18 C
Bangalore
Friday, December 6, 2019

ಹದಗೆಟ್ಟ ರಸ್ತೆಗೆ ಬಾಲಕ ಬಲಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಗದಗ: ಮುಂಡರಗಿ ತಾಲೂಕಿನ ಸಿಂಗಟಾಲೂರಿನಿಂದ ಹಮ್ಮಿಗಿ ಗ್ರಾಮದವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಬುಧವಾರ ಹಮ್ಮಿಗಿ ಗಾಮದ ವಿದ್ಯಾರ್ಥಿಯೊಬ್ಬ ಸಾರಿಗೆ ಬಸ್ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ.

ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಂದ ಕೊನೆಗೂ ದುರಂತವೊಂದು ಸಂಭವಿಸಿದ್ದು, ಇದಕ್ಕೆ ಯಾರು ಹೊಣೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಮ್ಮಿಗಿ ಗ್ರಾಮದಿಂದ ಎರಡು ಕಿ.ಮೀ. ದೂರದ ಖಾಸಗಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ದೊಡ್ಡಬೀರಪ್ಪ ವಡ್ಡಟ್ಟಿ ಶಾಲಾ ಅವಧಿಯ ನಂತರ ಸೈಕಲ್ ಏರಿ ಮನೆ ಕಡೆಗೆ ಬರುತ್ತಿದ್ದ. ಮುಂಡರಗಿಯಿಂದ ಹಮ್ಮಿಗಿ ಕಡೆಗೆ ಬರುತ್ತಿದ್ದ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇಕ್ಕಟ್ಟಾದ ಮತ್ತು ತೆಗ್ಗು ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಬಸ್​ಗೆ ಸೈಡ್ ಕೊಡಲು ಹೋಗಿ ಆಯ ತಪ್ಪಿ ಬಿದ್ದಿದ್ದರಿಂದ ದುರ್ಘಟನೆ ನಡೆದುಹೋಗಿದೆ.

ಈ ರಸ್ತೆ ಹದಗೆಟ್ಟು ಆರೇಳು ವರ್ಷ ಕಳೆದಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ರಸ್ತೆ ದುರಸ್ತಿ ಆಗಲಿಲ್ಲ. ಸಮ್ಮಿಶ್ರ ಸರ್ಕಾರ ಅವಧಿಯಲ್ಲೂ ರಿಪೇರಿ ಮಾಡಲಿಲ್ಲ. ಇದೀಗ ಬಿಜೆಪಿ ಸರ್ಕಾರದ ಅವಧಿಯಲ್ಲಾದರೂ ರಸ್ತೆ ದುರಸ್ತಿಗೊಳ್ಳಲಿ ಎಂದು ದೇವರಿಗೆ ಮೊರೆ ಹೋಗಬೇಕಾಗಿದೆ ಎಂದು ಅಲ್ಲಿನ ಜನರು ನೊಂದು ಹೇಳುತ್ತಾರೆ.

ಹಮ್ಮಿಗಿ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ, ತಹಸೀಲ್ದಾರ್​ಗೆ ಮನವಿ ಕೊಟ್ಟು ಪರಿಪರಿಯಾಗಿ ಕೇಳಿಕೊಂಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವ ಹತ್ತಾರು ಬೈಕ್ ಸವಾರರು ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ. ರಾತ್ರಿಯಂತೂ ಜೀವ ಕೈಯಲ್ಲಿ ಹಿಡಿದುಕೊಂಡು ವಾಹನ ಚಲಾಯಿಸಬೇಕು.

ಚುನಾವಣೆಯಲ್ಲಿ ಮತ ಕೇಳಲು ಬರುವ ಜನಪ್ರತಿನಿಧಿಗಳು ಇತ್ತ ಕಡೆಗೆ ಗಮನ ಹರಿಸುತ್ತಿಲ್ಲ. ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಿರಹಟ್ಟಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತರಲಾಯಿತು, ಸಾಕಷ್ಟು ಕೆಲಸ ಮಾಡಲಾಯಿತು ಎಂದು ಕೊಚ್ಚಿಕೊಳ್ಳುವವರು ಈ ರಸ್ತೆ ದುರಸ್ತಿಗೆ ಮನಸ್ಸು ಮಾಡಲಿಲ್ಲ. ಶಾಸಕರ ಹಿಂಬಾಲಕರು, ಮರಿ ಲೀಡರ್​ಗಳಿಗೂ ರಸ್ತೆ ದುರವಸ್ಥೆ ಕಾಣಲಿಲ್ಲ. ಹಮ್ಮಿಗಿ ಗ್ರಾಮದಲ್ಲಿ ಬಿಜೆಪಿ ಮತದಾರರು ಹೆಚ್ಚಾಗಿದ್ದು, ಅವರಿಗ್ಯಾಕೆ ಅನುಕೂಲ ಮಾಡಿಕೊಡಬೇಕು ಎಂದು ಕಾಂಗ್ರೆಸ್​ನವರು ಬಿಟ್ಟಿರಬಹುದು ಎಂಬ ಆರೋಪವೂ ಇದೆ. ಐದು ವರ್ಷಗಳ ಕಾಲ ಸಾಕಷ್ಟು ಅನುದಾನ ಬಂದರೂ ಈ ರಸ್ತೆ ಮಾತ್ರ ದುರಸ್ತಿಯಾಗದಿರುವುದು ಆರೋಪಕ್ಕೆ ಪುಷ್ಟಿ ನೀಡುವಂತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತು. ಈಗಾಲಾದರೂ ರಸ್ತೆ ದುರಸ್ತಿ ಆಗಬಹುದು ಎಂದುಕೊಂಡರೂ 15 ತಿಂಗಳು ಪೂರ್ಣಗೊಂಡರೂ ರಸ್ತೆ ಕಾಮಗಾರಿ ಆರಂಭವಾಗಿಲ್ಲ. ‘ಟೆಂಡರ್ ಪೂರ್ಣಗೊಂಡಿದ್ದು, ಇನ್ನೇನು ಕೆಲಸ ಆರಂಭವಾಗಲಿದೆ’ ಎಂದು ಶಾಸಕ ರಾಮಣ್ಣ ಲಮಾಣಿ ಹೇಳುತ್ತಿದ್ದಾರೆ. ಅದು ಎಷ್ಟರ ಮಟ್ಟಿಗೆ ನಿಜವೋ ಗೊತ್ತಿಲ್ಲ.

ಬ್ಯಾರೇಜ್ ವೀಕ್ಷಣೆಗೆ ಪ್ರವಾಸಿಗರೂ ಬರುತ್ತಿಲ್ಲ: ಹಮ್ಮಿಗಿ ಬಳಿ ತುಂಗಭದ್ರಾ ನದಿಗೆ ನಿರ್ವಿುಸಿರುವ ಬ್ಯಾರೇಜ್ ವೀಕ್ಷಿಸಲು ಪ್ರವಾಸಿಗರು ಆಗಮಿಸುತ್ತಿದ್ದರು. ಈ ರಸ್ತೆ ಅವಾಂತರ ನೋಡಿ ಯಾರೂ ಬರುತ್ತಿಲ್ಲ. ರಸ್ತೆ ಸ್ಥಿತಿ ಗೊತ್ತಿಲ್ಲದೆ ಬಂದವರ ಫಜೀತಿ ನೋಡಬಾರದು. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಮೂಲಕ ಬ್ಯಾರೇಜ್ ನೋಡಲು ಬರುತ್ತಿರುವುದು ಸಾಮಾನ್ಯವಾಗಿದೆ.

ಹಮ್ಮಿಗಿ ರಸ್ತೆ ಕೆಟ್ಟು ಬಹಳ ದಿನಗಳಾಗಿದ್ದು, 2.80 ಕೋಟಿ ರೂ. ವೆಚ್ಚದಲ್ಲಿ ಮೂರು ಕಿ.ಮೀ. ಸಿಸಿ ರಸ್ತೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. 15 ದಿನದೊಳಗೆ ಕಾಮಗಾರಿ ಆರಂಭಿಸಲಾಗುವುದು. ಹದಗೆಟ್ಟ ರಸ್ತೆಯಲ್ಲಿ ಹಮ್ಮಿಗಿ ಬಾಲಕನೊಬ್ಬ ಬಸ್ ಚಕ್ರದಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಜರುಗಿದ್ದು ನೋವಿನ ಸಂಗತಿ.
>ರಾಮಣ್ಣ ಲಮಾಣಿ, ಶಾಸಕ

ಕಳೆದ ಹತ್ತು ವರ್ಷಗಳಿಂದ ಸಿಂಗಟಾಲೂರು – ಹಮ್ಮಿಗಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ವಾಹನ ಸವಾರರಿಗೆ ಮತ್ತು ಗ್ರಾಮಸ್ಥರಿಗೆ ತೊಂದರೆಯಾಗಿದೆ. ಆದ್ದರಿಂದ ತಕ್ಷಣ ರಸ್ತೆ ಕಾಮಗಾರಿ ಕೈಗೊಳ್ಳದಿದ್ದರೆ ಹೋರಾಟ ಮಾಡಬೇಕಾಗುತ್ತದೆ.
ದುದ್ದುಪೀರ್ ಹಣಗಿ, ಹಮ್ಮಿಗಿ ಗ್ರಾಮಸ್ಥ

ಸರ್ಕಾರ ಟೆಂಡರ್​ಗಳನ್ನು ತಡೆ ಹಿಡಿಯಲು ಆದೇಶಿಸಿದ್ದರಿಂದ ತಡವಾಗಿದೆ. ಸರ್ಕಾರದ ಆದೇಶ ಬಂದ ಕೂಡಲೆ, ಏಜೆನ್ಸಿ ನಿಗದಿಪಡಿಸಿ ಕಾರ್ಯಾದೇಶ ನೀಡಲಾಗುವುದು.
ಎಸ್.ಬಿ.ವಾಲಿ, ಎಇಇ, ಲೋಕೋಪಯೋಗಿ ಇಲಾಖೆ, ಮುಂಡರಗಿ

ರಸ್ತೆಯಲ್ಲಿ ಸಂಚಾರ ಸಂಕಟ

ಮುಂಡರಗಿ: ತಾಲೂಕಿನ ಜಾಲವಾಡಗಿ ಗ್ರಾಮದಿಂದ ಮುಂಡವಾಡ ಗ್ರಾಮಕ್ಕೆ ತೆರಳುವ ಅಂದಾಜು ಅರ್ಧ ಕಿ.ಮೀ. ರಸ್ತೆ ಹದಗೆಟ್ಟು ಕೆಸರು ಗದ್ದೆಯಂತಾಗಿದೆ. ಇಲ್ಲಿ ಸಂಚರಿಸುವಾಗ ಎಚ್ಚರ ತಪ್ಪಿದರೆ ಅಪಘಾತ ಕಟ್ಟಿಟ್ಟ ಬುತ್ತಿ ಎನ್ನುವಂತಿದೆ.

ಗ್ರಾಮದ ಮಧ್ಯದಲ್ಲಿರುವ ಈ ರಸ್ತೆ ಬರೀ ತಗ್ಗುಗಳಿಂದ ಕೂಡಿದೆ. ಮಳೆಗಾಲದಲ್ಲಿ ತಗ್ಗುಗಳಲ್ಲಿ ನೀರು ನಿಂತು ಕೆಸರುಮಯವಾಗುತ್ತದೆ. ರಸ್ತೆಯ ಪಕ್ಕದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದ್ದು ನೂರಾರು ಮಕ್ಕಳು ನಡೆದುಕೊಂಡು ಹೋಗುತ್ತಾರೆ. ಕೆಲ ಮಕ್ಕಳು ರಸ್ತೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಈ ರಸ್ತೆಯಲ್ಲಿ ವಾಹನಗಳು, ಪಾದಚಾರಿಗಳು ಸಂಚರಿಸಲು ಪರದಾಡಬೇಕಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇತ್ತಕಡೆ ಗಮನ ಹರಿಸಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕಿದೆ.

ಹಲವು ವರ್ಷಗಳಿಂದ ಜಾಲವಾಡಗಿ ಗ್ರಾಮದಲ್ಲಿನ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆ ಕಾಮಗಾರಿ ಕೈಗೊಳ್ಳುವಂತೆ ಹಲವಾರು ಬಾರಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೂ ಸ್ಪಂದಿಸಿಲ್ಲ ಎಂದು ಜಾಲವಾಡಗಿ ಗ್ರಾಮದ ರೈತ ಮುಖಂಡ ಮಲ್ಲಿಕಾರ್ಜುನ ಹಣಜಿ ಆರೋಪಿಸುತ್ತಾರೆ.

ಈ ಕುರಿತು ಲೋಕೋಪಯೋಗಿ ಇಲಾಖೆ ಎಇಇ ಎಸ್.ಬಿ. ವಾಲಿ ಅವರನ್ನು ಸಂರ್ಪಸಿದರೆ, ‘ಜಾಲವಾಡಗಿ ಗ್ರಾಮದಲ್ಲಿನ ರಸ್ತೆಯನ್ನು ಪರಿಶೀಲಿಸಲಾಗಿದೆ. ರಸ್ತೆ ಅಭಿವೃದ್ಧಿಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಆದಷ್ಟು ಬೇಗ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...