ಸ್ಟಾರ್ ಆಫ್ ಕೊಡಗು ಚಾಂಪಿಯನ್

Latest News

ಅನಾಮಧೇಯ ಕರೆಯಿಂದ ನಿಂತ ಮದುವೆ; ಬೇರೊಬ್ಬ ಹುಡುಗನ ಜತೆ ನಿಶ್ಚಯ

ರಾಮನಗರ: ವಧುವಿಗೆ ಬಂದ ಅನಾಮಧೇಯ ಪೋನ್​ಕಾಲ್​ನಿಂದ ಮುರಿದು ಬಿದ್ದ ಮದುವೆ, ಬೇರೊಬ್ಬ ಹುಡುಗನ ಜತೆ ನಿಶ್ಚಯವಾಗುವ ಮೂಲಕ ಸುಖಾಂತ್ಯಗೊಂಡಿದೆ. ಮದುವೆ ನಿಶ್ಚಯವಾಗಿದ್ದ ಗಂಡಿಗೆ ಮೊದಲೇ...

ಮೈದಾನ ಯಾವುದೇ ಇರಲಿ, ಬಾಲ್ ಯಾವುದೇ ಆಗಲಿ​ ಶಮಿ ತುಂಬಾ ಡೇಂಜರಸ್​ ಎಂದ ಆಟಗಾರನ್ಯಾರು?

ಕೋಲ್ಕತ: ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್​ ಪಂದ್ಯವನ್ನಾಡಲು ಟೀಮ್​​ ಇಂಡಿಯಾ ತುದಿಗಾಲಲ್ಲಿ ನಿಂತಿದೆ. ಇಂದು ಆರಂಭವಾಗಲಿರುವ ಪಂದ್ಯಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇದರ...

ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ಸ್ಥಳೀಯ ಪೊಲೀಸರಿಗೆ ಕೇಂದ್ರ ಗುಪ್ತದಳ ಸಾಥ್​

ಮೈಸೂರು: ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ದಿನದಿನಕ್ಕೂ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣ ಸಂಬಂಧ ಮೈಸೂರು ಪೊಲೀಸರ ತನಿಖೆಗೆ...

ನನಗೆ ಮೋಸ ಮಾಡಿದಳು ಅವಳಿಗೆ ಶಿಕ್ಷೆ ಆಗಲೇಬೇಕೆಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ!

ಚಿಕ್ಕಮಗಳೂರು: ಪ್ರೇಯಸಿ ಕೈಕೊಟ್ಟಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳಸ ಸಮೀಪದ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ. ಸತೀಶ್ ಮೃತ ಯುವಕ. ಈತ ಕಳಸ...

ತಡರಾತ್ರಿ ಮಗನೊಂದಿಗೆ ಶರಾದ್​ ಪವಾರ್​ ಮನೆಗೆ ಧಾವಿಸಿದ ಉದ್ಧವ್​ ಠಾಕ್ರೆ: ಕುತೂಹಲ ಮೂಡಿಸಿದ ನಾಯಕರ ಭೇಟಿ!

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇಂದು ಅಂತ್ಯಕಾಣುವ ಲಕ್ಷಣಗಳು ಕಾಣಿಸುತ್ತಿವೆ. ಶಿವಸೇನಾ ಜತೆ ಕಾಂಗ್ರೆಸ್​ ಮತ್ತು ಎನ್​ಸಿಪಿ ಮೈತ್ರಿ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ...

ಗೋಣಿಕೊಪ್ಪಲು: ತಿತಿಮತಿ ಪ್ರೌಢಶಾಲಾ ಮೈದಾನದಲ್ಲಿ ಯರವ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಪಂದ್ಯಾವಳಿಯಲ್ಲಿ ಸ್ಟಾರ್ ಆಫ್ ಕೊಡಗು ತಂಡ ಇಡೆಮಲೆಲಾತ್ಲೇರಂಡ ಆದಿವಾಸಿ ಕ್ರಿಕೆಟ್ ಕಪ್ ಗೆದ್ದುಕೊಳ್ಳುವ ಮೂಲಕ 8ನೇ ವರ್ಷದ ಕ್ರೀಡಾಕೂಟದ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಫೈನಲ್‌ನಲ್ಲಿ ಸೋಲನುಭವಿಸಿದ ಶಶಿ ಫ್ರೆಂಡ್ಸ್ ತಂಡ ರನ್ನರ್ ಅಪ್‌ಗೆ ತೃಪ್ತಿಪಟ್ಟುಕೊಂಡಿತು.

ಫೈನಲ್‌ನಲ್ಲಿ ಸ್ಟಾರ್ ಆಫ್ ಕೊಡಗು ತಂಡ, ಶಶಿ ಫ್ರೆಂಡ್ಸ್ ತಂಡವನ್ನು 11 ರನ್‌ಗಳಿಂದ ಮಣಿಸಿ ಕಪ್ ಗೆದ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಸ್ಟಾರ್ ಆಫ್ ಕೊಡಗು, ನಿಗದಿತ 6 ಓವರ್‌ಗಳಲ್ಲಿ 56 ರನ್ ಗಳಿಸಿ ಆಲೌಟ್ ಆಯಿತು. ಗುರಿ ಬೆನ್ನತ್ತಿದ ಶಶಿ ತಂಡ ವಿಕೆಟ್ ಕಳೆದುಕೊಳ್ಳುವ ಮೂಲಕ ಸೋಲಿನತ್ತ ಸಾಗಿತು. ಒಂದು ಹಂತದಲ್ಲಿ 25 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿತು. ಕೊನೆಯದಾಗಿ 45 ರನ್‌ಗೆ 8 ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ಬೆಸ್ಟ್ ಬಹುಮಾನಗಳು
ಪಂದ್ಯ ಪುರುಷ ಪ್ರಶಸ್ತಿಯನ್ನು ಸ್ಟಾರ್ ಆಫ್ ಕೊಡಗು ತಂಡದ ಆಟಗಾರ ಮಂಜು, ಸರಣಿ ಶ್ರೇಷ್ಠ ಬಹುಮಾನವನ್ನು ಶಶಿ ಫ್ರೆಂಡ್ಸ್ ತಂಡದ ಗಣೇಶ್, ಉತ್ತಮ ಕ್ಯಾಚ್ ಬಹುಮಾನವನ್ನು ಕುಟ್ಟ ಸಿವೈಸಿ ತಂಡದ ಪ್ರಕಾಶ್, ಉತ್ತಮ ಬೌಲರ್ ಬಹುಮಾನವನ್ನು ಸ್ಟಾರ್ ಆಫ್ ಕೊಡಗು ತಂಡದ ಆಟಗಾರ ಜೀವನ್, ಕೀಪರ್ ಪ್ರಶಸ್ತಿಯನ್ನು ಶಶಿ ಫ್ರೆಂಡ್ಸ್ ತಂಡದ ಮಲ್ಲಪ್ಪ, ಉತ್ತಮ ಆಲ್‌ರೌಂಡರ್ ಬಹುಮಾನವನ್ನು ಸ್ಟಾರ್ ಆಫ್ ಕೊಡಗು ತಂಡದ ಮಧು, ಶಿಸ್ತಿನ ತಂಡವಾಗಿ ಕಾರೆಕಂಡಿ ತಂಡ (ಬಿ), ಉತ್ತಮ ತಂಡವಾಗಿ ಕಾರೆಕಂಡಿ (ಎ) ತಂಡ ಬಹುಮಾನ ಪಡೆದುಕೊಂಡಿತು.

ಮಕ್ಕಳು, ಮಹಿಳೆಯರಿಗೆ ಪ್ರಶಸ್ತಿ
ಮಕ್ಕಳಿಗೆ ನಡೆದ ದುಡಿ ಕುಣಿತ ಸ್ಪರ್ಧೆಯಲ್ಲಿ ಬಾಲಕಿಯರಲ್ಲಿ ಧನು ಪ್ರಥಮ, ಪ್ರತ್ವಿ ದ್ವಿತೀಯ, ಬಾಲಕರಲ್ಲಿ ಅಭಿನಂದನ್ ಪ್ರಥಮ, ವನು ದ್ವಿತೀಯ ಸ್ಥಾನ ಪಡೆದುಕೊಂಡರು. ಮಹಿಳೆಯರ ಹಗ್ಗ-ಜಗ್ಗಾಟದಲ್ಲಿ ಲೆವೆಂತ್‌ಮೈಲ್ ಬಿ ಪ್ರಥಮ, ಲೆವೆಂತ್‌ಮೈಲ್ ಎ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.

ಸನ್ಮಾನ
ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಕೊಡಗಿನ ವೀರ ಎಚ್.ಎನ್.ಮಹೇಶ್, ದಾನಿ ಉಂಬಾಯಿ, ಯರವ ಸಮಾಜದ ಸಂಚಾಲಕ ಪಿ.ಕೆ.ಸಿದ್ದಪ್ಪ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.80 ರಷ್ಟು ಅಂಕ ಪಡೆದ ಪಿ.ಆರ್.ಸುಮಿತ್ರಾ, ಕಲಾವಿದ ರಮೇಶ್, ಸಾಮಾಜಿಕ ಕಾರ್ಯಕರ್ತ ಪಿ.ಎಸ್.ಶಶಿ ಅವರನ್ನು ಸನ್ಮಾನಿಸಲಾಯಿತು.

ಸಮಾರೋಪ
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಯರವ ಸಮಾಜದ ಅಧ್ಯಕ್ಷ ಶಾಂತಕುಮಾರ್, ಸರ್ಕಾರ ಕ್ರೀಡಾಕೂಟಕ್ಕೆ ಅನುದಾನ ನೀಡುವ ಮೂಲಕ ಪ್ರೋತ್ಸಾಹಿಸಬೇಕಿದೆ ಎಂದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಜನಾಂಗದವರು ಮಕ್ಕಳು ಶಿಕ್ಷಣ ವಂಚಿತರಾಗದಂತೆ ಜವಬ್ದಾರಿ ವಹಿಸಬೇಕು. ಪದವಿ ಶಿಕ್ಷಣ ನೀಡುವಷ್ಟು ಛಲ ಪಾಲಕರಲ್ಲಿರಬೇಕು ಎಂದು ಸಲಹೆ ನೀಡಿದರು.
ತಾ.ಪಂ. ಸದಸ್ಯ ಪ್ರಕಾಶ್ ಮಾತನಾಡಿ, ಕ್ರೀಡೆಗೆ ಒಗ್ಗಟ್ಟಿನ ಪ್ರೋತ್ಸಾಹ ನೀಡುವ ಜನಾಂಗದವರು ಸರ್ಕಾರದಿಂದ ಸವಲತ್ತು ಪಡೆಯಲೂ ಹೋರಾಟಕ್ಕೆ ಇಳಿಯಬೇಕು ಎಂದರು.
ಆರ್‌ಎಂಸಿ ನಿರ್ದೇಶಕ ಕಿಲನ್ ಗಣಪತಿ, ಟ್ರೋಫಿ ದಾನಿ ಉಂಬಾಯಿ, ಉರಗ ಪ್ರೇಮಿ ಶರತ್‌ಕಾಂತ್, ಕಾರ್ಯದರ್ಶಿ ಸಂಜೀವ ಹಾಗೂ ಸಂಚಾಲಕ ಸಿದ್ದಪ್ಪ ಬಹುಮಾನ ವಿತರಿಸಿದರು.


- Advertisement -

Stay connected

278,656FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...