ಹೃದ್ರೋಗ ಸಂಭವಿಸುವ ಮೊದಲೇ ಗಮನಕೊಡಿ

blank

ಚಿಕ್ಕಮಗಳೂರು: ಹೃದ್ರೋಗಗಳು ಸಂಭವಿಸುವ ಮೊದಲೇ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಹೆಚ್ಚಾಗಿ ಹಿರಿಯರು ದೃಷ್ಟಿದೋಷ ಸೇರಿದಂತೆ ಇನ್ನಿತರೆ ಸಮಸ್ಯೆ ಕಂಡುಬAದಲ್ಲಿ ತಪಾಸಣೆಗೆ ಒಳಗಾಗಬೇಕು ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ.ಸುಂದರಗೌಡ ತಿಳಿಸಿದರು.

ತಾಲೂಕಿನ ಹಿರೇಗೌಜ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೇಚರ್ ಕನ್ಸರ್‌ವೇಷನ್ ಟ್ರಸ್ಟ್, ವಿಜಯ ಡೆಂಟಲ್ ಇಂಟರ್‌ನ್ಯಾಷನಲ್, ಪ್ರಸಾದ್ ನೇತ್ರಾಲಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾನವನ ಶರೀರದಲ್ಲಿ ಕಣ್ಣು ಅತ್ಯಂತ ಅಮೂಲ್ಯವಾದ ಅಂಗ. ಸುರಕ್ಷತೆ, ಕಾಳಜಿಯಿಂದ ಕಾಪಾಡುವಲ್ಲಿ ನಿರ್ಲಕ್ಷö್ಯವಹಿಸಿದರೆ ಅಂಧತ್ವ ಸಂಭವಿಸಬಹುದು ಎಂದ ಎಚ್ಚರಿಸಿದ ಅವರು ಪೊರೆ ಅಥವಾ ದೃಷ್ಟಿ ದೋಷದ ಸಣ್ಣಪುಟ್ಟ ತೊಂದರೆಗೆ ಸಿಲುಕಿದರೆ ಶೀಘ್ರವೇ ಚಿಕಿತ್ಸೆ ಕೊಡಿಸುವುದು ಅನಿರ್ವಾಯ ಎಂದು ಸಲಹೆ ನೀಡಿದರು.
ಇಂದಿನ ಆಹಾರ ಪದ್ಧತಿಯಿಂದ ಮನುಷ್ಯನ ಆರೋಗ್ಯ ಸ್ಥಿತಿ ಹಂತ ಹಂತವಾಗಿ ಹದಗೆಡುತ್ತಿದೆ. ಅಲ್ಪಾಯುಷ್ಯಕ್ಕೆ ಯುವಸಮೂಹ ಹೃದಯಘಾತದಂಥ ಮಾರಕ ಕಾಯಿಲೆಗೆ ತುರ್ತಾಗಿ ಅಕಾಲಿಕ ಸಾವು ಸಂಭವಿಸುತ್ತಿದೆ. ಹೀಗಾಗಿ ಆರೋಗ್ಯದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಿದರೆ ಶೀಘ್ರ ವೈದ್ಯರನ್ನು ಸಂ ಪರ್ಕಿಸಬೇಕು ಎಂದರು.
ಮಾನವರಲ್ಲಿ ಇತ್ತೀಚಿನ ದಿನಗಳಲ್ಲಿ ಮಾನವೀಯತೆ ಮೌಲ್ಯಗಳು ಕ್ಷೀಣಿಸುತ್ತಿವೆ. ಜಾತಿ, ಜಾತಿಗಳ ನಡುವೆ ಸಂಘರ್ಷ ಏರ್ಪಡುತ್ತಿದೆ. ಅಲ್ಲದೇ ವಿಶ್ವಾದ್ಯಂತ ಯುದ್ಧೋಪಾದಿಯಲ್ಲಿ ಅಣುಬಾಂಬ್‌ಗಳ ಬೆದರಿಕೆವೊಡ್ಡುತ್ತಿರುವ ಪರಿಣಾಮ ಜೀವರಾಶಿಗಳ ಅಮೂಲ್ಯ ಭೂಮಂಡಲವನ್ನು ಕಳೆದುಕೊಳ್ಳಬಹುದಾದ ಆತಂಕ ಕಾಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರೇಗೌಜ ಗ್ರಾಪಂ ಅಧ್ಯಕ್ಷೆ ಮಂಜುಳಾ, ಪಟ್ಟಣಕ್ಕೆ ತೆರಳಿ ಚಿಕಿತ್ಸೆಯಿಂದ ವಂಚಿತರಾಗುವ ನಿವಾಸಿಗಳಿಗೆ ಸಂಘ-ಸAಸ್ಥೆಗಳು ಸ್ವಗೃಹಕ್ಕೆ ಸಮೀಪವೇ ನೇತ್ರಾ ತಪಾಸಣಾ ಶಿಬಿರ ಆಯೋಜಿಸಿ ವೃದ್ದರು, ಮಹಿಳೆಯರಿಗೆ ಅನುಕೂಲ ಕಲ್ಪಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಹಿರೇಗೌಜ ಪ್ರೌಢಶಾಲೆ ಶಿಕ್ಷಕ ರಾಜೇಗೌಡ ಮಾತನಾಡಿ, ಇಡೀ ಶರೀರದಲ್ಲಿ ನೇತ್ರವು ಮುಖ್ಯ ಅಂಗ ಹಾಗೂ ಅತ್ಯಂತ ಸೂಕ್ಷö್ಮವಾದುದು. ವಯಸ್ಸು ಮೀರಿದಂತೆ ಕಾಲಕ್ರಮೇಣ ನೇತ್ರಾ ತಪಾಸಣೆ ನಡೆಸುವುದು ಅನಿವಾರ್ಯವಾಗಿದೆ. ಕೇವಲ ದುಡಿಮೆಯಲ್ಲೇ ಜೀವನ ಕಳೆಯದೇ ವೈಯಕ್ತಿಕ ಬದುಕಿಗೆ ಸಮಯ ವ್ಯಯಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ವಿಜಯ್‌ಕುಮಾರ್, ಗ್ರಾಮಸ್ಥರಾದ ಹಾಲಪ್ಪಗೌಡ, ಓಂಕಾರೇಗೌಡ, ಪುಷ್ಪೇಗೌಡ, ಕಂಟ್ರಾಕ್ಟರ್ ಕಾಡಪ್ಪ ಮತ್ತಿತರರಿದ್ದರು.

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…