More

  ಸ್ವಾವಲಂಬಿ ಜೀವನ ನಡೆಸಿ

  ಬಳ್ಳಾರಿ: ಸರ್ಕಾರ ಯೋಜನೆಗಳ ಅರಿವು ಹೊಂದುವ ಮೂಲಕ ವಿಶೇಷಚೇತನರು ವಿವಿಧ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಯೋಜನಾಧಿಕಾರಿ ರಾಮಕೃಷ್ಣ ನಾಯಕ್ ಹೇಳಿದರು.
  ನಗರದ ಕಂಟೋನ್ಮೆಂಟ್ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪುನರ್ವಸತಿ ಕೇಂದ್ರ ಹಾಗೂ ಇತರೆ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಗುರುವಾರ ನಡೆದ ವಿಶ್ವ ಸುಲಭ ಲಭ್ಯತೆ ವಿಶ್ವ ಜಾಗೃತಿ ಅರಿವು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಂಗವಿಕಲರ ಕಾಯ್ದೆ ಹಾಗೂ ನಿಯಮಗಳ ಬಗ್ಗೆ ಅರಿವು ಹೊಂದಿ ವಿಶೇಷಚೇತನರು ಸರ್ಕಾರ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
  ಈ ಸಂದರ್ಭಸದಲ್ಲಿ ಜಿಲ್ಲಾ ಪುನರ್ವಸತಿ ಕೇಂದ್ರದ ನಾಗೇಂದ್ರ, ಜಿಲ್ಲೆಯ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯರ್ತರಾದ ಸಿ.ರಾಣಿ ಸಾಬೇಶ್, ಕರಿಬಸಜ್ಜ, ರೇವಣ್ಣ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts