡಲಾಗುವುದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಹೇಳಿದರು.


ಪ್ರಾಂಶುಪಾಲ ಡಾ. ಎ.ಆರ್ ಮದನ್ ಕುಮಾರ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಕೆ. ಚಾಮರಾಜು, ಕಚೇರಿ ಅಧೀಕ್ಷಕ ಎನ್.ಪುಟ್ಟಬುದ್ದಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಟಿ.ಆರ್ ಗಿರೀಶ್, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಎಸ್‌ಆರ್‌ಎಸ್ ರಾಜಶೇಖರ್, ತಾಪಂ ಮಾಜಿ ಸದಸ್ಯ ಎಚ್.ಎನ್ ಬಸವರಾಜು, ಪುರಸಭೆ ಸದಸ್ಯ ಕುಮಾರ್, ಮಾಜಿ ಸದಸ್ಯ ಸುರೇಂದ್ರ, ಕಲಾವಿದ ಮಿಮಿಕ್ರಿ ಗೋಪಿ, ತಬಲವಾದಕ ರಘುನಾಥ್ ಸೇರಿದಂತೆ ಇತರರು ಇದ್ದರು.

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…