ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಗಣರಾಜ್ಯೋತ್ಸವದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.
ಇತ್ತೀಚೆಗೆ ಭಾರತ ಜಾಗತಿಕ ಮಟ್ಟದಲ್ಲಿ ಮುಂಚೂಣಿ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಪರಿವರ್ತನೆಯಾಗಬೇಕಾದ ವಿಷಯಗಳು ಬಹಳಷ್ಟು ಇದ್ದರೂ ದೇಶದಲ್ಲಾಗಿರುವ ಅಭಿವೃದ್ಧಿಯನ್ನು ನಾವು ಮೆಚ್ಚಲೇಬೇಕು ಎಂದರು.
ಪೊಲೀಸ್, ಗೃಹರಕ್ಷಕ ದಳ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಆಕರ್ಷಕ ಕವಾಯತು ಗಮನ ಸೆಳೆಯಿತು. ಕಡೆಯಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ದೇಶಭಕ್ತಿ, ಐಕ್ಯತೆ ಪ್ರದರ್ಶಿಸುವ ನೃತ್ಯಗಳು ಗಮನ ಸೆಳೆದವು.