ಹುಮನಾಬಾದ್​ ಪುರಸಭೆಯಲ್ಲಿ ಕಾಂಗ್ರೆಸ್​ಗೆ ಐತಿಹಾಸಿಕ ಗೆಲುವು

ಹುಮನಾಬಾದ್: ಪಟ್ಟಣದ ಪುರಸಭೆಯ 27 ಸ್ಥಾನಗಳಲ್ಲಿ ಕಾಂಗ್ರೆಸ್ನ ಐವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ಗೆ ಐತಿಹಾಸಿಕ ಗೆಲುವು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ತಿಳಿಸಿದರು.
ಪಟ್ಟಣದಲ್ಲಿ ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳನ್ನು ಸನ್ಮಾನಿಸಿ ವಿಜಯೋತ್ಸವ ಆಚರಣೆ ವೇಳೆ ಮಾತನಾಡಿದ ಅವರು, ಹಿಂದೆ ಇಷ್ಟೊಂದು ಸಂಖ್ಯೆಯಲ್ಲಿ ಅವಿರೋಧ ಆಯ್ಕೆಯಾಗಿರಲಿಲ್ಲ. ಅವಿರೋಧ ಆಯ್ಕೆಗೆ ಸಹಕರಿಸಿದ ಪಟ್ಟಣದ ಜನರಿಗೆ ಹಾಗೂ ಅಭ್ಯರ್ಥಿಗಳಿಗೆ ಅಭಿನಂದನೆಗಳು ಸಲ್ಲಿಸಿದರು.
ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ವ್ಯವಸ್ಥಿತವಾಗಿ ಅಭಿವೃದ್ಧಿ ಕೈಗೊಳ್ಳಲಾಗುವುದು. 22 ಸ್ಥಾನಗಳಲ್ಲಿ 15ಕ್ಕಿಂತಲ್ಲೂ ಹೆಚ್ಚಿನ ಸ್ಥಾನಗಳು ಕಾಂಗ್ರೆಸ್ಗೆ ದೊರೆಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 23ರ ನಂತರ ಚಿಟಗುಪ್ಪ, ಹುಮನಾಬಾದ್ ಪಟ್ಟಣದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಲಾಗುವುದು ಎಂದರು. ಹುಮನಾಬಾದ್ನಲ್ಲಿ 9 ಕಡೆ ಜೆಡಿಎಸ್ ಹಾಗೂ 6 ಕಡೆ ಬಿಜೆಪಿ ಅಭ್ಯರ್ಥಿಗಳೇ ಇಲ್ಲ. 27 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕಿಳಿಸಲಾಗಿದೆ. ಕಾಂಗ್ರೆಸ್ ಟಿಕೆಟ್ಗಾಗಿ ಭಾರಿ ಪೈಪೋಟಿ ನಡೆದಿತ್ತು ಎಂದರು. ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಭೀಮರಾವ ಪಾಟೀಲ್, ಪಕ್ಷದ ಮುಖಂಡರಾದ ಅಫ್ಸರ್ಮಿಯಾ, ಡಾ.ಸಿದ್ದು ಪಾಟೀಲ್, ಉಮೇಶ ಜಂಬಗಿ ಹಾಗೂ ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳು ಇದ್ದರು.

Leave a Reply

Your email address will not be published. Required fields are marked *