ಹಿರಿಯ ಸಾಹಿತಿ ಚಂಪಾಗೆ ಘೇರಾವ್

ಮೈಸೂರು: ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಯಿಂದ ಇಂಗ್ಲಿಷ್ ಆರಂಭಿಸುವ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಶುಕ್ರವಾರ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲರಿಗೆ(ಚಂಪಾ) ಘೇರಾವ್ ಹಾಕಿದರು.

ಶುಕ್ರವಾರ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಆಯೋಜಿಸಿದ್ದ ಮೌಢ್ಯ-ಸಾಮಾಜಿಕ ಹೋರಾಟಗಳು: ಒಂದು ಚಿಂತನೆ ವಿಚಾರ ಮಂಡನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾಮಂದಿರ ಮುಂದೆ ಕಾರಿನಲ್ಲಿ ಚಂಪಾ ಬಂದಾಗ ತಡೆದು ನಿಲ್ಲಿಸಿದರು. ಸರ್ಕಾರ ಒಂದು ಸಾವಿರ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಶಾಲೆ ಆರಂಭಿಸಲು ನಿರ್ಧರಿಸಿದೆ. ಆದರೆ ಧಾರವಾಡದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿರೋಧ ವ್ಯಕ್ತಪಡಿಸಿದ್ದೀರಿ. ನಿಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಿದ್ದಾರೆ. ಬಡಮಕ್ಕಳು ಇಂಗ್ಲಿಷ್ ಕಲಿಯಬಾರದೇ ಎಂದು ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಚಂಪಾ, ಶಿಕ್ಷಣವನ್ನು ರಾಷ್ಟ್ರೀಕರಣ ಮಾಡುವಂತೆ ಸಲಹೆ ನೀಡಲಾಗಿದೆ. ಭಾಷೆ ಕಲಿಯುವುದಕ್ಕೆ ವಿರೋಧವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಅಭಿಪ್ರಾಯ ತಿಳಿಸಬಹುದು ಎಂದು ಹೇಳಿ ಹೊರಟು ಹೋದರು.

Leave a Reply

Your email address will not be published. Required fields are marked *