ಚಿತ್ರದುರ್ಗ: ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ನಗರದ ಸಮಾ ಜ ಕಲ್ಯಾಣಇಲಾಖೆ ಎಸ್‌ಸಿ,ಎಸ್‌ಟಿ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್(ಎ)ವಿದ್ಯಾರ್ಥಿಗಳು ಶನಿವಾರ ಜಿಪಂ ಬಳಿ ಪ್ರತಿಭಟನೆ ನಡೆಸಿದರು.
ನಿತ್ಯವಿದ್ಯಾರ್ಥಿಗಳಿಗೆ ಪೂರೈಸುವ ಉಪಹಾರ,ಊಟ ಕಳಪೆಯಾಗಿರುತ್ತದೆ. ಊಟ,ತಿಂಡಿ,ತರಕಾರಿಯಲ್ಲಿ ಹುಳುಗಳಿರುತ್ತವೆ. ಚಪಾತಿ, ಮೊಟ್ಟೆಯನ್ನು ಸರಿಯಾಗಿ ಬೇಯಿಸಿರುವುದಿಲ್ಲ. ಕಳೆದ ಹಲವು ತಿಂಗಳಿಂದ ಈ ಅವ್ಯವಸ್ಥೆ ಇದ್ದರೂ ವಾರ್ಡನ್ ನಾಗರಾಜ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಹಾಸ್ಟೆಲ್‌ನ ತಲಾ ಒಂದು ಕೊಠಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವಂತಾಗಿದೆ. 260ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳಿಗೆ ಸ್ನಾನಗೃಹ, ಶೌಚಗೃಹಗಳ ಕೊರತೆ ಇದೆ. ಅವುಗಳ ಸ್ವಚ್ಛತೆಗೂ ಗಮನ ಹರಿಸುತ್ತಿಲ್ಲವೆಂದು ಪ್ರತಿಭಟನಾನಿರತರು ಆಕ್ರೋ ಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ,ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು.
ಅಮಾನತಿಗೆ ಶಿಫಾರಸು
ಪ್ರತಿಭಟನಾ ಸ್ಥಳಕ್ಕೆ ಬಂದು ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಬಳಿಕ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತು ವಾರಿ ಸಚಿವ ಡಿ.ಸುಧಾಕರ್ ಅವರು, ಸಂಬಂಧಿತ ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡುವುದಾಗಿ ಹೇಳಿದರು.
ಮುಂದಿನ ವಾರ ಜಿಲ್ಲೆಯ ಎಲ್ಲ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಹೇಳಿದರು. ಮೂಲ ಸೌಕರ್ಯಗಳ ಕೊರತೆ ನೀಗಿ ಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಓದಿನ ಕಡೆ ಗಮನ ಹರಿಸಬೇಕು, ಕಲಿಕೆ ಜವಾಬ್ದಾರಿಯನ್ನು ಸ ರಿಯಾಗಿ ನಿಭಾಯಿಸಬೇಕೆಂದರು.
ಎನ್.ಕಿರಣ್‌ಕುಮಾರ್,ಪ್ರಶಾಂತ್,ಮಣಿಕಂಠ,ಬಿ.ಪ್ರಭು,ಭಾನುಪ್ರಕಾಶ್,ಸುದರ್ಶನ್,ಮಲ್ಲಿಕ್,ಹರೀಶ್,ಭರತ್ ಮತ್ತಿತರ ವಿದ್ಯಾ ರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಚಿವರು ಹಾಸ್ಟೆಲ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಾಸಕರಾದ ಟಿ.ರಘುಮೂರ್ತಿ,ಕೆ. ಸಿ.ವೀರೇಂದ್ರಪಪ್ಪಿ,ಎಡಿಸಿ ಬಿ.ಟಿ.ಕುಮಾರ ಸ್ವಾಮಿ,ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾ ರಿಗಳು ಇದ್ದರು.
ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe
ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್ಫಾಸ್ಟ್…
ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips
ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…
ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್; ಇಲ್ಲಿದೆ ಹೆಲ್ತಿ ಮಾಹಿತಿ | Health Tips
ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…