More

  ಹೆದ್ದಾರಿ ಸಂಚಾರ ತಡೆದು ರೈತ ಸಂಘ ಪ್ರತಿಭಟನೆ

  ಶ್ರೀರಂಗಪಟ್ಟಣ: ತಮಿಳುನಾಡಿಗೆ ನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.


  ಪಟ್ಟಣದ ಕುವೆಂಪು ವೃತ್ತದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು.


  ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ, ಮುಖಂಡ ಪಾಂಡು, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಅಗ್ರಹಾರ ಶಂಕರ್, ಹಿರಿಯ ಮುಖಂಡರಾದ ಕಡತನಾಳು ಬಾಲಕೃಷ್ಣಣ್ಣ, ಪಾ.ಲಾ.ರಾಮೇಗೌಡ, ನೆಲಮನೆ ಶಂಭೂಗೌಡ್ರು, ತಡಗವಾಡಿ ದೇವೇಗೌಡ, ಪಾಲಹಳ್ಳಿ ಸೋಮಣ್ಣ, ಪುಟ್ಟರಾಮು,ಎಂ.ಶೆಟ್ಟಹಳ್ಳಿ ಪುರುಷೋತ್ತಮ್, ಕೂಡಲಕುಪ್ಪೆ ನಾಗರಾಜು, ದೊಡ್ಡಪಾಳ್ಯ ಜಯರಾಮೇಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts