26.8 C
Bangalore
Friday, December 13, 2019

ಹೆದ್ದಾರಿ ತಡೆದು ರೈತರ ಪ್ರತಿಭಟನೆ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ನರಗುಂದ: ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯುವಂತೆ ರೈತರು ಮಂಗಳವಾರ ಪಟ್ಟಣದ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಮಹದಾಯಿ ಮಹಾವೇದಿಕೆ ಸಂಚಾಲಕ ಶಂಕರಪ್ಪ ಅಂಬಲಿ ಮಾತನಾಡಿ, ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಮಹದಾಯಿ, ಕಳಸಾ-ಬಂಡೂರಿ ಯೋಜನೆಗೆ ಆಗ್ರಹಿಸಿ 2016ರಲ್ಲಿ ನರಗುಂದ ಪಟ್ಟಣದ ಎಪಿಎಂಸಿಯಲ್ಲಿ ರೈತರ ಸಭೆ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಬೇರೆ ಎಲ್ಲಿಯೋ ನಡೆದ ಗಲಾಟೆಗೆ ಸಂಬಂಧಿಸಿ ಮಹದಾಯಿಯ ಲೋಕನಾಥ ಹೆಬಸೂರ, ಹರೀಶ ಕಾಲವಾಡ, ಸಂತೋಷ ವಡ್ಡರ, ಶಂಕರಪ್ಪ ಅಂಬಲಿ, ಕಾಡಪ್ಪ ಕಾಕನೂರ, ಬಸವರಾಜ ಸಾಬಳೆ, ಪರಶುರಾಮ ಜಂಬಗಿ, ವೀರಬಸಪ್ಪ ಹೂಗಾರ, ಹನಮಂತಪ್ಪ ಸರಗಣಾಚಾರಿ, ಅಂದಾನಿಗೌಡ ಪಾಟೀಲ, ಚಿನ್ನಪ್ಪ ಮುತ್ತಿನ, ವಿಠ್ಠಲ ಜಾಧವ ಸೇರಿ ಒಟ್ಟು, 12 ಅಮಾಯಕ ರೈತ ಮುಖಂಡರ ಮೇಲೆ ಸರ್ಕಾರ ಕೇಸ್ ದಾಖಲಿಸಿದೆ. 2018 ರಲ್ಲಿ ರೈತರಿಗೆ ಅಧಿಕೃತವಾಗಿ ಕೋರ್ಟ್ ಸಮನ್ಸ್ ನೀಡದೇ, ಪೊಲೀಸರು ಮೌಖಿಕವಾಗಿ ನರಗುಂದ ಜೆಎಂಎಫ್​ಸಿ ಕೋರ್ಟ್​ಗೆ ಹಾಜರಾಗುವಂತೆ ಮೇಲಿಂದ ಮೇಲೆ ರೈತರಿಗೆ ಸೂಚಿಸಿದ್ದರು. ಆದರೆ, ನಾವು ಯಾರು ಕೂಡ ಇದುವರೆಗೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಪೊಲೀಸರು ಮಾರ್ಚ್ 12 ರೊಳಗಾಗಿ ಕೋರ್ಟ್​ಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ 12 ಜನರ ಪೈಕಿ 9 ರೈತರು ನರಗುಂದ ಜೆಎಂಎಫ್​ಸಿ ಕೋರ್ಟ್​ಗೆ ಹಾಜರಾಗಿ ಜಾಮೀನನ್ನು ಪಡೆದಿದ್ದೇವೆ. ನಮಗಾದ ಅನ್ಯಾಯ ಖಂಡಿಸಿ ರಸ್ತೆತಡೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜು ಸಾಬಳೆ, ಅರ್ಜುನ ಮಾನೆ, ಹರೀಶ ಕಾಲವಾಡ, ಕಾಡಪ್ಪ ಕಾಕನೂರ, ರೈತ ಸೇನಾ ಕರ್ನಾಟಕದ ಪರಶುರಾಮ ಜಂಬಗಿ, ಮಹದಾಯಿ ಮಲಪ್ರಭಾ ಹೋರಾಟ ಸಮಿತಿಯ ಅಧ್ಯಕ್ಷ ಈರಬಸಪ್ಪ ಹೂಗಾರ, ಕಲ್ಲನಗೌಡ ಕರಿಗೌಡ್ರ, ಗಂಗನಗೌಡ ಮೇಲಿನಮನಿ, ಶರಣಯ್ಯಾ ಮಠಪತಿ, ಚನ್ನಪ್ಪ ಮುತ್ತಿನ, ವಿಠಲ ಜಾಧವ, ವಾಸು ಭೋಸ್ಲೆ, ಹನುಮಂತ ಕೋರಿ, ಇತರರು ಇದ್ದರು.

ಮಾತಿನ ಚಕಮಕಿ

ಸ್ಥಳಕ್ಕಾಗಮಿಸಿದ ಸಿಪಿಐ ಸುಧೀರಕುಮಾರ ಬೆಂಕಿ, ರಾಸ್ತಾ ರೋಖೋ ಮಾಡಿದರೆ ರೈತರ ಸಮಸ್ಯೆ ಬಗೆಹರಿಯುವುದಿಲ್ಲ. ರಸ್ತೆ ಸಂಚಾರಕ್ಕೆ ಮುಕ್ತ ಅವಕಾಶ ನೀಡಿ ಎಂದು ರೈತರಲ್ಲಿ ಮನವಿ ಮಾಡಿದಾಗ, ರೈತರು ಹಾಗೂ ಸಿಪಿಐ ಮಧ್ಯೆ ಮಾತಿನ ಚಕಮಕಿ ನಡೆಯಿತು. ಸಂಜೆ 6 ಗಂಟೆಗೆ ಪೊಲೀಸ್ ಠಾಣೆಗೆ ಬನ್ನಿ ಮಾತನಾಡೋಣ ಎಂದು ಸಿಪಿಐ ತಿಳಿಸಿದರು. ಪೊಲೀಸ್ ಠಾಣೆಗೆ ಬಂದು ನಿಮ್ಮ ಜತೆಗೆ ಮಾತನಾಡಿದರೆ ನಮ್ಮ ಸಮಸ್ಯೆ ಬಗೆಹರಿಯುವುದಿಲ್ಲ. ನಾವು ನೀವು ಕರೆದ ಸಭೆಗೆ ಬರುವುದಿಲ್ಲ ಎಂದು ರೈತರು ಸಿಪಿಐ ಸುಧೀರಕುಮಾರ ಬೆಂಕಿ ಅವರಿಗೆ ಉತ್ತರಿಸಿ ಪ್ರತಿಭಟನೆ ಹಿಂಪಡೆದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....