ಕೊಪ್ಪಳ: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಶಕುಂತಲಾ ನಾಲತವಾಡ್ ಅವರ ಮನೆ ಚಿತ್ರ ಆಯ್ಕೆಯಾಗಿದ್ದು, ಜಿಲ್ಲೆಯ ಕೀರ್ತಿ ಹೆಚ್ಚಿಸಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 2016-17ರಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮನೆ ಮೇಲೆ ಕುಟುಂಬದೊಂದಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದರು. ಈ ಚಿತ್ರ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ. ಈ ಮೂಲಕ ಜಿಲ್ಲೆಯ ಕೀರ್ತಿ ರಾಷ್ಟ್ರಾದ್ಯಂತ ಪಸರಿಸಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ ಕೆ.ವಿ.ತಿಳಿಸಿದ್ದಾರೆ.