ಹೆಣ್ಣು ಕುಟುಂಬದ ಅಭಿವೃದ್ಧಿಯ ಕಣ್ಣು

blank

ಚಿತ್ರದುರ್ಗ: ಹೆಣ್ಣು ಮಕ್ಕಳು ಹೊರೆಯಲ್ಲ, ಕುಟುಂಬದ ಅಭಿವೃದ್ಧಿಯ ಕಣ್ಣು, ಅಡಿಪಾಯವೆಂದು ಚಿತ್ರದುರ್ಗ ತಾಲೂಕು ಆರೋಗ್ಯ ಶಿಕ್ಷಣಾಧಿ ಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.
ನಗರದ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿ, ಹೆಣ್ಣು ಮಕ್ಕಳ ಸುರಕ್ಷತೆ, ಆರೋಗ್ಯ ಮತ್ತು ಶಿಕ್ಷಣ ಉತ್ತೇಜಿಸುವುದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಗುರಿಯಾಗಿದ್ದು, ಹೆಣ್ಣು ಮಕ್ಕಳು ಎಂದಿಗೂ ಕುಟುಂಬಕ್ಕೆ ಹೊರೆಯಾಗುವುದಿಲ್ಲ ಎಂದರು.
ಹೆಣ್ಣು ಮಕ್ಕಳ ರಕ್ಷಣೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಗರ್ಭಾವಸ್ಥೆಯಲ್ಲಿ ಲಿಂಗ ಪತ್ತೆಯನ್ನು ನಿಷೇಧಿಸಿದೆ. ಶಿಕ್ಷಣ ಮತ್ತು ಸಮಾನ ಅವಕಾಶ ಉತ್ತೇಜಿಸಲು 14 ವರ್ಷದವರೆಗೆ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಉಚಿತ ಮತ್ತು ಅಗತ್ಯವಿರುವ ಶಿಕ್ಷಣ ನೀಡಲಾಗುತ್ತಿದೆ. ದೌರ್ಜನ್ಯ ಮತ್ತು ಶೋಷಣೆಗೆ ಬಲಿಯಾದ ಯುವತಿಯರನ್ನು ರಕ್ಷಿಸಲು ಈ ದಿನ ಮೀಸಲಿಡಲಾಗಿದೆ ಎಂದು ಹೇಳಿ ದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ ಮಾತನಾಡಿ, ಬೇಟಿ ಬಚಾವೋ, ಬೇಟಿ ಪಢಾವೋ ಕಾರ‌್ಯಕ್ರಮ, ಸುಕನ್ಯಾ ಸಮೃದ್ಧಿ ಯೋ ಜನೆ, ಪೋಸ್ಟ್ ಆಫೀಸ್ ಖಾತೆ ತೆರೆಯುವುದರ ಕುರಿತು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಣಾ ಅಧಿಕಾರಿ ಮಂಜುಳಾ ಪ್ರತಿಜ್ಞಾವಿಧಿ ಬೋಧಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹನುಮಂತಗೌಡ ಪೂಜಾರ್, ನೆಹರು ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿಲಾಲ್, ಆ ರೋಗ್ಯ ನಿರೀಕ್ಷಣಾಧಿಕಾರಿಗಳಾದ ಗುರುಮೂರ್ತಿ, ಗೋಪಾಲಕೃಷ್ಣ, ಶ್ರೀನಿವಾಸ್‌ಮೂರ್ತಿ, ಜ್ಞಾನವಿಕಾಸ ಶಾಲೆ ಕಾರ‌್ಯದರ್ಶಿ ಮನೋಜ್, ಮುಖ್ಯಶಿಕ್ಷಕ ಮಾರುತಿ, ದೈಹಿಕ ಶಿಕ್ಷಣ ಶಿಕ್ಷಕ ರುದ್ರಪ್ಪ, ಸಹ ಶಿಕ್ಷಕರಾದ ಮಂಜುನಾಥ್, ಅಶೋಕ್, ಸುಮಿತ್ರಾ, ಮಂಜುಳಾ, ನಾಜಿಮಾ, ಆರ್ಶಿಯ, ಗೀತಾ, ಪವಿತ್ರಾ ಮತ್ತಿತರರು ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…