21.7 C
Bengaluru
Tuesday, January 21, 2020

ಹಕ್ಕುಪತ್ರಕ್ಕಾಗಿ ರೈತರ ಪ್ರತಿಭಟನೆ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಗದಗ: ಕಪ್ಪತಗುಡ್ಡ ವನ್ಯಜೀವಿಧಾಮ ಆದೇಶವನ್ನು ಹಿಂಪಡೆಯುವುದು ಸೇರಿ ಬಗರ್​ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ 200ಕ್ಕೂ ಹೆಚ್ಚು ರೈತರು ನಗರದ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಕಪ್ಪತಗುಡ್ಡ ವ್ಯಾಪ್ತಿಯ 30ಕ್ಕೂ ಹೆಚ್ಚು ಗ್ರಾಮದ ರೈತರು ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಡಳಿತ ಭವನದ ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ರಾಜ್ಯ ಸರ್ಕಾರ ಘೊಷಿಸಿರುವ ಕಪ್ಪತಗುಡ್ಡ ವನ್ಯಜೀವಿಧಾಮ ಘೊಷಣೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕಿನ ಸಾವಿರಾರು ರೈತರು ತಲತಲಾಂತರದಿಂದ ಕಪ್ಪತಗುಡ್ಡ ವ್ಯಾಪ್ತಿಯಲ್ಲಿನ ಬರಡು ಭೂಮಿಯನ್ನು ಹಸನು ಮಾಡಿ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. 33 ಸಾವಿರ ಹೆಕ್ಟೇರ್ ವಿಸ್ತಾರ ಹೊಂದಿರುವ ಕಪ್ಪತಗುಡ್ಡ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಹಳ್ಳಿಗಳಿವೆ. ಅರಣ್ಯ ಇಲಾಖೆ ಸರ್ವೆಯಂತೆ 2,250 ಎಕರೆ ಭೂಮಿಯಲ್ಲಿ 1,187 ರೈತರು ಉಳುಮೆ ಮಾಡುತ್ತಿದ್ದಾರೆ. ಕಪ್ಪತಗುಡ್ಡವನ್ನು ವನ್ಯಜೀವಿಧಾಮವನ್ನಾಗಿ ಘೊಷಿಸುವುದರಿಂದ ಈ ಭಾಗದ ರೈತರು ನಿರ್ಗತಿಕರಾಗಲಿದ್ದಾರೆ. ಅಲ್ಲದೆ, ಯಾವಾಗ ಒಕ್ಕಲೆಬ್ಬಿಸುತ್ತಾರೆ ಎಂಬ ಭೀತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಬಗರಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸುಮತಿಶ್ರೀ ನವಲಿಹಿರೇಮಠ, ಉಪಾಧ್ಯಕ್ಷೆ ಲೀಲಾವತಿ ಚಿತ್ರಗಾರ, ಸಂಘಟನಾ ಕಾರ್ಯದರ್ಶಿ ಅಣ್ಣಪ್ಪಗೌಡ ದೇಸಾಯಿ, ಜಿಲ್ಲಾಧ್ಯಕ್ಷ ವೀರನಗೌಡ ಪಾಟೀಲ, ಮುಖಂಡರಾದ ಬಸವಣ್ಣೆಯ್ಯ ಹಿರೇಮಠ, ಮಹೇಶ ದಾಸರ, ರಾಮಣ್ಣ ಕಮ್ಮಾರ, ಮಲ್ಲಮ್ಮ ಹೆಬಸೂರ, ಭದ್ರೇಶ ಕುಸಲಾಪೂರ, ಮಲ್ಲೇಶ ನಡುವಿನಮನಿ, ಯಲ್ಲಪ್ಪ ದೊಡ್ಡಮನಿ ಸೇರಿ 200ಕ್ಕೂ ಹೆಚ್ಚು ರೈತರು ಪಾಲ್ಗೊಂಡಿದ್ದರು.

ಕಪ್ಪತಗುಡ್ಡ ಕಾಯ್ದಿಟ್ಟ ಅರಣ್ಯಪ್ರದೇಶವನ್ನು ಸಮ್ಮಿಶ್ರ ಸರ್ಕಾರ ಏಕಾಏಕಿ ವನ್ಯಜೀವಿಧಾಮವನ್ನಾಗಿ ಘೊಷಿಸಿರುವುದರಿಂದ ಬಗರ್​ಹುಕುಂ ಸಾಗುವಳಿದಾರರಿಗೆ ಬರಸಿಡಿಲು ಬಡಿದಂತಾಗಿದೆ. 30ಕ್ಕೂ ಹೆಚ್ಚು ಗ್ರಾಮಗಳ ಸಾವಿರಾರು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ. ರೈತ ಪರ ಕಾಳಜಿ ಹೊಂದಿರುವ ಸಿಎಂ ಯಡಿಯೂರಪ್ಪ ಅವರು ಕಪ್ಪತಗುಡ್ಡ ವನ್ಯಜೀವಿಧಾಮ ಘೊಷಣೆಯನ್ನು ಹಿಂಪಡೆದು, ಬಗರ್​ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು.

| ಬಸವಣ್ಣೆಯ್ಯ ಹಿರೇಮಠ, ರೈತ ಮುಖಂಡ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...