22.5 C
Bengaluru
Sunday, January 19, 2020

ಹಣಗೆರೆಕಟ್ಟೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ತೀರ್ಥಹಳ್ಳಿ: ತಾಲೂಕಿನ ಹಣಗೆರೆಕಟ್ಟೆಯ ಧಾರ್ವಿುಕ ಕೇಂದ್ರಕ್ಕೆ ಮೂಲ ಸೌಕರ್ಯದ ಸಲುವಾಗಿ 3 ಕೋಟಿ ರೂ. ವೆಚ್ಚದಲ್ಲಿ ವಸತಿಗೃಹ, ಶೌಚಗೃಹ ಮತ್ತು ತಡೆಗೋಡೆ ಕಾಮಗಾರಿಗಳಿಗೆ ಶಾಸಕ ಆರಗ ಜ್ಞಾನೇಂದ್ರ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.

ಅಡಿಗಲ್ಲು ಹಾಕಿದ ನಂತರ ಮಾತನಾಡಿದ ಶಾಸಕರು, ಹಿಂದು ಮುಸ್ಲಿಂ ಭಾವೈಕ್ಯತೆಗೆ ಮಾದರಿಯಂತಿರುವ ಈ ಕೇಂದ್ರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ಮೂಲ ಸೌಕರ್ಯ ಮತ್ತು ಸ್ವಚ್ಛತೆಯ ಕೊರತೆಯಿಂದ ರಾಜ್ಯದ ಮೂಲೆ ಮೂಲೆಗಳಿಂದ ದಿನನಿತ್ಯ ಆಗಮಿಸುವ ಸಹಸ್ರಾರು ಮಂದಿ ಭಕ್ತರು ತೊಂದರೆ ಅನುಭವಿಸುವಂತಾಗಿದೆ. ಮುಖ್ಯವಾಗಿ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹ ಸೇರಿ ವಸತಿಗೃಹವನ್ನೂ ನಿರ್ವಿುಸಲಾಗುವುದು. ಸ್ವಚ್ಛತೆ ಕಾಪಾಡದಿದ್ದಲ್ಲಿ ಗಂಭೀರ ರೋಗಗಳಿಗೆ ತುತ್ತಾಗುವ ಆತಂಕವಿದೆ ಎಂದರು.

ಜಿಲ್ಲೆಯಲ್ಲಿ ಅತಿ ಹೆಚ್ಚು ಆದಾಯ ತರುವ ಈ ಧಾರ್ವಿುಕ ಕೇಂದ್ರ ಕೆಲವು ವ್ಯಕ್ತಿಗಳ ಕಪಿಮುಷ್ಟಿಗೆ ಸಿಕ್ಕಿದ ಪರಿಣಾಮ ಇಲ್ಲಿನ ಅಭಿವೃದ್ಧಿ ಕುಂಠಿತಗೊಂಡಿದೆ. ಒತ್ತುವರಿಯೂ ಎಗ್ಗಿಲ್ಲದೆ ನಡೆಯುತ್ತಿರುವುದು ಖಂಡನೀಯ. ಒತ್ತುವರಿ ಮಾಡುವವರನ್ನು ನಿಯಂತ್ರಿಸಿ ಸರ್ಕಾರದ ಆಸ್ತಿಯನ್ನು ಉಳಿಸುವಲ್ಲಿ ಅಧಿಕಾರಿಗಳು ಸಕ್ರಿಯರಾಗಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಮಾತನಾಡಿ, ಧಾರ್ವಿುಕ ಸೌಹಾರ್ದತೆಯ ಈ ಕೇಂದ್ರ ಧರ್ಮಸ್ಥಳ ಹೊರನಾಡು ಮುಂತಾದ ಧಾರ್ವಿುಕ ಕೇಂದ್ರಗಳಂತೆ ಮಾದರಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಪ್ರಮುಖರಾದ ಕೆರೆಹಳ್ಳಿ ರಾಮಪ್ಪ, ಕಾಸರವಳ್ಳಿ ಶ್ರೀನಿವಾಸ್, ಸಾಲೇಕೊಪ್ಪ ರಾಮಚಂದ್ರ, ಬೇಗುವಳ್ಳಿ ಕವಿರಾಜ್, ಆಶೋಕಮೂರ್ತಿ, ಡಿ.ಎಸ್.ಅರುಣ್ ಇತರರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...