25.7 C
Bangalore
Sunday, December 15, 2019

ಹೆಚ್ಚಿನ ಪರಿಹಾರದ ನಿರೀಕ್ಷೆಯಲ್ಲಿ ರೈತ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ರಟ್ಟಿಹಳ್ಳಿ: ಆಗಸ್ಟ್​ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ವೀಳ್ಯದೆಲೆ ತೋಟಗಳಿಗೆ ಹಾನಿಯಾಗಿದೆ. ತೋಟಗಳ ಪುನಶ್ಚೇತನಕ್ಕಾಗಿ ಅಪಾರ ಹಣ ಖರ್ಚು ಮಾಡುವಂತಾಗಿದೆ. ಹೀಗಾಗಿ, ಕೂಡಲೇ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ತಾಲೂಕಿನ ಗುಡ್ಡದಮಾದಪುರ, ಅಣಜಿ ನಾಗುವಂದ, ಕಮಲಾಪುರ, ಹೊಸಕಟ್ಟಿ, ತಡಕನಹಳ್ಳಿ ಗ್ರಾಮಗಳಲ್ಲಿ ವೀಳ್ಯದೆಲೆ ಮುಖ್ಯ ಬೆಳೆಯಾಗಿದೆ. ಈ ಭಾಗದಲ್ಲಿ ಅಂದಾಜು 1000 ಎಕರೆಗೂ ಅಧಿಕ ಪ್ರದೇಶದಲ್ಲಿ ವೀಳ್ಯದೆಲೆ ತೋಟ ಇದೆ. ಅತಿಯಾದ ಮಳೆಯಿಂದ 450 ಎಕರೆಗೂ ಅಧಿಕ ತೋಟ ಪ್ರದೇಶದಲ್ಲಿ ಹಾನಿಯಾಗಿದೆ.

ಪ್ರಾರಂಭದಲ್ಲಿ ರೈತರು ವೀಳ್ಯದೆಲೆ ನಾಟಿಗೆ 1 ಎಕರೆಗೆ ಒಂದು ವರ್ಷಕ್ಕೆ 2 ಲಕ್ಷ ರೂ. ಖರ್ಚು ಮಾಡುತ್ತಾರೆ. ನಂತರ 2 ವರ್ಷಕ್ಕೆ ಈ ಬೆಳೆಯು ಫಲ ನೀಡಲು ಪ್ರಾರಂಭಿಸುತ್ತದೆ. ಸುಮಾರು 1 ವರ್ಷಕ್ಕೆ 1 ಲಕ್ಷ ರೂಪಾಯಿಗೂ ಹೆಚ್ಚು ಆದಾಯ ದೊರೆಯುತ್ತದೆ. ಆದರೆ, ಈ ಭಾಗದಲ್ಲಿ ಫಲ ನೀಡುವ ಸಂದರ್ಭದಲ್ಲೇ ಸುರಿದ ಭಾರಿ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಮಳೆಗೆ ಹಾನಿಯಾದ ತೋಟಗಳ ಪುನಶ್ಚೇತನಕ್ಕಾಗಿ ಬಳ್ಳಿ ಕಟ್ಟುವುದು, ನೀರು ಹೊರ ತೆಗೆಯುವುದು, ಗೊಬ್ಬರ ಹಾಕುವುದು… ಹೀಗೆ ಮತ್ತೆ ವರ್ಷಕ್ಕೆ 2 ಲಕ್ಷ ರೂ. ವೆಚ್ಚ ಮಾಡಬೇಕಾಗಿರುವುದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ.

ಅಧಿಕ ಪರಿಹಾರಕ್ಕೆ ಒತ್ತಾಯ: ಬೆಳೆ ಹಾನಿಯಾಗಿರುವ ತೋಟಗಳಿಗೆ ಈಗಾಗಲೆ ಅಧಿಕಾರಿಗಳು, ಜನಪ್ರತಿನಿಧಿಗಳು, ಭೇಟಿ ನೀಡಿದ್ದಾರೆ. ಹೆಚ್ಚಿನ ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ. ಪ್ರಸ್ತುತ ಬೆಳೆ ಹಾನಿಯಾಗಿರುವ 1 ಹೆಕ್ಟೇರ್​ಗೆ ಕಂದಾಯ ಇಲಾಖೆಯು ಪ್ರಕೃತಿ ವಿಕೋಪ ನಿಧಿಯಿಂದ 18 ಸಾವಿರ ರೂ. ಪರಿಹಾರವನ್ನು ನೇರವಾಗಿ ರೈತರ ಖಾತೆಗಳಿಗೆ ಜಮೆ ಮಾಡುತ್ತಿದೆ. ಆದರೆ, ಈ ಪರಿಹಾರದ ಮೊತ್ತ ಯಾವುದಕ್ಕೂ ಸಾಲುವುದಿಲ್ಲ. ಸರ್ಕಾರ ಪರಿಸ್ಥಿತಿ ಅವಲೋಕಿಸಿ ಹೆಚ್ಚಿನ ಪರಿಹಾರ ನೀಡಬೇಕು ಎಂಬುದು ರೈತರ ಒತ್ತಾಯವಾಗಿದೆ.

ಪ್ರಕೃತಿ ವಿಕೋಪದಿಂದಾಗಿ ವೀಳ್ಯದೆಲೆ ತೋಟಗಳಿಗೆ ಹಾನಿಯಾಗಿದೆ. ಸರ್ಕಾರ ಹೆಕ್ಟೇರ್​ಗೆ 18 ಸಾವಿರ ರೂ. ಮಾತ್ರ ಪರಿಹಾರ ನೀಡುತ್ತದೆ. ಇದು ರೈತರಿಗೆ ಸಾಲುವುದಿಲ್ಲ. ಆದ್ದರಿಂದ ಇನ್ನು ಹೆಚ್ಚಿನ ಪರಿಹಾರ ನೀಡಬೇಕು.

| ಮದುಗೌಡ ಪಾಟೀಲ ಗುಡ್ಡದಮಾದಪುರ ರೈತ

ರಟ್ಟಿಹಳ್ಳಿ ತಾಲೂಕಿನಲ್ಲಿ ವೀಳ್ಯದೆಲೆ ತೋಟಗಳು ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ. ಅಧಿಕ ಪರಿಹಾರ ನೀಡುವಂತೆ ಈ ಭಾಗದ ಜನಪ್ರತಿನಿಧಿಗಳು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

| ಸಿ.ಎನ್. ರಂಗಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಹಿರೇಕೆರೂರ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...