20.8 C
Bangalore
Sunday, December 8, 2019

ಹೂಬಿಟ್ಟ ಮಾವಿಗೆ ‘ರಾಜ’ಕಳೆ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಗದಗ: ಹಣ್ಣುಗಳ ರಾಜ ಮಾವು ಎಂದರೆ ಯಾರಿಗಿಷ್ಟವಿಲ್ಲ ಹೇಳಿ. ಹೆಸರು ಕೇಳಿದರೆ ಸಾಕು ಬಾಯಲ್ಲಿ ನೀರೂರುವುದು ಖಚಿತ. ಪ್ರಸಕ್ತ ವರ್ಷ ಮಾವಿನ ಗಿಡಗಳು ಹೂಗಳಿಂದ ಮೈತುಂಬಿಕೊಂಡು ನಳನಳಿಸುತ್ತಿದ್ದು, ಬಂಪರ್ ಇಳುವರಿ ನಿರೀಕ್ಷೆಯಲ್ಲಿದ್ದಾರೆ ಮಾವು ಬೆಳೆಗಾರರು.

ಕಳೆದ ನಾಲ್ಕೈದು ವರ್ಷಗಳಿಂದ ಬರಗಾಲ, ಹವಾಮಾನ ವೈಪರೀತ್ಯ ಹಾಗೂ ಕೀಟಬಾಧೆಯಿಂದ ಇಳುವರಿ ಕುಂಠಿತಗೊಂಡಿದ್ದರಿಂದ ಮಾವು ಬೆಳೆಗಾರರು ಸಂಕಷ್ಟ ಎದುರಿಸಿದ್ದರು. ಪ್ರಸಕ್ತ ವರ್ಷ ಉತ್ತಮ ಇಳುವರಿ ಬರಬಹುದೆಂಬ ನಿರೀಕ್ಷೆಯಲ್ಲಿ ಮಾವು ಬೆಳೆಗಾರರು ಹರ್ಷಗೊಂಡಿದ್ದಾರೆ.

ಕಡಿಮೆ ನೀರಿನಲ್ಲಿ ಮತ್ತು ಒಣ ಪ್ರದೇಶದಲ್ಲಿ ಮಾವು ಸೂಕ್ತವಾಗಿ ಬೆಳೆಯುತ್ತವೆ. ಪ್ರಸಕ್ತ ವರ್ಷ ಮಾವಿನ ಗಿಡಗಳಲ್ಲಿ ಹೂವುಗಳು ನಳನಳಿಸುತ್ತಿವೆ. ಈಗ ಕಾಣಿಸಿಕೊಂಡಿರುವ ಹೂವುಗಳೆಲ್ಲವೂ ಕಾಯಿ ಕಟ್ಟಲು ಸಾಧ್ಯವಿಲ್ಲವಾದರೂ, ಈಗಿರುವ ಹೂವಿನಲ್ಲಿ ಶೇ. 75ರಷ್ಟಾದರೂ ಗಿಡಗಳಲ್ಲಿ ಉಳಿದು ಕಾಯಿ ಕಟ್ಟಿದರೂ ಬಂಪರ್ ಬೆಳೆ ಕಾಣಬಹುದು. ಆದರೆ, ಮುಂದಿನ ದಿನಗಳಲ್ಲಿ ಹೂವು ಕಾಯಿಯಾಗುವ ಸಂದರ್ಭದಲ್ಲಿ ಯಾವುದೇ ರೋಗ ಬರದಿರಲಿ ಎಂದು ದೇವರಲ್ಲಿ ಮೊರೆ ಇಡುತ್ತಿದ್ದಾರೆ.

ಮಾವು ಪ್ರದೇಶ: ಗದಗ ತಾಲೂಕಿನಲ್ಲಿ ಹುಲಕೋಟಿ, ಕುರ್ತಕೋಟಿ, ದುಂದೂರ ಸೇರಿದಂತೆ 750 ಹೆಕ್ಟೇರ್, ಮುಂಡರಗಿ ತಾಲೂಕಿನ ಕೊರ್ಲಹಳ್ಳಿ, ಹಮ್ಮಿಗಿ, ನಾಗರಳ್ಳಿ, ಹೆಸರೂರು ಭಾಗದ 178 ಹೆಕ್ಟೇರ್, ಶಿರಹಟ್ಟಿ ತಾಲೂಕಿನ ಲಕ್ಷೆ್ಮೕಶ್ವರ, ಬಾಲೆಹೊಸೂರ, ಶಿಗ್ಲಿ ಭಾಗದ 150 ಹೆಕ್ಟೇರ್, ರೋಣ ತಾಲೂಕಿನ ನರೇಗಲ್, ಗಜೇಂದ್ರಗಡ, ರಾಜೂರು, ಕುಂಟೋಜಿ ಭಾಗದ 100 ಹೆಕ್ಟೇರ್ ಮತ್ತು ನರಗುಂದ ತಾಲೂಕಿನ ವಿವಿಧೆಡೆ 35 ಹೆಕ್ಟೇರ್ ಸೇರಿದಂತೆ ಒಟ್ಟು 1,350 ಹೆಕ್ಟೇರ್ ಪ್ರದೇಶ ಮಾವು ಬೆಳೆಯಲಾಗಿದೆ. ಅದರಲ್ಲಿ ಕೆಲ ಮಾವಿನ ಗಿಡಗಳು ಚಿಕ್ಕದಾಗಿದ್ದು, 400-500 ಹೆಕ್ಟೇರ್ ಪ್ರದೇಶದಲ್ಲಿ ಇಳುವರಿ ಬರಬಹುದೆಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಉತ್ತಮ ಇಳುವರಿ ನಿರೀಕ್ಷೆ: 2017-18ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 1,084 ಹೆಕ್ಟೇರ್ ಪ್ರದೇಶವಿದ್ದ ಮಾವು, 2018-19ರಲ್ಲಿ 1,213 ಹೆಕ್ಟೇರ್ ಪ್ರದೇಶ ಹೊಂದಿತ್ತು. ಪ್ರಸಕ್ತ ವರ್ಷ 1,350 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಕಳೆದೆರಡು ವರ್ಷಗಳಲ್ಲಿ ಹೆಕ್ಟೇರ್​ಗೆ 7ರಿಂದ 8 ಟನ್ ಇಳುವರಿ ಪಡೆದಿದ್ದ ಮಾವು ಬೆಳೆಗಾರರು, ಪ್ರಸಕ್ತ ವರ್ಷ ಹೆಕ್ಟೇರ್ ಪ್ರದೇಶದಲ್ಲಿ 10-15 ಟನ್ ಮಾವು ಬೆಳೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಜಿಲ್ಲೆಯಲ್ಲಿನ ತಳಿಗಳು: ಗದಗ ಜಿಲ್ಲೆಯಲ್ಲಿ ಅಲ್ಪಾನ್ಸೋ ತಳಿಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಅದರ ಜತೆಗೆ ಕೇಸರ, ದಶೇರಿ, ಮಲ್ಲಿಕಾ, ತೋತಾಪುರಿ, ನೀಲಂನಂತಹ ಮಾವಿನ ವಿವಿಧ ತಳಿಗಳನ್ನು ಬೆಳೆಯುತ್ತಾರೆ.

ಕೀಟಬಾಧೆ ನಿರ್ವಹಣೆ: ಮಾವು ಹೂ ಬಿಡುವ ಸಮಯದಲ್ಲಿ ಮಳೆ ಹಾಗೂ ಮೋಡ ಕವಿದ ವಾತಾವರಣವಿದ್ದರೆ ವಿವಿಧ ಕೀಟ ಮತ್ತು ರೋಗಗಳ ಹಾವಳಿ ಕಂಡುಬರುತ್ತವೆ. ಜಿಗಿ ಹುಳು ನಿಯಂತ್ರಣಕ್ಕಾಗಿ ಮಾವು ಹೂವು ಬಿಡುವುದಕ್ಕೆ ಮುಂಚೆ ಹಾಗೂ ಕಾಯಿ ಕಚ್ಚಿದ ಕೂಡಲೇ ಗಿಡಗಳಿಗೆ 40 ಗ್ರಾಂ ಕಾರ್ಬರಿಲ್ ಅಥವಾ 2.5 ಮಿ.ಲೀ. ಇಮಿಡಾಕ್ಲೋಪಿಡ್ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಬೂದಿ ರೋಗ ನಿಯಂತ್ರಣಕ್ಕಾಗಿ 30 ಗ್ರಾಂ ಗಂಧಕ ಅಥವಾ 10 ಗ್ರಾಂ ಕಾರ್ಬನ್ ಡೈಜಿಂ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು ಎಂದು ತೋಟಗಾರಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಬಾರಿ ಮೋಡ ಮುಸುಕಿದ ವಾತಾವರಣ ಹಾಗೂ ಇಬ್ಬನಿ ಬಿದ್ದ ಪರಿಣಾಮ ಉತ್ತಮವಾಗಿ ಹೂ ಬಿಟ್ಟಿದ್ದರೂ ಕಾಯಿ ಬಿಡುವ ಹಂತದಲ್ಲಿ ಉದುರಿ ಹೋಗಿದ್ದರಿಂದ ಇಳುವರಿ ಕುಂಠಿತಗೊಂಡಿತ್ತು. ಪ್ರಸಕ್ತ ವರ್ಷ ಮೋಡ ಸೇರಿದಂತೆ ಇಬ್ಬನಿ ತೊಂದರೆ ಕಾಣಿಸಿಕೊಂಡಿಲ್ಲ. ಹೆಚ್ಚಿನ ಇಳುವರಿ ನಿರೀಕ್ಷೆಯಲ್ಲಿದ್ದೇವೆ.
| ರಾಮಣ್ಣ ಜಂಬಗಿ, ಮಾವು ಬೆಳೆಗಾರ

ಪ್ರಸಕ್ತ ವರ್ಷ ಮಾವು ಉತ್ತಮ ಇಳುವರಿ ಪಡೆಯಲು ಪೂರಕ ವಾತಾವರಣವಿದೆ. ಹೂವು ಬಿಡುವ ಸಮಯದಲ್ಲಿ ಇಬ್ಬನಿ, ಮಳೆ ಹಾಗೂ ಮೋಡ ಮುಸುಕಿದ ವಾತಾವರಣ ಇರದ ಕಾರಣ ಕೀಟ ಬಾಧೆ ಅಷ್ಟಾಗಿ ಕಾಣಿಸಿಲ್ಲ. ಮಾವು ಗಿಡದ ತುಂಬೆಲ್ಲ ಹೂವುಗಳು ಅರಳಿದ್ದು, ಕೆಲವೆಡೆ ಮಿಡಿ ಕಾಯಿಗಳು ಬಿಟ್ಟಿವೆ. ಮುಂದೆ ಬರಬಹುದಾದ ರೋಗಗಳ ನಿಯಂತ್ರಣಕ್ಕೆ ರೈತರಿಗೆ ತಾಂತ್ರಿಕ ಸಲಹೆ ನೀಡಲಾಗಿದೆ. ಮಾವಿನಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣಾ ಕ್ರಮಗಳು ಕುರಿತು ರೈತರಿಗೆ ಮಾಹಿತಿ ನೀಡಲಾಗುತ್ತದೆ.
| ವೈ.ಎಸ್. ಜಾಲವಾಡಗಿ, ಸಹಾಯಕ ತೋಟಗಾರಿಕೆ ನಿರ್ದೇಶಕರು

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...