ಬೀದರ್: ಲಿಂಗಾಯತ ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತರ ಮಾನ್ಯತೆಗಾಗಿ ಲಿಂಗಾಯತರು ಒಗ್ಗಟ್ಟು ಪ್ರದರ್ಶಿಸುವ ಅಗತ್ಯವಿದೆ ಎಂದು ಇಲ್ಲಿಯ ಹಿರಿಯ ವೈದ್ಯ ಡಾ. ಅಶೋಕಕುಮಾರ ನಾಗೂರೆ ಹೇಳಿದ್ದಾರೆ.
ಒಗ್ಗಟ್ಟಿನಲ್ಲಿ ಬಲವಿದೆ. ಹೀಗಾಗಿ ಇಡೀ ದೇಶದ ಲಿಂಗಾಯತರು ಒಗ್ಗೂಡಬೇಕಿದೆ. ನ್ಯಾಯಯುತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.
ಸಂಘಟನೆ ಫಲವಾಗಿಯೇ ಅನೇಕ ಧರ್ಮಗಳು ಸ್ವತಂತ್ರ ಧರ್ಮದ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿವೆ. ಲಿಂಗಾಯತರೂ ತಮ್ಮ ಅಸ್ಮಿತೆಗಾಗಿ ಸಂಘಟಿತರಾಗಬೇಕಿದೆ. ಜೂನ್ 4 ರಂದು ಹೈದರಾಬಾದ್‍ನಲ್ಲಿ ನಡೆಯಲಿರುವ ಲಿಂಗಾಯತ ಮಹಾ ರ್ಯಾಲಿಯಲ್ಲಿ ವಿರಾಟ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಹೇಳಿದ್ದಾರೆ.
ಹೈದರಾಬಾದ್ ರ್ಯಾಲಿಯಲ್ಲಿ ಲಿಂಗಾಯತರು ಸ್ವಯಂ ಪ್ರೇರಣೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಬೇಕು ಎಂದು ತಿಳಿಸಿದ್ದಾರೆ.