20.4 C
Bangalore
Monday, December 9, 2019

ಸ್ವಗ್ರಾಮಕ್ಕೆ ತೆರಳಿದ ಪ್ರವಾಹ ಸಂತ್ರಸ್ತರು

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಹೊಳೆಆಲೂರ: ಮಲಪ್ರಭೆ ಹಾಗೂ ಬೆಣ್ಣೆಹಳ್ಳದ ಪ್ರವಾಹದಿಂದ ಹೊಳೆಆಲೂರ ಹೋಬಳಿ ವ್ಯಾಪ್ತಿಯ ಗುಳಗುಂದಿ, ಮೆಣಸಗಿ, ಹೊಳೆಮಣ್ಣೂರು, ಗಾಡಗೋಳಿ, ಕುರುವಿನಕೊಪ್ಪ, ಅಮರಗೋಳ, ಹೊಳೆಹಡಗಲಿ, ಬಸರಕೋಡ, ಹಾಗೂ ಬಿ.ಎಸ್. ಬೇಲೇರಿ ಗ್ರಾಮಗಳ ಸಂತ್ರಸ್ತರು ತಮ್ಮ ತಮ್ಮ ಗ್ರಾಮಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಆದರೆ, ಅಲ್ಲಿ ಕುಡಿಯಲು ನೀರು, ಆಹಾರ, ಜಾನುವಾರುಗಳಿಗೆ ಮೇವು, ಹೊಟ್ಟಿನ ವ್ಯವಸ್ಥೆ ಹೇಗೆ ಎಂಬ ಚಿಂತೆಯಲ್ಲಿದ್ದಾರೆ.

ಗದಗಿನ ತೊಂಟದಾರ್ಯ ಮಠ, ಪಂಚಾಕ್ಷರಿ ಗವಾಯಿಗಳ ಮಠ, ಪರಿಹಾರ ಕೇಂದ್ರ ಹಾಗೂ ಬಂಧು-ಬಾಂಧವರ ಮನೆಗಳಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತರು ಸ್ವಗ್ರಾಮಗಳಿಗೆ ತೆರಳುತ್ತಿದ್ದಾರೆ. ಮನೆಯಲ್ಲಿನ ಕೆಸರು ಸ್ವಚ್ಛಗೊಳಿಸುವುದು, ದವಸ ಧಾನ್ಯ ಒಣಗಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ದಾನಿಗಳು ಆಹಾರ, ಬಟ್ಟೆ, ಬೇಳೆ ಕಾಳು ಕೊಡಲು ಬಂದರೆ ಮುಗಿ ಬೀಳುತ್ತಿದ್ದಾರೆ. ಗ್ರಾಮಗಳಲ್ಲಿ ನೀರು ಪೂರೈಕೆ ಅಸ್ತವ್ಯಸ್ತಗೊಂಡಿದ್ದು, ಟ್ಯಾಂಕರ್ ನೀರಿಗೆ ಕಾಯಬೇಕಾಗಿದೆ. ಮೇವು, ಹೊಟ್ಟಿನ ಬಣವೆಗಳು ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿವೆ. ಹೊಳೆಆಲೂರಿನಿಂದ ಅಮರಗೋಳ, ಹೊಳೆಹಡಗಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿಯೇ ಬಣವೆಗಳು ಬಿದ್ದಿದ್ದು ಸಂಚಾರಕ್ಕೆ ಸಂಚಕಾರವಾಗಿವೆ.

ದನಕರುಗಳಿಗೆ ವರ್ಷಕ್ಕೆ ಸಾಕಾಗುವಷ್ಟು ಮೇವು, ಹೊಟ್ಟು ಸಂಗ್ರಹಿಸಿ ಬಣವೆ ಒಟ್ಟಲಾಗಿತ್ತು. ಆದರೆ, ಪ್ರವಾಹ ಬಂದು ಎಲ್ಲವೂ ತೇಲಿ ಹೋಗಿವೆ. ಮೇವು, ಹೊಟ್ಟು ಇಲ್ಲದ್ದರಿಂದ ಅನಿವಾರ್ಯವಾಗಿ ದನಕರುಗಳನ್ನು ಕಡಿಮೆ ಬೆಲೆಗೆ ಮಾರುವಂತಾಗಿದೆ.

| ಪರಸಪ್ಪ ಮಾದರ, ಯಲ್ಲಪ್ಪ ಚೌಡನ್ನವರ ಹೊಳೆಆಲೂರ ಸಂತ್ರಸ್ತರು

ನೀರು ಪಾಲಾದ ದಾಖಲೆಗಳು

ಮನೆಯಲ್ಲಿ ಇಡಲಾಗಿದ್ದ ಮಕ್ಕಳ ಶಾಲಾ ಸರ್ಟಿಫಿಕೇಟ್, ಆಧಾರ ಕಾರ್ಡ್, ರೇಶನ್ ಕಾರ್ಡ್, ಆಸ್ತಿಯ ಕಾಗದ ಪತ್ರಗಳು, ಪ್ರಮುಖ ದಾಖಲೆಗಳು ನೀರಿನಲ್ಲಿ ಸಿಕ್ಕು ಹಾಳಾಗಿವೆ. ಮನೆಯಲ್ಲಿದ್ದ ಪಾತ್ರೆಗಳು ತೇಲಿ ಹೋಗಿದ್ದು, ವಿದ್ಯುತ್ ಉಪಕರಣಗಳಾದ ಟಿ.ವಿ ಫ್ರಿಜ್​ಗಳಲ್ಲಿ ನೀರು ಹೊಕ್ಕು ಕೆಟ್ಟು ನಿಂತಿವೆ. ಪ್ರವಾಹದ ಹೊಡೆತಕ್ಕೆ ಸಿಲುಕಿದ ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಪರದಾಡುವಂತಾಗಿದೆ.

ಜಲಸಂತ್ರಸ್ತರಿಗೆ ತರಕಾರಿ ವಿತರಣೆ

ಹೊಳೆಆಲೂರ: ನೆರೆಪೀಡಿತ ಹೊಳೆಆಲೂರ, ಗಾಡಗೋಳಿ, ಮೆಣಸಗಿ, ಅಮರಗೋಳ, ಕೊಣ್ಣೂರ, ಕುರವಿನಕೊಪ್ಪ, ಹಡಗಲಿ ಗ್ರಾಮಗಳ ಎರಡು ಸಾವಿರ ನಿರಾಶ್ರಿತರಿಗೆ ಗದಗ ಜಮಿಯತ್ ಉಲಮಾ ಹಾಗೂ ಹೊಳೆಆಲೂರು ಅಂಜುಮನ್ ಇಸ್ಲಾಂ ಕಮಿಟಿ ನೇತೃತ್ವದಲ್ಲಿ ಒಂದು ವಾರಕ್ಕೆ ಬೇಕಾಗುವ ತರಕಾರಿ ವಿತರಿಸಲಾಯಿತು. ಹೊಳೆಆಲೂರಿನ 2000 ಮನೆಗಳಿಗೆ ತಲಾ ಎರಡು ಕೊಡ ನೀರು ಪೂರೈಸಲಾಯಿತು.

ಮೌಲಾನಾ ಇನಾತ್ ಉಲ್ ಮಾತನಾಡಿ, ಮಾನವರೆಲ್ಲರೂ ಒಂದೇ. ಪ್ರಕೃತಿ ಮಾನವನ ಸ್ವೇಚ್ಛಾಚಾರಕ್ಕೆ ಆಗಾಗ ತನ್ನ ರುದ್ರ ನರ್ತನ ತೋರಿಸುತ್ತಿದ್ದು, ಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಸಂಘ-ಸಂಸ್ಥೆಗಳು ಪ್ರಾಮಾಣಿಕವಾಗಿ ಸಹಾಯ ಮಾಡಬೇಕು ಎಂದರು.

ಅಬ್ದುಲ್ ರಹೀಮ್ಾಬ್, ಮೌಲಾನಾ ಜಕಾರಿಯಾ, ಮೌಲಾನಾ ಗಪೂರಸಾಬ್, ಮೌಲಾನಾ ರಿಯಾಜ್, ಬಾಳರೊಟ್ಟಿ, ಹಫೀಜ್ ಹುಸೇನ್ ಬಾಗಲೆ, ಮಕ್ಬುಲ್​ಸಾಬ್ ಮುಲ್ಲಾ, ಅಕ್ಬರಸಾಬ್ ಬಬೂಚ್, ಮೌಲಾನಾ ಅಬ್ದುಲ್ ಲತೀಫ್, ಫಕ್ರುಸಾಬ್ ಚಿಕ್ಕಮಣ್ಣೂರ, ಬಾಬು ಮೆಣಸಗಿ, ಇಸ್ಮಾಲ್ ಅಕ್ಕೋಜಿ, ಖಾನಸಾಬ್ ಕೊತಬಾಳ, ರೆಹಮಾನ್​ಸಾಬ್ ಬಹದ್ದೂರಖಾನ್, ಆದಮ್ಾಬ್ ಮನ್ನಾಪೂರ, ಇತರರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...