28.5 C
Bengaluru
Monday, January 20, 2020

ಹಾಲಿ ಅಧ್ಯಕ್ಷ ಬೈರಲಿಂಗಯ್ಯಗೆ ಭರ್ಜರಿ ಗೆಲುವು

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ರಾಮನಗರ: ಜಿಲ್ಲಾ ಸರ್ಕಾರಿ ನೌಕರರ ಸಂಘದ 25 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ 13 ಇಲಾಖೆಗಳ 25 ನಿರ್ದೇಶಕ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಆರ್.ಕೆ.ಬೈರಲಿಂಗಯ್ಯ ಭರ್ಜರಿ ಗೆಲುವು ಸಾಧಿಸಿದ್ದು, ಅವರ ತಂಡದ ಬಹುತೇಕ ಸದಸ್ಯರು ಗೆಲುವಿನ ನಗೆ ಬೀರಿದ್ದಾರೆ.

ಜಿಲ್ಲಾ ಸಂಘದ ಒಟ್ಟು 62 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 37 ಮಂದಿ ಅವಿರೋಧ ಆಯ್ಕೆಯಾಗಿದ್ದರು. ಉಳಿದ 25 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯಿತು.

ಚುನಾವಣಾಧಿಕಾರಿಯಾಗಿ ಕರೀಗೌಡ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ವೆಂಕಟಪ್ಪ ಕಾರ್ಯನಿರ್ವಹಿಸಿದರು.

ಆಯ್ಕೆಯಾದವರು: ಪ್ರೌಢಶಿಕ್ಷಣ ಇಲಾಖೆಯ ಎರಡು ಸ್ಥಾನಕ್ಕೆ ಆರ್.ಕೆ.ಬೈರಲಿಂಗಯ್ಯ ಮತ್ತು ಶಿವಸ್ವಾಮಿ, ಸರ್ಕಾರಿ ಪದವಿಪೂರ್ವ ಶಿಕ್ಷಣ ಇಲಾಖೆ – ಮಂಜುನಾಥ್, ಕೃಷಿಇಲಾಖೆ – ಚಿಕ್ಕವೀರಯ್ಯ ಮತ್ತು ಯೋಗೇಶ್, ಪಶುಸಂಗೋಪನೆ ಇಲಾಖೆ – ರವೀಶ್, ಕಂದಾಯ ಇಲಾಖೆ – ರಮೇಶ್,ಎನ್, ಯೋಗೇಶ್, ರಾಜಶೇಖರಮೂರ್ತಿ, ಲೋಕೋಪಯೋಗಿ ಮತ್ತು ಪಂಚಾಯತ್ ಇಂಜಿನಿಯರಿಂಗ್ ಇಲಾಖೆ – ಬೈರಪ್ಪ ಮತ್ತು ಶ್ರೀನಿವಾಸ್, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆ – ರವಿಕುಮಾರ್ ಎಂ, ವೈದ್ಯಕೀಯ ಮತ್ತು ಜಿಲ್ಲಾ ಆಸ್ಪತ್ರೆ – ಡಾ.ನಾರಾಯಣಸ್ವಾಮಿ ಮತ್ತು ಎಚ್.ಎಸ್.ಸದಾನಂದ, ಆಯುಷ್ ಮತ್ತು ಇಎಸ್​ಐ ಇಲಾಖೆ – ಡಾ.ರಂಗಪ್ಪ, ರೇಷ್ಮೆಇಲಾಖೆ – ಪುಟ್ಟಸ್ವಾಮಿ ಡಿ, ನ್ಯಾಯಾಂಗ ಇಲಾಖೆ – ಕೆಂಪೇಗೌಡ ಮತ್ತು ನರಸಿಂಹ.ಸಿ ಆರೋಗ್ಯ ಇಲಾಖೆ – ಕೃಷ್ಣೇಗೌಡ, ದಾಸಪ್ಪ ಮತ್ತು ಪುಟ್ಟಸ್ವಾಮಿಗೌಡ ಪ್ರಾಥಮಿಕ ಶಿಕ್ಷಣ ಇಲಾಖೆಯ ನಾಲ್ಕು ಸ್ಥಾನಕ್ಕೆ – ಎಂ.ಕಾಂತರಾಜ್, ಸಂಜೀವೇಗೌಡ, ಎಚ್. ಹನುಮಯ್ಯ, ಮರುಳಸಿದ್ದಯ್ಯ ಗೆಲುವು ಸಾಧಿಸಿದ್ದಾರೆ.

ಸಿಹಿ ಹಂಚಿ ಸಂಭ್ರಮಿಸಿದ ಬೆಂಬಲಿಗರು: ತೀವ್ರ ಕುತೂಹಲ ಮೂಡಿಸಿದ್ದ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಎರಡು ಸ್ಥಾನಗಳಿಗೆ ಆರ್.ಕೆ.ಬೈರಲಿಂಗಯ್ಯ, ಶಿವಸ್ವಾಮಿ ಮತ್ತು ಎಚ್.ಪಿ. ಮಹಲಿಂಗಯ್ಯ, ಜಯಣ್ಣ ಇವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆರ್.ಕೆ.ಬೈರಲಿಂಗಯ್ಯ, 152 ಮತ, ಶಿವಸ್ವಾಮಿ 177 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿಗಳಾಗಿದ್ದ ಎಚ್.ಪಿ.ಮಹಲಿಂಗಯ್ಯ 134 ಮತ, ಸಿ.ವಿ.ಜಯಣ್ಣ 127 ಮತ ಪಡೆದು ಸೋಲು ಅನುಭವಿಸಿದ್ದಾರೆ. ಬೈರಲಿಂಗಯ್ಯ ಮತ್ತು ತಂಡದ ಸದಸ್ಯರು ಗೆಲುವು ಸಾಧಿಸುತ್ತಿದ್ದಂತೆ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...