22.5 C
Bengaluru
Sunday, January 19, 2020

ಸ್ವಉದ್ಯೋಗ ಕಲ್ಪಿಸುತ್ತಿರುವ ಹೆಮ್ಮೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ರಾಮನಗರ: ಸಂಸ್ಥೆಯಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳು ಸ್ವಉದ್ಯೋಗದ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಂಡರೆ ಸಂಸ್ಥೆಗೆ ಹೆಮ್ಮೆಯ ಸಂಗತಿ ಎಂದು ಕೆನರಾ ಬ್ಯಾಂಕ್​ನ ಕಾರ್ಯನಿರ್ವಾಹಕ ನಿರ್ದೇಶಕಿ ಎ. ಮಣಿಮೇಕಲೈ ಹೇಳಿದರು.

ಬಿಡದಿಯ ಜೋಗರದೊಡ್ಡಿಯ ಕೆ.ಪಿ.ಜೆ. ಪ್ರಭು ಕರಕುಶಲ ತರಬೇತಿ ಸಂಸ್ಥೆಯಲ್ಲಿ ಶನಿವಾರ 2018-19ನೇ ವಾರ್ಷಿಕ ಕ್ರಿಯಾ ಚಟುವಟಿಕೆ ವರದಿ ಪುಸ್ತಕ ಬಿಡುಗಡೆ ಮತ್ತು ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಟೂಲ್ ಕಿಟ್, ಸಮವಸ್ತ್ರ ಮತ್ತು ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುರಾತನ ಶಿಲ್ಪಕಲೆ ಬಗ್ಗೆ ಯುವ ಸಮುದಾಯದಲ್ಲಿ ಆಸಕ್ತಿ ಮೂಡಿಸುವ ಮೂಲಕ ಇಂಥ ಕಲೆಯನ್ನು ರಕ್ಷಿಸಬೇಕೆಂಬ ಉದ್ದೇಶದಿಂದ 1991ರಲ್ಲಿ ಈ ತರಬೇತಿ ಸಂಸ್ಥೆಯನ್ನು ಆರಂಭಿಸಲಾಗಿದೆ. ಶಿಲ್ಪ ಕೆತ್ತನೆ, ಮರದ ಕೆತ್ತನೆ, ಮಣ್ಣಿನ ಕಲಾಕೃತಿ, ಲೋಹದಿಂದ ಮೂರ್ತಿ ತಯಾರಿಕೆ ಸೇರಿ ಇನ್ನಿತರೆ ಕಲೆಗಳಲ್ಲಿ ತರಬೇತಿ ನೀಡುವ ಮೂಲಕ ನಿರುದ್ಯೋಗಿಗಳಿಗೆ ಸ್ವಉದ್ಯೋಗ ಕಲ್ಪಿಸಿಕೊಡುತ್ತಿದ್ದೇವೆ. ಈಗಾಗಲೇ ತರಬೇತಿ ಪಡೆದ 954 ಶಿಬಿರಾರ್ಥಿಗಳ ಪೈಕಿ ಶೇ.91 ಮಂದಿ ಸ್ವಉದ್ಯೋಗ ಮಾಡುತ್ತಿರುವುದು ಖುಷಿ ನೀಡಿದೆ. ಮಹಿಳೆಯರಿಗೂ ತರಬೇತಿ ನೀಡುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಂಸ್ಥೆ ನೆರವಾಗಿದೆ ಎಂದರು.

ಸಂಸ್ಥೆಯ ಪ್ರಸಕ್ತ ವರ್ಷದ ವಾರ್ಷಿಕ ಚಟುವಟಿಕೆ ವರದಿಯನ್ನು ಬಿಡುಗಡೆ ಮಾಡಲಾಯಿತು. ಶಿಬಿರಾರ್ಥಿಗಳಿಗೆ ಟೂಲ್ ಕಿಟ್, ಸಮವಸ್ತ್ರ ಮತ್ತು ತರಬೇತಿ ಮತ್ತು ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ ವಿತರಿಸಲಾಯಿತು ಹಾಗೂ ಸಾಧಕ ಉದ್ಯಮಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧಿಕಾರಿಗಳು, ಬ್ಯಾಂಕ್​ನ ವಿವಿಧ ಶಾಖೆಗಳ ಮ್ಯಾನೇಜರ್​ಗಳು ಉಪಸ್ಥಿತರಿದ್ದರು.

ಪ್ರಶಸ್ತಿಯ ಗರಿ: ಬ್ಯಾಂಕ್​ನ ಜಿಎಂ ಕೆ. ಪಳಣಿವೆಲ್ ಮತ್ತು ಸಂಸ್ಥೆಯ ಎಜಿಎಂ ಬಿ.ಪಾರ್ಶ್ವನಾಥ ಮಾತನಾಡಿ, ಸಂಸ್ಥೆಯ ಸಮಾಜಮುಖಿ ಕಾರ್ಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅಲ್ಲದೆ ಸಂಸ್ಥೆಯಿಂದ ಗ್ರಾಮೀಣ ಭಾಗದ ಲಕ್ಷಾಂತರ ಶಿಬಿರಾರ್ಥಿಗಳು ಪ್ರಯೋಜನ ಪಡೆದಿದ್ದಾರೆ. ನಮ್ಮಲ್ಲಿ ತರಬೇತಿ ಪಡೆದ ಕೆಲವರಿಗೆ ಹಲವು ಪ್ರಶಸ್ತಿ ಬಂದಿವೆ. ಅಲ್ಲದೆ ಸಂಸ್ಥೆಯ ಸಾಧನೆಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ, ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಕರಕುಶಲ ಪ್ರಶಸ್ತಿ ದೊರೆತಿದೆ ಎಂದರು.

ಕಲಾಕೃತಿ ಸಿದ್ಧಪಡಿಸಿದ ಮಣಿಮೇಕಲೈ: ಕಾರ್ಯಕ್ರಮಕ್ಕೂ ಮುನ್ನ ಕೆನರಾ ಬ್ಯಾಂಕ್​ನ ಕಾರ್ಯನಿರ್ವಾಹಕ ನಿರ್ದೇಶಕಿ ಎ. ಮಣಿಮೇಕಲೈ ಅವರು ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳ ಕೌಶಲವನ್ನು ಪರಿಶೀಲಿಸಿದರು. ಕೆಲ ಶಿಬಿರಾರ್ಥಿಗಳೊಂದಿಗೆ ರ್ಚಚಿಸುವ ಮೂಲಕ ಕೇಂದ್ರದಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು. ಅಲ್ಲದೆ ಅವರು ಸಹ ಮಣ್ಣಿನ ಕಲಾಕೃತಿಯನ್ನು ಸಿದ್ಧಪಡಿಸುವ ಮೂಲಕ ಖುಷಿ ಪಟ್ಟರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...