More

    ಹೂಳೆತ್ತದ ಚರಂಡಿ, ಶಾಸಕ ಬಸವಂತಪ್ಪ ಗರಂ  -ಅತ್ತಿಗೆರೆಯಲ್ಲಿ ಅಧಿಕಾರಿಗಳಿಗೆ ತರಾಟೆ 

    ದಾವಣಗೆರೆ: ಮಾಯಕೊಂಡ ಕ್ಷೇತ್ರದ ಅತ್ತಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಚರಂಡಿಗಳ ಹೂಳೆತ್ತದ ಅಧಿಕಾರಿ- ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
    ಚರಂಡಿಗಳಲ್ಲಿ ಮಲಿನ ನೀರು ನಿಂತಿದ್ದರೂ ನಿಮ್ಮ ಕಣ್ಣಿಗೆ ಕಾಣುವುದಿಲ್ಲವೇ, ಹೂಳು ತೆಗೆಯದಿದ್ದಲ್ಲಿ ಜನರಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂಬ ಪ್ರಜ್ಞೆ ಇಲ್ಲವೇ ಎಂದು ಅಧಿಕಾರಿ-ಸಿಬ್ಬಂದಿ ವಿರುದ್ಧ ಗರಂ ಆದರು.
    ಗ್ರಾಮೀಣ ಜನರ ಆರೋಗ್ಯ ಕಾಪಾಡಲು ಗ್ರಾಮ, ಶುದ್ಧ ಕುಡಿಯುವ ನೀರು, ಚರಂಡಿಗಳ ಸ್ವಚ್ಛತೆಗೆ ಗಮನ ನೀಡಬೇಕು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಗ್ರಾಪಂ ಸದಸ್ಯರು, ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.
    ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕರು, ಶಿಕ್ಷಕರ ಹಾಜರಾತಿ ಮತ್ತು ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಶಿಕ್ಷಕರ ಜತೆ ಚರ್ಚೆ ನಡೆಸಿದರು. ರಾಮಗೊಂಡನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ, ಔಷಧ ವಿತರಣೆ ಬಗ್ಗೆ ಮಾಹಿತಿ ಪಡೆದರು.
    ಮುಖಂಡರಾದ ಎ.ಜಿ.ನಾಗಪ್ಪ, ರವಿ, ನಂದ್ಯಪ್ಪ, ಅರುಣ್ ಕುಮಾರ್, ಮಹಾದೇವಪ್ಪ, ಶರಣಪ್ಪ, ಕೆ.ಜೆ.ರಂಗನಾಥ್, ಹನುಮಂತಪ್ಪ, ಸಿದ್ದಪ್ಪ, ಮಲ್ಲಿಕಾರ್ಜುನ್ ಇತರರಿದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 24

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts