22.5 C
Bengaluru
Sunday, January 19, 2020

ಹಕ್ಕುಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಹಿರೇಕೆರೂರ: ರಟ್ಟಿಹಳ್ಳಿ, ಹಿರೇಕೆರೂರು ತಾಲೂಕಿನ ಈ ಸ್ವತ್ತು, ಹಕ್ಕುಪತ್ರ ವಂಚಿತ, ಆರ್ಥಿಕವಾಗಿ ಹಿಂದುಳಿದ 12 ಗ್ರಾಮಗಳ 1600 ಜನರು ಭೂ ಕಂದಾಯ ನಿಯಮದಡಿ ನಮಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿಯಿಂದ ತಾಲೂಕು ಪಂಚಾಯಿತಿ ಕಾರ್ಯಾಲಯದವರೆಗೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಉಜನೇಶ ಕೋಡಿಹಳ್ಳಿ ಮಾತನಾಡಿ, ರಟ್ಟಿಹಳ್ಳಿ, ಹಿರೇಕೆರೂರು ತಾಲೂಕುಗಳ ಹಳ್ಳೂರು, ಕಿರಗೇರಿ, ಚಿಕ್ಕೇರೂರು, ಕ್ಯಾತನಕೇರಿ, ಹಿರೇಮೊರಬ ಸೇರಿ 12 ಗ್ರಾಮಗಳ 1600ಕ್ಕೂ ಹೆಚ್ಚು ಈ ಸ್ವತ್ತು, ಹಕ್ಕುಪತ್ರ ವಂಚಿತ, ಆರ್ಥಿಕವಾಗಿ ಹಿಂದುಳಿದ ಜನರಿಗೆ ಭೂ ಕಂದಾಯ ನಿಯಮ 1964ರ ಕಲಂ 94ಸಿ ಅಡಿಯಲ್ಲಿ ಹಕ್ಕುಪತ್ರ ಕೊಡುವ ಕುರಿತು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಅಧಿಕಾರಿಗಳು, ಜನಪ್ರತಿನಿಧಿಗಳು ಇದಕ್ಕೆ ಯಾವುದೇ ಮನ್ನಣೆ ನೀಡಿಲ್ಲ. ಬಡಕುಟುಂಬಗಳು ಮನೆ ಕಟ್ಟಿಕೊಂಡು 20 ರಿಂದ 25 ವರ್ಷ ಕಳೆದಿವೆ. ಹಕ್ಕುಪತ್ರ ಕೊಡುತ್ತೇವೆ ಎಂದು ಚುನಾವಣೆಯಲ್ಲಿ ನಂಬಿಸಿದ ರಾಜಕೀಯ ನಾಯಕರು ಇಲ್ಲಿಯವರೆಗೆ ಗಮನಹರಿಸಿಲ್ಲ. 2018 ಜನವರಿಯಲ್ಲಿ ಅಂಗರಗಟ್ಟಿಯಲ್ಲಿ ಸರ್ವೆ ನಂ. 1ರಲ್ಲಿ 42ಕ್ಕೂ ಹೆಚ್ಚು ಮನೆಗಳನ್ನು ಸಕ್ರಮಗೊಳಿಸಿ ಹಕ್ಕುಪತ್ರ ವಿತರಿಸಲಾಗಿದೆ. ಜೂನ್​ನಲ್ಲಿ ಭಾವಾಪುರ ಗ್ರಾಮದ ಸರ್ವೆ ನಂ. 12ರಲ್ಲಿ 120ಕ್ಕೂ ಹೆಚ್ಚು ಮನೆಗಳನ್ನು ಸಕ್ರಮಗೊಳಿಸಿ ಹಕ್ಕುಪತ್ರ ವಿತರಿಸಲಾಗಿದೆ. ಈ ಗ್ರಾಮಗಳಲ್ಲಿ ಕಾನೂನಿನ್ವಯ ಹಕ್ಕುಪತ್ರ ವಿತರಿಸಿದಂತೆ, ಉಳಿದ 12 ಗ್ರಾಮಗಳ 16 ನೂರಕ್ಕೂ ಹೆಚ್ಚಿನ ಜನರಿಗೆ ಕೂಡಲೆ ವಿತರಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕಾಗಮಿಸಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷಕುಮಾರ ತಳಕಲ್ ಮಾತನಾಡಿ, ನಿಮ್ಮ ಮನವಿಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಮನವೊಲಿಸಿದರು. ಆದರೆ, ಪ್ರತಿಭಟನಾಕಾರರು ಸ್ಥಳಕ್ಕೆ ಜಿಲ್ಲಾಧಿಕಾರಿ ಅಥವಾ ಜಿಪಂ ಸಿಇಒ ಆಗಮಿಸಿ ಲಿಖಿತವಾಗಿ ನಮಗೆ ಉತ್ತರಿಸುವವರೆಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪಟ್ಟಹಿಡಿದು, ಧರಣಿ ಮುಂದುವರಿಸಿದ್ದಾರೆ. ಹಳ್ಳೂರು, ಕಿರಗೇರಿ, ಚಿಕ್ಕೇರೂರು, ನಿಟ್ಟೂರು, ಚಿಕ್ಕಕಬ್ಬಾರ, ಕ್ಯಾತನಕೇರಿ, ಯಡಗೋಡ, ನೂಲಗೇರಿ, ಕಳಗೊಂಡ, ಅಂಗರಗಟ್ಟಿ, ಹಿರೇಕಬ್ಬಾರ, ಹಿರೇಮೊರಬ ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...