*“
*ಬೆಳಗಾವಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ “ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಪೋಸ್ಟರ ಅನಾವರಣ ಮಾಡಲಾಯಿತು.
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ ಜಗದೀಶ್ ಶೆಟ್ಟರ್ ರವರು “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮದ ಪೋಸ್ಟರ ಅನಾವರಣ ಮಾಡಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ ಜಿಲ್ಲೆಯಲ್ಲಿ ಸೆ.17 ರಿಂದ ಅಕ್ಟೋಬರ 2ರವರೆಗೆ ನಡೆಯುತ್ತಿದ್ದು, ಈ ಕಾರ್ಯಕ್ರಮವು ಕೇವಲ ಚಾಲನೆ ಮಾಡುವುದಕ್ಕೆ ಮಾತ್ರ ಸೀಮಿತವಾಗದೆ ಕಾರ್ಯಕ್ರಮದ ಉದ್ದೇಶವನ್ನು ಅರಿತು ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಂಯೋಗದೊಂದಿಗೆ ಕೆಲಸ ಮಾಡಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ Black Spot, ಪ್ರವಾಸಿ ತಾಣ, ಸರಕಾರಿ ಕಟ್ಟಡಗಳು, ಕೆರೆ, ಹಳ್ಳ, ಚರಂಡಿ, ಮಾರುಕಟ್ಟೆಗಳು, ಬಸ್ ನಿಲ್ದಾಣ ಹಾಗೂ ಇನ್ನೀತರ ಸ್ಥಳಗಳಲ್ಲಿ ಎಲ್ಲ ಅಧಿಕಾರಿಗಳು ಸಂಘ-ಸಂಸ್ಥೆಗಳನ್ನು ಬಳಸಿಕೊಂಡು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವುದು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾಗಾರರು/ಸಫಾಯಿ ಮಿತ್ರರರಿಗೆ ಆರೋಗ್ಯ ಶಿಬಿರ ಹಮ್ಮಿಕೊಂಡು DignityCard ಕೊಡುವುದರ ಮುಖಾಂತರ ಕಾರ್ಯಕ್ರಮದ ಉದ್ದೇಶವನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕೆಂದು ಜಿಲ್ಲಾ/ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಸಭೆಯಲ್ಲಿ ಲೋಕಸಭಾ ಸದಸ್ಯರು ಚಿಕ್ಕೋಡಿ ಹಾಗೂ ಸಹ ಅಧ್ಯಕ್ಷರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಕು. ಪ್ರಿಯಾಂಕ ಜಾರಕಿಹೋಳಿ, ರಾಜ್ಯ ಸಭಾ ಸದಸ್ಯರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಈರಣ್ಣಾ ಕಡಾಡಿ, ಸದಸ್ಯರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ(ದಿಶಾ) ಹಾಗೂ ಜಿಲ್ಲಾಧಿಕಾರಿಗಳು ಬೆಳಗಾವಿ ಮೊಹಮ್ಮದ ರೋಷನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಯೋಜನಾ ನಿರ್ದೇಶಕ (ಡಿ ಆರ್ ಡಿ ಎ) ರವಿ ಬಂಗಾರೆಪ್ಪನ್ನವರ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯ ಜಿಲ್ಲಾ ಸಮಾಲೋಚಕರು ಹಾಗೂ ಜಿಲ್ಲಾ ಪಂಚಾಯತ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.