Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಸ್ಮಾರ್ಟ್​ಸಿಟಿ ಕಾರ್ಯ ಶೀಘ್ರ ಆರಂಭ

Thursday, 14.06.2018, 5:42 PM       No Comments

ಶಿವಮೊಗ್ಗ: ಸ್ಮಾರ್ಟ್​ಸಿಟಿ ಯೋಜನೆಗೆ ಶೀಘ್ರವೇ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಸ್ಮಾರ್ಟ್​ಸಿಟಿ ಯೋಜನೆ ಆರಂಭವಾಗಿ ಮೂರು ವರ್ಷ ಕಳೆದರೂ ಯೋಜನೆ ಟೇಕಾಫ್ ಆಗಿಲ್ಲ. ಕೇವಲ ಪ್ಲಾನ್ ಸಿದ್ಧ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಯೋಜನೆ ಆರಂಭಕ್ಕೆ ಸಹಕಾರ ನೀಡುವಂತೆ ಕೋರಿದ್ದೇನೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ಮಾರ್ಟ್​ಸಿಟಿ ಯೋಜನೆಯಲ್ಲಿ ಕೆಲ ಕಾಮಗಾರಿಗಳ ಟೆಂಡರ್ ಪೂರ್ಣಗೊಂಡಿದೆ. ಕೆಲವು ಟೆಂಡರ್ ಪ್ರಕ್ರಿಯೆ ಹಂತದಲ್ಲಿವೆ. ಕೇಂದ್ರ ಹಾಗೂ ರಾಜ್ಯದಿಂದ ಪ್ರತಿ ವರ್ಷ ತಲಾ 100 ಕೋಟಿ ರೂ. ಅನುದಾನ ಸ್ಮಾರ್ಟ್​ಸಿಟಿ ಯೋಜನೆಗೆ ಸಿಗಲಿದೆ. ಮುಂದಿನ ಐದು ವರ್ಷಗಳಲ್ಲಿ ಸಾವಿರ ಕೋಟಿ ರೂ. ಅನುದಾನದ ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ಸ್ಮಾರ್ಟ್​ಸಿಟಿ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ. ಕಾಮಗಾರಿಗಳ ಪ್ರಗತಿ, ಅನುದಾನದ ಬಳಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಜನರ ಮುಂದೆ ಇಡಲಾಗುವುದು.

ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಕ್ಕೆ ಮುಲ್ಲೈ ಮುಹಿಲನ್ ಅವರನ್ನು ಬೆಳಗಾವಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿಸಿದ್ದೆ. ಅವರು ಸಮರ್ಪಕವಾಗಿ ಕೆಲಸ ಮಾಡಲಿಲ್ಲ ಎಂದರು. ಮುಂದಿನ ದಿನಗಳಲ್ಲಿ ಪಾಲಿಕೆಗೆ ಹಾಗೂ ಸ್ಮಾರ್ಟ್ ಸಿಟಿಗೆ ಪ್ರತ್ಯೇಕವಾಗಿ ಇಬ್ಬರು ಆಯುಕ್ತರನ್ನು ನಿಯೋಜಿಸಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಸತಿ ಯೋಜನೆಗೆ ಚುರುಕು: ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗೋವಿಂದಾಪುರದಲ್ಲಿ ವಸತಿ ಯೋಜನೆಗೆ ಭೂಮಿ ಗುರುತಿಸಲಾಗಿದ್ದು, ಈಗ ವಸತಿ ಯೋಜನೆಗಳನ್ನು ಚುರುಕುಗೊಳಿಸಲಾಗುವುದು. ದೇವಕಾತಿಕೊಪ್ಪದಲ್ಲಿ ಕೆಐಎಡಿಬಿಗೆ ಕೈಗಾರಿಕೆ ಹಾಗೂ ವಸತಿಗೆ ಜಮೀನು ಮಂಜೂರು ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

Back To Top