More

  ಹಣ್ಣು ತುಂಬಿದ್ದ ಲಾರಿ ಪಲ್ಟಿ

  ಯಲ್ಲಾಪುರ: ಹಣ್ಣು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಬಿಸಗೋಡ ಕ್ರಾಸ್ ಬಳಿಯ ಮುಕ್ತಿಧಾಮದ ಎದುರು ಶನಿವಾರ ನಡೆದಿದೆ.

  ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಲಾರಿಗೆ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಣ್ಣು ತುಂಬಿದ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ದಾಳಿಂಬೆ, ದ್ರಾಕ್ಷಿ, ಬೋರೆ ಹಣ್ಣುಗಳು ಸಂಪೂರ್ಣ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿಯುತ್ತಿದ್ದಂತೆ ಘಟನೆಯ ಸ್ಥಳದಲ್ಲಿ ನೂರಾರು ಸಾರ್ವಜನಿಕರು, ವಿದ್ಯಾರ್ಥಿಗಳು ಜಮಾಯಿಸಿ, ಹಣ್ಣುಗಳನ್ನು ಟ್ರೇ ಸಮೇತ ಹೊತ್ತೊಯ್ಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

  ಲಾರಿ ಸಂಪೂರ್ಣ ಜಖಂಗೊಂಡಿದ್ದು, ಚಾಲಕ-ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸುಮಾರು ಒಂದು ತಾಸು ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ನಂತರ ಪೊಲೀಸರು ಆಗಮಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts