21 C
Bengaluru
Thursday, January 23, 2020

ಹುಬ್ಬಳ್ಳಿಯಲ್ಲಿ ಹತ್ತಿ ಖರೀದಿ ಪ್ರಾರಂಭ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಹುಬ್ಬಳ್ಳಿ: ತಾಲೂಕಿನಲ್ಲಿ ಭಾರತೀಯ ಹತ್ತಿ ನಿಗಮ (ಸಿಸಿಐ) ವತಿಯಿಂದ ಹತ್ತಿ ಖರೀದಿ ಕೇಂದ್ರ ಗುರುವಾರದಿಂದ ಆರಂಭಿಸಲಾಗಿದೆ. ತಾಲೂಕಿನ ಗಾಮನಗಟ್ಟಿ ಕೈಗಾರಿಕಾ ವಸಾಹತುವಿನಲ್ಲಿರುವ ನಾರಾಂಜಿ ಖಾಂಜಿ ಕಂಪನಿಯಲ್ಲಿ ಖರೀದಿ ನಡೆಯಲಿದೆ.

ಹುಬ್ಬಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ರಾಮಚಂದ್ರ ಜಾಧವ ಮತ್ತು ಸದಸ್ಯರಾದ ಶಂಕರಗೌಡ ಪಾಟೀಲ, ಚನ್ನಬಸಪ್ಪ ಹೊಸಮನಿ, ರೈತ ಮುಖಂಡರಾದ ಗುರು ರಾಯನಗೌಡರ, ಮಹಾದೇವಪ್ಪ ರೇವಡಿಹಾಳ, ಶಿವಾನಂದ ಬೊಮ್ಮನವರ, ಯಶವಂತ ಲಿಂಗರೆಡ್ಡಿ, ಸಂತೋಷ ಕೊಣ್ಣೂರ, ಮುತ್ತು ನಲವಡಿ, ಸಮಿತಿ ಸಹಾಯಕ ಕಾರ್ಯದರ್ಶಿ ಜಿ.ಬಿ. ಕಬ್ಬೇರಳ್ಳಿ, ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಬಿ.ವಿ. ನೇಸರಗಿ, ಸಿಸಿಐ ಅಧಿಕಾರಿ ಗಣೇಶ ಚವ್ಹಾಣ ಸಮ್ಮುಖದಲ್ಲಿ ಹತ್ತಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು.

ಗುಣಮಟ್ಟದ ಹತ್ತಿ: ಹತ್ತಿ ತೇವಾಂಶ ಮೂಲ ಮಿತಿ ಶೇ. 08 ಆಗಿದ್ದು, ಅದಕ್ಕಿಂತ ಹೆಚ್ಚಿಗೆ ಇದ್ದಲ್ಲಿ ಪ್ರತಿ ಕ್ವಿಂಟಾಲ್​ಗೆ ನಿಗದಿತ ಬೆಂಬಲ ದರದಲ್ಲಿ ಸರಾಸರಿ ಕಡಿತ ಮಾಡಲಾಗುವುದು. ತೇವಾಂಶ 12ಕ್ಕಿಂತ ಹೆಚ್ಚಿಗೆಯಿದ್ದಲ್ಲಿ ಖರೀದಿ ಮಾಡಲಾಗುವುದಿಲ್ಲ. ಪ್ರತಿ ಕ್ವಿಂಟಾಲ್​ಗೆ 5550 ರೂ. ದರ ನಿಗದಿಪಡಿಸಲಾಗಿದೆ.

ಉದ್ದ ಹಾಗೂ ಹೆಚ್ಚುವರಿ ಉದ್ದ ನೂಲಿನ ಮೈಕ್ರೋನೇರ್ ಅಂಶ ಮಾಪದಂಡಕ್ಕಿಂತ 02 ಅಂಕ ಹೆಚ್ಚು ಅಥವಾ ಕಡಿಮೆ ಇದ್ದಲ್ಲಿ 25 ರೂ. ಕ್ವಿಂಟಾಲ್​ಗೆ ಕಡಿತಗೊಳಿಸಲಾಗುವುದು. ಹತ್ತಿ ಅಂಡಿಗೆ, ಚೀಲಗಳಲ್ಲಿ ತುಂಬಿ ತರದೇ ವಾಹನಗಳಲ್ಲಿ ಖುಲ್ಲಾ ತರಬೇಕು. ಹತ್ತಿ ಮಾರಾಟಕ್ಕೆ ಬರುವ ರೈತರು

ಉತಾರ (ಪಹಣಿ), ಬ್ಯಾಂಕ್ ಪಾಸ್​ಬುಕ್ ನಕಲು ಪ್ರತಿ, ಆಧಾರ್ ಕಾರ್ಡ್, ಗ್ರಾಮ ಲೆಕ್ಕಾಧಿಕಾರಿಯಿಂದ ಹತ್ತಿ ಬೆಳೆದ ಬಗ್ಗೆ ಧೃಡೀಕರಣ ಪತ್ರಗಳನ್ನು ತರಬೇಕು.

ರೈತರು ಹತ್ತಿ ನಿಗಮದಲ್ಲಿ ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಖರೀದಿಸಲಾದ ಹತ್ತಿಯ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ನೆಫ್ಟ್/ ಆರ್​ಟಿಜಿಎಸ್ ಮುಖಾಂತರ ಜಮಾ ಮಾಡಲಾಗುವುದು. ತಾಲೂಕಿನ ರೈತರು ಹತ್ತಿ ಖರೀದಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದು ಎಪಿಎಂಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...