21 C
Bengaluru
Wednesday, January 22, 2020

ಸ್ಟಾಕ್ ಇದ್ದರೆ ಹೊರಗಿನಿಂದ ತರಿಸುವುದೇಕೆ ?

Latest News

ಅರಸೀಕೆರೆ ತಾಲೂಕಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಅವ್ಯವಹಾರ ಆರೋಪ ತನಿಖೆ ನಡೆಸಿ ವಾರದೊಳಗೆ ವರದಿ‌ ಸಲ್ಲಿಸಿ ಎಂದು ಸೂಚಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ಹಾಸನ: ಅರಸೀಕೆರೆ ತಾಲೂಕಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಅವ್ಯವಹಾರ ನಡೆದ ಆರೋಪವಿದ್ದು ತನಿಖೆ ನಡೆಸಿ ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸಚಿವ...

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಹೊತ್ತು 6 ಕಿ.ಮೀ ಸಾಗಿ ಆಸ್ಪತ್ರೆಗೆ ದಾಖಲಿಸಿದ ಯೋಧರ ತಂಡ

ಬಿಜಾಪುರ್​: ಸಿಆರ್​ಪಿಎಫ್​ ಯೋಧರ ತಂಡವೊಂದು ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಮಂಚದ ಮೇಲೆ ಹಾಕಿಕೊಂಡು ಸುಮಾರು 6 ಕಿ.ಮೀ ದೂರದ ಆಸ್ಪ್ರತೆಗೆ ನೆಡದುಕೊಂಡೇ...

ನೇಪಾಳ ದುರಂತ| ಮೂವರು ಮಕ್ಕಳ ಹುಟ್ಟುಹಬ್ಬಕ್ಕೆ ತೆರಳಿದ್ದ ಕೇರಳ ಕುಟುಂಬ ಮರಳಿದ್ದು ಶವವಾಗಿ

ಕೊಚ್ಚಿ: ನೇಪಾಳ ಪ್ರವಾಸಕ್ಕೆಂದು ತೆರಳಿ ಹೋಟೆಲ್​ವೊಂದರಲ್ಲಿ ದುರಂತ ಸಾವಿಗೀಡಾದ ಕೇರಳ ಮೂಲ ಕುಟುಂಬದ ಕರುಣಾಜನಕ ಕತೆಯಿದು. ಮೃತ ತಿರುವನಂತಪುರ ನಿವಾಸಿ ಪ್ರವೀಣ್​ ಮತ್ತು ಸರಣ್ಯ...

ಸರ್ಕಾರಿ ಆಸ್ಪತ್ರೆಗಳಲ್ಲಿರುವ ಉಪಕರಣಗಳಿಗೆ ಉಸಿರು ತುಂಬಿ!

ದಾವಣಗೆರೆ: ರಾಜ್ಯದಲ್ಲಿ ಸರಿಸುಮಾರು 3 ಸಾವಿರ ಸರ್ಕಾರಿ ಆಸ್ಪತ್ರೆಗಳಿದ್ದು, ನಿರ್ವಹಣೆ ಕೊರತೆ ಕಾರಣ ಬಹುತೇಕ ಆಸ್ಪತ್ರೆಗಳಲ್ಲಿನ ಉಪಕರಣಗಳು ಜೀವ ಕಳೆದುಕೊಂಡಿವೆ. ಹೀಗಾಗಿ ಸಾವಿರಾರು ರೋಗಿಗಳು...

ಕುಮಾರಸ್ವಾಮಿ ದುಷ್ಕರ್ಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎನ್ನುವ ಭಾವನೆ ಮೂಡುತ್ತಿದೆ: ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

ಹಾಸನ: ಮಂಗಳೂರು ಬಾಂಬ್ ಪತ್ತೆ ಪ್ರಕರಣದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿರುವ ಅನುಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮೀಣಾಭಿವೃದ್ಧಿ ಸಚಿವ...

ಹಾವೇರಿ: ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಮುಂದುವರಿದಿದ್ದು, ರೈತರು ಗೊಬ್ಬರಕ್ಕಾಗಿ ಪರದಾಡುವಂತಾಗಿದೆ. ಆದರೂ ಅಧಿಕಾರಿಗಳು ಗೊಬ್ಬರದ ಕೊರತೆಯಿಲ್ಲ ಎನ್ನುತ್ತ ರೈತರು, ಚುನಾಯಿತ ಪ್ರತಿನಿಧಿಗಳ ದಾರಿ ತಪ್ಪಿಸುತ್ತಿದ್ದಾರೆ.
ಹಾವೇರಿಯಲ್ಲಿರುವ ರಾಜ್ಯ ಮಾರಾಟ ಮಹಾಮಂಡಳದಲ್ಲಿ 1,033.45 ಮೆಟ್ರಿಕ್​ಟನ್ ಗೊಬ್ಬರ ದಾಸ್ತಾನಿದೆ ಎಂದು ಅಧಿಕಾರಿಗಳು ಲಿಖಿತವಾಗಿ ‘ವಿಜಯವಾಣಿ’ಗೆ ಮಾಹಿತಿ ನೀಡಿದ್ದಾರೆ. ಆದರೆ, ಜಿಲ್ಲೆಯ ರಾಣೆಬೆನ್ನೂರ, ಹಾವೇರಿ, ರಟ್ಟಿಹಳ್ಳಿ, ಬ್ಯಾಡಗಿ, ಶಿಗ್ಗಾಂವಿ, ಸವಣೂರ ತಾಲೂಕುಗಳಲ್ಲಿ ಗುರುವಾರವೂ ಯೂರಿಯಾ ರಸಗೊಬ್ಬರ ರೈತರಿಗೆ ಲಭ್ಯವಾಗಿಲ್ಲ. ಈ ಕುರಿತು ‘ವಿಜಯವಾಣಿ’ ರಿಯಾಲಿಟಿ ಚೆಕ್ ನಡೆಸಿದ್ದು, ಜಿಲ್ಲಾಡಳಿತ ಭವನದ ಕೂಗಳತೆ ದೂರದಲ್ಲಿರುವ ದೇವಗಿರಿಯಲ್ಲಿಯೇ ಗೊಬ್ಬರ ಲಭ್ಯವಾಗಿಲ್ಲ. ಈ ಕುರಿತು ಅಲ್ಲಿನ ಜಿಪಂ ಸದಸ್ಯ ವಿರೂಪಾಕ್ಷಪ್ಪ ಕಡ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ‘ಗೊಬ್ಬರ ಕೊಡಿಸಿ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದರು.
ದೇವಿಹೊಸೂರ ಸೊಸೈಟಿಯಲ್ಲಿ ಗೊಬ್ಬರ ದೊರೆಯದೆ ಅಲ್ಲಿನ ರೈತರು ಹಾನಗಲ್ಲ ತಾಲೂಕಿನಿಂದ 10 ರೂ. ಹೆಚ್ಚಿನ ದರ ನೀಡಿದ್ದಲ್ಲದೇ, ಹೆಚ್ಚುವರಿ ಸಾರಿಗೆ ವೆಚ್ಚ ಭರಿಸಿ ಗೊಬ್ಬರ ತಂದಿದ್ದಾರೆ ಎಂದು ದೇವಿಹೊಸೂರ ಗ್ರಾಮದ ನಿಂಗನಗೌಡ ಗೌಡಗೇರಿ ತಿಳಿಸಿದರು. ಅಗಡಿ ಗ್ರಾಮದ ಸೊಸೈಟಿಯಲ್ಲಿ ಕಳೆದೊಂದು ವಾರದಿಂದ ಯೂರಿಯಾ ಲಭ್ಯವಾಗಿಲ್ಲ. ಯೂರಿಯಾ ಗೊಬ್ಬರದ ಜೊತೆಗೆ ‘ಕಾಂಪ್ಲೆಕ್ಸ್ ಲಿಂಕ್’ ಮಾಡಿದ್ದರಿಂದ ರೈತರು ಅದನ್ನು ಪಡೆಯಲು ನಿರಾಕರಿಸಿದ್ದರು. ಹೀಗಾಗಿ ಸೊಸೈಟಿಯವರು ಗೊಬ್ಬರ ಖರೀದಿಗೆ ಮುಂದಾಗಿರಲಿಲ್ಲ. ಗೊಬ್ಬರದ ಜೊತೆಗೆ ಯಾವುದೇ ಲಿಂಕ್ ಕೊಡುವುದಿಲ್ಲ ಎಂದು ಗುರುವಾರ ಅಧಿಕಾರಿಗಳು ಭರವಸೆ ನೀಡಿದ ನಂತರ ಮಧ್ಯಾಹ್ನ ಗೊಬ್ಬರ ತರಲು ಸೊಸೈಟಿ ಕಾರ್ಯದರ್ಶಿ ಹೋಗಿದ್ದಾರೆ ಎಂದು ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ತಿಳಿಸಿದರು.
ದಾಸ್ತಾನಿದ್ದರೇ ಪೂರೈಸಿಲ್ಲವೇಕೆ ?: ಕಳೆದೊಂದು ವಾರದಿಂದ ಜಿಲ್ಲೆಯ ಹಾವೇರಿ, ರಾಣೆಬೆನ್ನೂರ, ಶಿಗ್ಗಾಂವಿ, ಬ್ಯಾಡಗಿ, ಸವಣೂರ, ರಟ್ಟಿಹಳ್ಳಿ ಸಹಕಾರಿ ಸಂಘಗಳಲ್ಲಿ, ಖಾಸಗಿ ಅಗ್ರೋ ಕೇಂದ್ರಗಳಲ್ಲಿ ಗೊಬ್ಬರವೇ ಸಿಗುತ್ತಿಲ್ಲ. ಈ ಕುರಿತು ರೈತರು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ. ಗೊಬ್ಬರ ದಾಸ್ತಾನಿದ್ದರೆ ಪೂರೈಕೆಗೆ ಅಧಿಕಾರಿಗಳು ಮುಂದಾಗಬೇಕಿತ್ತು. 1 ಸಾವಿರಕ್ಕೂ ಅಧಿಕ ಟನ್ ದಾಸ್ತಾನಿದೆ ಎನ್ನುವ ಅಧಿಕಾರಿಗಳು, ಬುಧವಾರ ‘ವಿಜಯವಾಣಿ’ ಯೂರಿಯಾ ಗೊಬ್ಬರದ ಕೊರತೆಯ ಕುರಿತು ರಿಯಾಲಿಟಿ ಚೆಕ್ ಆರಂಭಿಸುತ್ತಿದ್ದಂತೆ ಬಾಗಲಕೋಟ, ಯಾದಗಿರಿಯಿಂದ ಗೊಬ್ಬರ ತರಿಸಲಾಗುತ್ತಿದೆ ಎಂದಿದ್ದರು. ಅದರಂತೆ ಬಾಗಲಕೋಟ ಜಿಲ್ಲೆಯಿಂದ 5 ಲಾರಿಯಲ್ಲಿ ಯೂರಿಯಾವನ್ನು ರಾಜ್ಯ ಮಾರಾಟ ಮಹಾಮಂಡಳದ ಗೋದಾಮಿಗೆ ತರಿಸಲಾಗಿದೆ.
ರಿಯಾಲಿಟಿ ಚೆಕ್: ತಾಲೂಕು ಸಹಾಯಕ ಕೃಷಿ ನಿರ್ದೇಶಕ ಆರ್.ಕೆ. ಕುಡುಪಲಿ ಅವರನ್ನು ಯೂರಿಯಾ ಗೊಬ್ಬರ ಎಲ್ಲಿದೆ ಕೊಡಿಸಿ ಎಂದು ‘ವಿಜಯವಾಣಿ’ ಪ್ರಶ್ನಿಸಿದಾಗ ಹಾವೇರಿಯಲ್ಲಿರುವ ಗ್ರೋಮೋರ್, ಕೋರಮಂಡಲ್ ಇಂಟರ್ ನ್ಯಾಶನಲ್ ಲಿಮಿಟೆಡ್ ಎಂಬ ಮಳಿಗೆಯಲ್ಲಿದೆ ತೆಗೆದುಕೊಳ್ಳಿ ಎಂದರು. ಅಲ್ಲಿ ಹೋಗಿ ವಿಚಾರಿಸಿದಾಗ ನಮ್ಮಲ್ಲಿ 20 ಚೀಲ ದಪ್ಪ ಹರಳಿನ ಯೂರಿಯಾ ಗೊಬ್ಬರವಿದೆ. 2 ಚೀಲ ಗೊಬ್ಬರಕ್ಕೆ 1 ಚೀಲ ರೈತ ಬೂಸ್ಟರ್ ಲಿಂಕ್ ಗೊಬ್ಬರವನ್ನು ಪಡೆದುಕೊಳ್ಳುವುದು ಕಡ್ಡಾಯ. ಅದರ ಬೆಲೆ 515 ರೂ. ಯೂರಿಯಾದ ಬೆಲೆ 266 ರೂ. ಎಂದರು. ಲಿಂಕ್ ಇಲ್ಲದೇ ಕೊಡಿ ಎಂದರೆ ಅವರು ಕೊಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.
ಅಧಿಕಾರಿಗಳ ಉತ್ತರವಿದು: ಹಾವೇರಿ ಜಿಲ್ಲೆಯಲ್ಲಿ 2019ರ ಮುಂಗಾರು ಹಂಗಾಮಿಗೆ ಬೆಳೆಗಳಿಗೆ ಯೂರಿಯಾ ಮೇಲು ಗೊಬ್ಬರ ಕೊಡುವ ಕಾರ್ಯ ಪ್ರಾರಂಭವಾಗಿದೆ. ಅಗತ್ಯವಿರುವ ದಾಸ್ತಾನು ಲಭ್ಯವಿದೆ. ರೈತರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ. ಸದ್ಯ ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳದಲ್ಲಿ 1033.45 ಮೆ.ಟನ್ ರಸಗೊಬ್ಬರ ಲಭ್ಯವಿದ್ದು, ಅವಶ್ಯವಿರುವ ಸಹಕಾರ ಸಂಘಗಳಿಗೆ ಬೇಡಿಕೆಗನುಗುಣವಾಗಿ ಪೂರೈಕೆ ಮಾಡಲಾಗುತ್ತಿದೆ. ಅದಲ್ಲದೆ ಬಾಗಲಕೋಟೆ ಜಿಲ್ಲೆಯಿಂದ 500 ಟನ್, ಯಾದಗಿರಿ ಜಿಲ್ಲೆಯಿಂದ 1,030 ಟನ್ ಸೇರಿ ಒಟ್ಟು 1.530 ಟನ್ ರಸಗೊಬ್ಬರ ಇಂದು ಪೂರೈಕೆಯಾಗಲಿದೆ.
ರಾಷ್ಟ್ರೀಯ ಕೆಮಿಕಲ್ ಫರ್ಟಿಲೈಸರ್ ಸಂಸ್ಥೆಯಿಂದ 2 ಸಾವಿರ ಟನ್ ರಸಗೊಬ್ಬರ ಮತ್ತು ಇಫ್ಕೋ ಸಂಸ್ಥೆಯಿಂದ 1,500 ಟನ್ ರಸಗೊಬ್ಬರ ಆ. 3ರಂದು ಆಗಮಿಸಲಿದೆ. ಈ ರಸಗೊಬ್ಬರವು ಜಿಲ್ಲೆಯಲ್ಲಿ ಅವಶ್ಯಕವಿರುವ ವಿವಿಧ ಸಹಕಾರ ಸಂಘಗಳು, ಖಾಸಗಿ ಮಾರಾಟಗಾರರಿಗೆ ಪೂರೈಕೆ ಮಾಡಲಾಗುತ್ತಿದೆ. ಹೀಗೆ ಒಟ್ಟಾರೆ ಜಿಲ್ಲೆಗೆ 6,063.45 ಟನ್ ರಸಗೊಬ್ಬರ ಪೂರೈಕೆಯಾಗಲಿದೆ. ಅಲ್ಲದೆ, ಸದ್ಯ ಜಿಲ್ಲೆಯ ಖಾಸಗಿ ಮಾರಾಟಗಾರರಿಗೆ 1,832 ಟನ್ ಮತ್ತು ಸಹಕಾರ ಸಂಘಗಳಲ್ಲಿ 1,440 ಟನ್ ರಸಗೊಬ್ಬರ ಲಭ್ಯವಿದೆ ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ರಸಗೊಬ್ಬರ ತಯಾರಿಕಾ ಸಂಸ್ಥೆಗಳು ಮತ್ತು ರಸಗೊಬ್ಬರ ಮಾರಾಟಗಾರರು ಯೂರಿಯಾ ರಸಗೊಬ್ಬರದೊಂದಿಗೆ ಇತರೆ ಯಾವುದೇ ರಸಗೊಬ್ಬರ ಅಥವಾ ಲಘು ಪೋಷಕಾಂಶಗಳನ್ನು ಲಿಂಕ್ ಮಾಡದಿರಲು ಈಗಾಗಲೇ ಸೂಚಿಸಲಾಗಿದೆ. ರಸಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು. ಸಮೀಪದ ರೈತ ಸಂಪರ್ಕ ಕೇಂದ್ರ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಜಂಟಿ ಕೃಷಿ ನಿರ್ದೇಶಕರನ್ನು ಸಂರ್ಪಸಿ ದೂರು ನೀಡಿ.”
| ಬಿ. ಮಂಜುನಾಥ, ಜಂಟಿ ಕೃಷಿ ನಿರ್ದೇಶಕ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...