ಹುತಾತ್ಮ ರೈತರ ಕುಟುಂಬದಲ್ಲಿ ನಿಲ್ಲದ ಗೋಳು

Latest News

ಅಲೆ ತಡೆಗೋಡೆ ಕಾಮಗಾರಿಗೆ ವಿರೋಧ

ಕಾರವಾರ: ತಖೋಲ್ ವಾಣಿಜ್ಯ ಬಂದರಿನ ಎರಡನೇ ಹಂತದ ವಿಸ್ತರಣೆಗಾಗಿ ಟ್ಯಾಗೋರ್ ಕಡಲ ತೀರದಿಂದ ಅಲೆ ತಡೆಗೋಡೆ ಕಾಮಗಾರಿ ಆರಂಭವಾಗಿದೆ. ಅದಕ್ಕೆ ಮೀನುಗಾರರು ವಿರೋಧ...

ಪ್ರೇಮಲೋಕ 2ರಲ್ಲಿ ಕ್ರೇಜಿಸ್ಟಾರ್ ಸನ್ಸ್!

ಬೆಂಗಳೂರು: 1987ರಲ್ಲಿ ತೆರೆಕಂಡ ಮ್ಯೂಸಿಕಲ್ ಹಿಟ್ ‘ಪ್ರೇಮಲೋಕ’ ಸಿನಿಮಾ ಬಗ್ಗೆ ಹೆಚ್ಚೇನೂ ಹೇಳುವ ಅವಶ್ಯಕತೆ ಇಲ್ಲ. ಆ ಸಿನಿಮಾ ನಿರ್ವಿುಸಿದ ದಾಖಲೆ ಒಂದೆರಡಲ್ಲ....

ರಫೇಲ್ ರಗಳೆ ಅಂತ್ಯ

ರಫೇಲ್ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಿದ್ದ ಕ್ಲೀನ್​ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ಬಗ್ಗೆ ಯಾವುದೇ...

ಅನನ್ಯ ಸಾಂಸ್ಕೃತಿಕ ಪ್ರಜ್ಞೆಯ ಕನಕದಾಸ

ಕನಕದಾಸರು 16ನೇ ಶತಮಾನದ ಕರ್ನಾಟಕದಲ್ಲಿ ಆಗಿ ಹೋದ ಭಕ್ತಕವಿ. ಕೀರ್ತನೆ, ನಳಚರಿತೆ, ರಾಮಧಾನ್ಯ ಚರಿತ್ರೆ, ಮೋಹನ ತರಂಗಿಣಿ, ಹರಿಭಕ್ತಿ ಸಾರ ಹಾಗೂ ಅನೇಕ...

ಒಳ್ಳೆಯದನ್ನು ಮಾಡುವುದೇ ಧರ್ಮದ ಸರ್ವಸ್ವ

ಪಶ್ಚಿಮದ ಭೋಗಭೂಮಿಯಲ್ಲಿ ಮೈಕೊಡವಿ ನಿಂತ ಈ ಪೂರ್ವರಾಷ್ಟ್ರದ ತ್ಯಾಗಮೂರ್ತಿ ಅವರುಗಳಿಗೆ ತ್ಯಾಗ-ಯೋಗವನ್ನು ಬೋಧಿಸಿದರು. ಅಲ್ಲದೆ ಅಲ್ಲಿ ತನ್ನ ಮಾತೃಭೂಮಿಗಾಗಿ ವೈಯಕ್ತಿಕ ಜೀವನವನ್ನೇ ಸಾರ್ಥಕವಾಗಿ...

ಮುಳಗುಂದ: ಅಂದು ಆಳುವ ಸರ್ಕಾರದ ಕಾನೂನಿನ ಕಪಿಮುಷ್ಠಿಯಲ್ಲಿ ನೇಗಿಲಯೋಗಿಯ ಎದೆಗುಂಡಿಗೆಯನ್ನೇ ಸೀಳಿತ್ತು ಪೊಲೀಸರ ಗುಂಡು. ಚಳವಳಿಯಲ್ಲಿ ಭಾಗವಹಿಸಿದ್ದ ರೈತರು ನೆತ್ತರಿನಲ್ಲಿ ನರಳಾಡಿದರು. ಬೂಟಿನ ಏಟು ಬಿದ್ದವು. ಹಕ್ಕುಪತ್ರಕ್ಕಾಗಿ ಬೃಹತ್ ಚಳವಳಿಯೇ ನಡೆಯಿತು. ಈ ಘಟನೆ ನಡೆದು ಇಂದಿಗೆ 29 ವರ್ಷ. ಹುತಾತ್ಮ ರೈತರ ಕುಟುಂಬದಲ್ಲಿ ಇನ್ನೂ ನಿಂತಿಲ್ಲ ಗೋಳು. ಸಾಗುವಳಿ ಭೂಮಿಗಾಗಿ ಪ್ರಾಣ ತೆತ್ತರೂ ಪರಿಹಾರ ಮಾತ್ರ ಮರೀಚಿಕೆಯಾಗಿದೆ.

1978ಕ್ಕಿಂತಲೂ ಮುಂಚೆ ಸೊರಟೂರ ಹಾಗೂ ಸುತ್ತಮುತ್ತಲಿನ ಗ್ರಾಮದ ಹೊರವಲಯದಲ್ಲಿ ಭೂಮಿ ಸಾಗುವಳಿ ಮಾಡುತ್ತಿದ್ದ ಸಾವಿರಾರು ರೈತರು ಭೂಮಿಯ ಹಕ್ಕನ್ನು ತಮಗೇ ನೀಡಬೇಕು ಎಂದು ಬೇಡಿಕೆ ಇಟ್ಟರು. ಅದು ಕ್ರಮೇಣ ಚಳವಳಿಯ ಸ್ವರೂಪ ಪಡೆಯಿತು. 1990ರಲ್ಲಿ ಸೊರಟೂರ ಗ್ರಾಮ ಸೇರಿ ಸುತ್ತಲಿನ ರೈತರು ಬಗರ್​ಹುಕುಂ ಚಳವಳಿ ಆರಂಭಿಸಿದಾಗ ರೈತ ಸಂಘಟನೆಯನ್ನು ಹತ್ತಿಕ್ಕಲು ಪೊಲೀಸರು ಗೋಲಿಬಾರ್ ನಡೆಸಿದರು. ಆ ಘಟನೆಯಲ್ಲಿ ಸೊರಟೂರಿನ ಮಾಲಿಂಗಪ್ಪ ಮಲ್ಲೇಶಪ್ಪ ಗಿಡ್ಡಕೆಂಚಣ್ಣವರ, ರಣತೂರ ಗ್ರಾಮದ ಚನ್ನವೀರಪ್ಪ ನಿರ್ವಾಣಶೆಟ್ಟರ್, ಜಲ್ಲಿಗೇರಿ ಗ್ರಾಮದ ದೇವಲಪ್ಪ ಲಮಾಣಿ ಎಂಬ ರೈತರು ಮೃತಪಟ್ಟರು. 152 ರೈತರ ಮೇಲೆ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಯಿತು. ಸುಮಾರು 45 ದಿನ ಜೈಲುವಾಸ ಅನುಭವಿಸಿದರೂ ಖೊಟ್ಟಿ ಕೇಸ್ ದಾಖಲಿಸಿ ರೈತರನ್ನು ಕೋರ್ಟ್​ಗೆ ಅಲೆದಾಡಿಸಲಾಯಿತು.

ಬಗರ್ ಹುಕುಂ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ರೈತ ಕುಟುಂಬಗಳಿಗೆ ಇದುವರೆಗೆ ಪರಿಹಾರ ಮಾತ್ರ ದೊರೆತಿಲ್ಲ. ಸಾವಿರಾರು ರೈತರು ಹಕ್ಕುಪತ್ರಕ್ಕಾಗಿ ಹೋರಾಡಿದರೂ ಇಂದಿಗೂ ಆ ಕಹಿ ನೆನಪಲ್ಲೇ ಕಾಲ ಕಳೆಯುವಂತಾಗಿದೆ. ಚಳವಳಿಯಲ್ಲಿ ಮೃತಪಟ್ಟ ರೈತರಿಗೆ ಯಾವ ಗೌರವವನ್ನು ತೋರಿಸದೆ ನಿರ್ಲಕ್ಷ್ಯ ವಹಿಸಿರುವುದು ಈ ಭಾಗದ ಹೋರಾಟಗಾರರ, ರೈತರ ಅಕ್ರೋಶಕ್ಕೆ ಕಾರಣವಾಗಿದೆ.

ಚಳವಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಭೂಮಿ ಸೇರಿದಂತೆ ಪರಿಹಾರ ನೀಡಬೇಕು. ಇಂದಿಗೂ ಸಾಗುವಳಿ ಮಾಡುತ್ತಿರುವ ರೈತರಿಗೆ ಕೂಡಲೆ ಹಕ್ಕುಪತ್ರ ವಿತರಿಸಬೇಕು. ಚಳವಳಿಯಲ್ಲಿ ಹುತಾತ್ಮರಾದ ರೈತರ ಸ್ಮರಣೆಗಾಗಿ ಜಿಲ್ಲಾಡಳಿತದಿಂದಲೇ ಆಚರಣೆ ಮಾಡಬೇಕು. ಕಪ್ಪತಗುಡ್ಡವನ್ನು ವನ್ಯಜೀವಿ ಅಭಯಾರಣ್ಯ ಎಂಬ ಘೊಷಣೆ ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ಮಾಡಲಾಗುವುದು.
| ರಾಮಣ್ಣ ಕಮ್ಮಾರ, ರೈತ ಮುಖಂಡ

ಹುತಾತ್ಮ ದಿನಾಚರಣೆ ಇಂದು : ಸೊರಟೂರಲ್ಲಿ ಬಗರಹುಕುಂ ಚಳವಳಿಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಲು ಜು. 27ರಂದು ಬೆಳಗ್ಗೆ 10-30ಕ್ಕೆ 29ನೇ ವರ್ಷದ ಹುತಾತ್ಮ ದಿನಾಚರಣೆ ರೈತ ಸಂಘಟನೆಯಿಂದ ಜರುಗಲಿದೆ. ಹುತಾತ್ಮ ರೈತ ಗ್ರಾಮದ ಮಾಲಿಂಗಪ್ಪ ಮಲ್ಲೇಶಪ್ಪ ಗಿಡ್ಡಕೆಂಚಣ್ಣವರ ಮನೆಯಿಂದ ಭಾವಚಿತ್ರ ಮೆರವಣಿಗೆ, ಮೃತಪಟ್ಟ ರೈತನ ವೀರಗಲ್ಲಿಗೆ ವಿಶೇಷ ಪೂಜೆ ಹಾಗೂ ಶ್ರದ್ಧಾಂಜಲಿ ಅರ್ಪಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯ ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸುಮತಿಶ್ರೀ ನವಲಿಹಿರೇಮಠ, ಕಾರ್ಯದರ್ಶಿ ಅಣ್ಣಪ್ಪಗೌಡ ದೇಸಾಯಿ ಸೇರಿ ವಿವಿಧ ರೈತಪರ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸುವರು.

ಹೋರಾಟ ದೀಕ್ಷೆ: ಕಪ್ಪತಗುಡ್ಡವನ್ನು ವನ್ಯಜೀವಿ ಅಭಯಾರಣ್ಯ ಮೀಸಲು ಪ್ರದೇಶ ಎಂದು ಸರ್ಕಾರ ಘೂಷಣೆ ಮಾಡಿದವರ ವಿರುದ್ಧವಾಗಿ ಸಾಗುವಳಿ ಭೂಮಿದಾರರಿಗೆ ಹಕ್ಕುಪತ್ರ ವಿತರಿಸುವುದು ಹಾಗೂ ಅಭಯಾರಣ್ಯ ಆದೇಶ ಹಿಂಪಡೆಯಲು ಮುಂದಿನ ಹೋರಾಟಕ್ಕಾಗಿ ಹೋರಾಟ ದೀಕ್ಷೆ ಕಾರ್ಯಕ್ರಮವೂ ನಡೆಯಲಿದೆ.

- Advertisement -

Stay connected

278,469FansLike
563FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...