20.4 C
Bangalore
Monday, December 9, 2019

ಸ್ವಾಮಿ ವಿವೇಕರ ಆದರ್ಶ ಸಾರ್ವಕಾಲಿಕ

Latest News

ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಗದಗ: ಮಾನವೀಯತೆ, ಸಮಾನತೆ, ಸಹೋದರತೆ ಬೋಧಿಸಿ ಮಾನವರೆಲ್ಲರೂ ಒಂದೇ ಎಂದಿರುವ ಸ್ವಾಮಿ ವಿವೇಕಾನಂದರ ಆದರ್ಶಗಳು 21ನೇ ಶತಮಾನದಲ್ಲಿ ಅವಶ್ಯಕ ಎಂದು ಸಚಿವ ಎನ್. ಮಹೇಶ ಹೇಳಿದರು.

ನಗರದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ವಾಮಿ ವಿವೇಕಾನಂದರ ಷಿಕಾಗೋ ಉಪನ್ಯಾಸ ಸಮಿತಿ ಆಶ್ರಯದಲ್ಲಿ ಮಂಗಳವಾರ ಜರುಗಿದ ಸ್ವಾಮಿ ವಿವೇಕಾನಂದರ ಷಿಕಾಗೋ ಉಪನ್ಯಾಸದ 125ನೇ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಕುಚಿತ ಮನೋಭಾವದಿಂದ ಇಂದು ಜಾತಿ ಮತಗಳನ್ನಾಗಿಸಿಕೊಂಡಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಲಾಗುತ್ತಿದೆ. ವಿವೇಕಾನಂದರು ಸಮಾಜದಲ್ಲಿನ ಶೋಷಣೆ ಅಸಮಾನತೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ಪುರುಷ ಎಂದರು.

ಸಾಹಿತಿ ಬರಗೂರು ರಾಮಚಂದ್ರಪ್ಪ ಮಾತನಾಡಿ, ವಿವೇಕಾನಂದರು ಪ್ರಸ್ತುತವಾಗಬೇಕೆನ್ನುವುದು ಎಲ್ಲರ ಆಶಯವಾಗಿದೆ. ಅವರ ಷಿಕಾಗೋ ಭಾಷಣ 125 ವರ್ಷವಾಗಿದ್ದರೂ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿರುವುದು ಮಹತ್ವದ್ದಾಗಿದೆ ಎಂದರು.

21ನೇ ಶತಮಾನದಲ್ಲಿ ಆದ್ಯತೆಗಳೂ ಬದಲಾಗಿ ಸಾಧಕರು ಜಾತಿ ಬಲೆಗಳನ್ನು ಸೃಷ್ಟಿ ಮಾಡುತ್ತಿದ್ದು ಇಂತಹ ಅರಾಜಕತೆಯಿಂದ ಹೊರಬರಲು ವಿವೇಕಾನಂದರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ರಘುವೀರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಿ.ಆರ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸ್ವಾಗತಿಸಿದರು. ಜೆ.ಕೆ. ಜಮಾದಾರ ನಿರೂಪಿಸಿದರು. ವಿದ್ಯಾದಾನ ಶಿಕ್ಷಣ ಸಮಿತಿ ವಿದ್ಯಾರ್ಥಿನಿಯರು ನಾಡಗೀತೆ ಪ್ರಸ್ತುತಿಸಿದರು. ಶರಣು ಗೋಗೇರಿ ವಂದಿಸಿದರು.

 

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...