ಹದ್ಲೂರಿನ ಮನೆಯಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ

0 Min Read
ಹದ್ಲೂರಿನ ಮನೆಯಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ

ಭಟ್ಕಳ: ತಾಲೂಕಿನ ಹದ್ಲೂರಿನ ಮನೆಯಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಹಾವನ್ನು ಕಂಡ ಮನೆ ಮಂದಿ ಬೆಚ್ಚಿಬಿದ್ದಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಂರ್ಪಸಿ ವಿಷಯ ತಿಳಿಸಿದ್ದಾರೆ. ಇಲಾಖೆಯವರು ಉರಗ ತಜ್ಞ ನೌಪಿಲ್ ಭಟ್ಕಳ ಅವರೊಂದಿಗೆ ಆಗಮಿಸಿ ಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ವಲಯ ಅರಣ್ಯಾಧಿಕಾರಿ ಸವಿತಾ ದೇವಾಡಿಗ, ಉಪವಲಯ ಅರಣ್ಯಾಧಿಕಾರಿ ಶ್ರೀಕಾಂತ ಪವಾರ್, ಅರಣ್ಯರಕ್ಷಕ ಪಿ.ಎಸ್. ತುಂಗಳ ಇದ್ದರು.

See also  ಪೌರಕಾರ್ವಿುಕರ ಗಂಟಲ ದ್ರವ ಪರೀಕ್ಷೆ
Share This Article