ಸ್ಥಳೀಯ ಸಂಸ್ಥೆಗಳಿಗೆ ನಿರ್ವಹಣೆ ಭಾರ!

blank

ಮಂಜುನಾಥ ಕೋಳಿಗುಡ್ಡ ಬೆಳಗಾವಿ
ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಆದಾಯ ಮೂಲವಾಗಿರುವ ಆಸ್ತಿ ತೆರಿಗೆ, ಅಭಿವೃದ್ಧಿ ಶುಲ್ಕ, ವಾಣಿಜ್ಯ ಮಳಿಗೆ ಬಾಡಿಗೆ, ವ್ಯಾಪಾರಿ ಶುಲ್ಕ ಹೀಗೆ ನಾನಾ ರೀತಿಯ ತೆರಿಗೆ ನಿರೀಕ್ಷಿತ ಪ್ರಮಾಣದಲ್ಲಿ ಸಂಗ್ರಹವಾಗಿಲ್ಲ. ಇದರಿಂದ ಗುತ್ತಿಗೆ ನೌಕರರು, ಪೌರ ಕಾರ್ಮಿಕರ ವೇತನ, ದಿನ ನಿತ್ಯದ ಖರ್ಚು ವೆಚ್ಚಗಳನ್ನು ನಿರ್ವಹಣೆ ಮಾಡುವುದೇ ಕಷ್ಟಕರವಾಗಿ ಪರಿಣಮಿಸಿದೆ.

ಬೆಳಗಾವಿ ಮಹಾನಗರ ಪಾಲಿಕೆ ಸೇರಿ ಜಿಲ್ಲೆಯಲ್ಲಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಅಧಿಕೃತ ಮೂಲಗಳ ಗಳಿಕೆಗಿಂತ ಅಭಿವೃದ್ಧಿಗೆ ಹೆಚ್ಚು ವ್ಯಯ ಆಗುತ್ತಿರುವುದು ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. 2020 ರಿಂದ 2024ರ ಅವಧಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಎಲ್ಲ ವಿಧದ ಕರ ಸಂಗ್ರಹಣೆಯಲ್ಲಿ ಸಾಧನೆ ಮಾಡಿಲ್ಲ. ಇದರಿಂದ ಆಡಳಿತ ನಿರ್ವಹಣೆ, ಅಭಿವೃದ್ಧಿ ಕಾರ್ಯಗಳಿಗೂ ತೊಡಕಾಗಿದೆ.

25-30 ಕೋಟಿ ರೂ.ಬಾಕಿ: ಪ್ರತಿವರ್ಷ ಪಾಲಿಕೆ ಸೇರಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಂದಾಜು 4.57 ಲಕ್ಷ ಆಸ್ತಿಗಳಿಂದ ವಾರ್ಷಿಕ ಸರಾಸರಿ 129.18 ಕೋಟಿ ರೂ. ತೆರಿಗೆ ವಸೂಲಿ ಗುರಿ ಹಾಕಿಕೊಂಡಿವೆ. ಆದರೆ, ಸಾರ್ವಜನಿಕರು ತೆರಿಗೆ ಕಟ್ಟದಿರುವುದು, ಅಧಿಕಾರಿಗಳ ನಿರ್ಲಕ್ಷೃದಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗುತ್ತಿಲ್ಲ. ಪ್ರತಿವರ್ಷ 25 ರಿಂದ 30 ಕೋಟಿ ರೂ. ವರೆಗೆ ತೆರಿಗೆ ಬಾಕಿ ಉಳಿಯುತ್ತಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳ ಆಡಳಿತದ ದಿನನಿತ್ಯದ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಉಂಟು ಮಾಡಿದೆ.

ಬೃಹತ್ ಉದ್ಯಮಗಳಿಂದ ಬಾಕಿ: ಬೆಳಗಾವಿ ಮಹಾನಗರ ಸೇರಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಸಂಘ ಸಂಸ್ಥೆ, ಶಿಕ್ಷಣ ಸಂಸ್ಥೆ, ಕಂಪನಿ ಹಾಗೂ ಬೃಹತ್ ಉದ್ಯಮಿಗಳು ವಾರ್ಷಿಕ ಕೋಟ್ಯಂತರ ರೂ. ವಹಿವಾಟು ನಡೆಸುತ್ತಿವೆ. ಆದರೆ, ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಕಟ್ಟುತ್ತಿಲ್ಲ. ತೆರಿಗೆ ಕಟ್ಟಲು ನೋಟಿಸ್ ನೀಡಿದರೂ ಸ್ಪಂದಿಸುತ್ತಿಲ್ಲ. ಪ್ರಭಾವಿಗಳ ಹೆಸರು ಹೇಳಿಕೊಂಡು ತೆರಿಗೆ ಕಟ್ಟುತ್ತಿಲ್ಲ ಎಂದು ಅಧಿಕಾರಿಗಳು ದೂರಿದ್ದಾರೆ.

ತೆರಿಗೆ ವಂಚನೆ ಪ್ರಕರಣಗಳು ಹೆಚ್ಚು: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಂಚನೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಆಸ್ತಿ ಮಾಲೀಕರು ದಾಖಲೆಗಳಲ್ಲಿ ಒಂದು ಮಹಡಿ ಕಟ್ಟಡ ಎಂದು ಉಲ್ಲೇಖಿಸಿ ವಾಸ್ತವದಲ್ಲಿ 2 ರಿಂದ 3 ಮಹಡಿ ಕಟ್ಟಡ ಕಟ್ಟಿದ್ದಾರೆ. ಆದರೆ, ತೆರಿಗೆ ಕಟ್ಟುವುದು ಒಂದು ಮಹಡಿಗೆ ಮಾತ್ರ. ಕೆಲ ಕಟ್ಟಡಗಳಲ್ಲಿ ಹೋಟೆಲ್, ಕಿರಾಣಿ, ಪಿಜಿ ಸೇರಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಅಲ್ಲದೆ, ವಸತಿ ಮನೆ ಎಂದು ತೆರಿಗೆ ಕಟ್ಟುತ್ತಿದ್ದಾರೆ. ಈ ಅಕ್ರಮದಲ್ಲಿ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದು, ತೆರಿಗೆ ಸೂರಿಕೆಗೆ ಪ್ರಮುಖ ಕಾರಣರಾಗಿದ್ದಾರೆ ಎಂದು ಸದಸ್ಯರು ದೂರಿದ್ದಾರೆ.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಉಳಿದುಕೊಂಡಿರುವ ತೆರಿಗೆ ಸಂಗ್ರಹಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ನಿರ್ಲಕ್ಷೃ ವಹಿಸುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು. ತೆರಿಗೆ ಕಟ್ಟದಿರುವವರಿಗೆ ಎಲ್ಲ ಸೌಕರ್ಯಗಳ ಕಡಿತಗೊಳಿಸಲಾಗುವುದು.
| ಮಲ್ಲಿಕಾರ್ಜುನ ಕಲಾದಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ

ಮಹಾನಗರ ಪಾಲಿಕೆಯು ಶೇ.100ರಷ್ಟು ತೆರಿಗೆ ಸಂಗ್ರಹ ಗುರಿ ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ 80 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ. ಆ ಪೈಕಿ 59 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತೆರಿಗೆ ಕಟ್ಟಬೇಕು.
| ಶುಭ.ಬಿ. ಪಾಲಿಕೆ ಆಯುಕ್ತೆ

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…