18.1 C
Bangalore
Saturday, December 7, 2019

ಹೆದ್ದಾರಿ ಸಂಚಾರ, ಪ್ರಯಾಣಿಕರಿಗೆ ಸಂಚಕಾರ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಕರಿಯಪ್ಪ ಅರಳಿಕಟ್ಟಿ ಹಾವೇರಿ/ರಾಣೆಬೆನ್ನೂರ:ಅಪಘಾತ ಪ್ರಮಾಣ ಕಡಿಮೆಗೊಳಿಸುವ ಹಾಗೂ ಸುಗಮ ಸಂಚಾರ ಸೇವೆ ಒದಗಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ-4 ಅನ್ನು ಷಟ್ಪಥ ರಸ್ತೆಯನ್ನಾಗಿ ಮಾಡಲು ಹಸಿರು ನಿಶಾನೆ ತೋರಿಸಿದೆ. ಆದರೆ, ರಸ್ತೆ ಅಭಿವೃದ್ಧಿ ಕಾಮಗಾರಿಯು ವಾಹನ ಸವಾರರಿಗೆ ಸಂಚಕಾರ ತಂದೊಡ್ಡಿದೆ.

ರಸ್ತೆ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಂದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ದಿನಗಳಲ್ಲೇ ಸರಣಿ ಅಪಘಾತ ಹೆಚ್ಚಾಗುತ್ತಿವೆ. ಹೀಗಾಗಿ, ವಾಹನ ಸವಾರರು ಅಂಗೈಯಲ್ಲಿ ಜೀವ ಹಿಡಿದು ಸಂಚರಿಸುವ ಸ್ಥಿತಿ ನಿರ್ವಣವಾಗಿದೆ.

ಮೇಲ್ಸೇತುವೆ ನಿರ್ವಣ, ರಸ್ತೆ ಡಾಂಬರೀಕರಣ ಕಾಮಗಾರಿ ನಡೆದ ಸ್ಥಳಗಳಲ್ಲಿ ರಸ್ತೆ ಮಾರ್ಗ ಬದಲಾಯಿಸಿದ ಹಾಗೂ ರಸ್ತೆ ಬಂದ್ ಇರುವ ಕೆಲ ಮಾರ್ಗಗಳಲ್ಲಿ ಸೂಕ್ತ ನಾಮಫಲಕ ಅಳವಡಿಸದಿರುವುದೇ ಹೆಚ್ಚು ಅಪಘಾತಗಳು ನಡೆಯಲು ಕಾರಣವಾಗಿವೆ.

ಎಲ್ಲೆಲ್ಲಿ ಮಾರ್ಗ ಬದಲಾವಣೆ?:ಹಾವೇರಿ ಜಿಲ್ಲೆಯ ಹದ್ದು ಪ್ರಾರಂಭವಾಗುವ ತಡಸ ಕ್ರಾಸ್​ನಿಂದ ರಾಣೆಬೆನ್ನೂರ ತಾಲೂಕಿನ ಕವಲೆತ್ತು ಗ್ರಾಮದವರೆಗೆ ಒಟ್ಟು 116 ಕಿಲೋ ಮೀಟರ್ ರಸ್ತೆ ವಿಸ್ತರಣೆ ಕಾಮಗಾರಿ ಭರದಿಂದ ಸಾಗಿದೆ. ತಡಸ ಕ್ರಾಸ್, ಶಿಗ್ಗಾಂವಿ ತಾಲೂಕಿನ ರಾಮಾಪುರ ಕ್ರಾಸ್, ಮಡ್ಲಿ ಕ್ರಾಸ್, ಶಿಗ್ಗಾಂವಿಯ ಗಂಗಿಬಾವಿ ಕ್ರಾಸ್, ಸವಣೂರು ತಾಲೂಕಿನ ಕುಣಿಮೆಳ್ಳಿಹಳ್ಳಿ (ವರದಾ ನದಿ ಸೇತುವೆ ಸಮೀಪ), ಹುಬ್ಬಳ್ಳಿ-ಹಾವೇರಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ರಾಣೆಬೆನ್ನೂರ-ಹಾವೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಹಾವೇರಿ ತಾಲೂಕಿನ ನೆಲೋಗಲ್ಲ, ಬ್ಯಾಡಗಿ ತಾಲೂಕಿನ ಛತ್ರ ಗ್ರಾಮ, ರಾಣೆಬೆನ್ನೂರ ತಾಲೂಕಿನ ಕಾಕೋಳ ಗ್ರಾಮ, ಕದರಮಂಡಲಗಿ ಕ್ರಾಸ್, ಹಾವೇರಿ-ರಾಣೆಬೆನ್ನೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಹರಿಹರ-ರಾಣೆಬೆನ್ನೂರಿಗೆ ಸಂರ್ಪಸುವ ರಸ್ತೆ, ಜಿಲ್ಲೆಯ ಗಡಿಭಾಗ ಮಾಕನೂರ ಕ್ರಾಸ್ ಸೇರಿ 15ಕ್ಕೂ ಹೆಚ್ಚು ಕಡೆಗಳಲ್ಲಿ ಮೇಲ್ಸೇತುವೆ ನಿರ್ವಿುಸುತ್ತಿರುವ ಕಾರಣ ವಾಹನ ಸಂಚಾರಕ್ಕಾಗಿ ಮಾರ್ಗ ಬದಲಾಯಿಸಲಾಗಿದೆ.

ಸುರಕ್ಷತೆ ಕೊರತೆ: ಗುತ್ತಿಗೆದಾರರು ರಸ್ತೆ ಮಾರ್ಗ ಬದಲಾಯಿಸಿದ ಕಡೆಗಳಲ್ಲಿ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು. ರಾಣೆಬೆನ್ನೂರ ನಗರದಿಂದ ಹಾವೇರಿಗೆ ಹೋಗುವ ಹೆದ್ದಾರಿಯಲ್ಲಿ ಯು ಟರ್ನ್ ಇದ್ದಲ್ಲಿ ನಾಮಫಲಕವೇ ಇಲ್ಲ. ಹಾವೇರಿ-ಹುಬ್ಬಳ್ಳಿಗೆ ಹೋಗುವ ದಾರಿಯಲ್ಲೂ ನಾಮಫಲಕವಿಲ್ಲ. ಡಾಂಬರೀಕರಣ ಹಾಕಿ ಅರ್ಧ ಮಾಡಿದ ರಸ್ತೆಗಳಲ್ಲಿ ಅಡ್ಡಲಾಗಿ ಯಾವುದೇ ಫಲಕ ಅಳವಡಿಸಿಲ್ಲ. ಇನ್ನು ರಸ್ತೆ ಮಾರ್ಗ ಬದಲಾಯಿಸಿದ ಕಡೆಗಳಲ್ಲಿ ರೋಡ್ ಹಂಪ್ಸ್ ಹಾಕಲಾಗಿದೆ. ಆದರೆ, ಈ ಕುರಿತು ಸೂಚನಾ ಫಲಕವನ್ನೂ ಹಾಕಿಲ್ಲ. ಹಾವೇರಿ, ಕಾಕೋಳ, ಮಾಕನೂರ, ಕುಣಿಮೆಳ್ಳಿಹಳ್ಳಿಗೆ ಬಳಿ ಮೇಲ್ಸೇತುವೆ ಕಾಮಗಾರಿ ನಡೆದಿದ್ದರೂ ರಸ್ತೆಗೆ ಅಡ್ಡಲಾಗಿ ಮಣ್ಣಿನ ಚೀಲಗಳನ್ನು ಇಡಲಾಗಿದೆ ಹೊರತು ಮಾರ್ಗ ಬದಲಿಸಿದ ನಾಮಫಲಕ ಹಾಕಿಲ್ಲ. ಇದು ವಾಹನ ಸವಾರರ ಸಂಚಾರಕ್ಕೆ ಗೊಂದಲಕ್ಕೆ ಕಾರಣವಾಗಿದೆ. ರಾತ್ರಿ ಸಮಯದಲ್ಲಂತೂ ಹೇಳತೀರದಷ್ಟು ಸಮಸ್ಯೆ ಎದುರಾಗುತ್ತಿದೆ.

ಈ ಕುರಿತು ಗಮನ ಹರಿಸಬೇಕಾದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿದ್ರೆಗೆ ಜಾರಿದಂತಿದೆ. ಹೀಗಾಗಿ ವಾಹನ ಸವಾರರು ನಿತ್ಯವೂ ಹಿಡಿಶಾಪ ಹಾಕುತ್ತ ಓಡಾಡುತ್ತಿದ್ದಾರೆ. ಇನ್ನು ಮುಂದಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆಯಲ್ಲಿ ಸಂಚಾರ ಸುರಕ್ಷತೆಗೆ ಕ್ರಮಗಳನ್ನು ಅನುಸರಿಸುವಂತೆ ಗುತ್ತಿಗೆದಾರರಿಗೆ ಸೂಚಿಸಬೇಕಿದೆ.

14 ಜೀವ ಬಲಿ:ರಸ್ತೆ ಕಾಮಗಾರಿ ಆರಂಭದ 2018ರಿಂದ ಈವರೆಗೆ ರಾಣೆಬೆನ್ನೂರ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 349 ಅಪಘಾತ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 102 ಜನ ಗಾಯಗೊಂಡಿದ್ದರೆ, 14 ಜನ ಪ್ರಾಣ ಕಳೆದುಕೊಂಡಿದ್ದಾರೆ. 2019ರಲ್ಲಿ 6 ಪ್ರಕರಣ ದಾಖಲಾಗಿದ್ದು, 6 ಜನ ಗಾಯಗೊಂಡಿದ್ದರೆ, ಇಬ್ಬರು ಜೀವ ಬಿಟ್ಟಿದ್ದಾರೆ. ಇತ್ತೀಚೆಗೆ ರಾಣೆಬೆನ್ನೂರ ತಾಲೂಕಿನ ಹನುಮನಮಟ್ಟಿ ಬಳಿ ನಡೆದ ಕಾರು ಅಪಘಾತದಲ್ಲಿ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇದೇ ರೀತಿ ಹಾವೇರಿ, ಶಿಗ್ಗಾಂವಿ, ಬ್ಯಾಡಗಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲೂ ಅಪಘಾತ ಪ್ರಕರಣಗಳು ದಾಖಲಾಗಿದ್ದು, ಹಲವರು ಜೀವ ಕಳೆದುಕೊಂಡ ಉದಾಹರಣೆಗಳಿವೆ.

ರಾಂಗ್ ಸೈಡ್ ಸಂಚರಿಸುವವರೇ ಹೆಚ್ಚು!:ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಣೆಬೆನ್ನೂರ, ಹಾವೇರಿ ಹಾಗೂ ಶಿಗ್ಗಾಂವಿ ಭಾಗದಲ್ಲಿ ರಸ್ತೆ ಮಾರ್ಗ ಬದಲಾಯಿಸಿ ಯು ಟರ್ನ್ ತೆಗೆದುಕೊಳ್ಳಲು ಮಾರ್ಗಸೂಚಿ ಫಲಕಗಳನ್ನು ಹಾಕಲಾಗಿದೆ. ಆದರೆ, ಸರ್ಕಾರಿ ಬಸ್ ಸೇರಿ ಯಾವ ವಾಹನದವರೂ ಮಾರ್ಗಸೂಚಿಯಂತೆ ಹೋಗುತ್ತಿಲ್ಲ. ಬದಲಾಗಿ ಏಕಮುಖ ಸಂಚಾರ (ಒನ್​ವೇ) ರಸ್ತೆಯಲ್ಲಿಯೇ ಸಂಚರಿಸುತ್ತಿದ್ದಾರೆ. ಹೀಗಿದ್ದಾಗ ಎದುರಿಗೆ ಬರುವ ವಾಹನದವರು ಕೊಂಚ ನಿರ್ಲಕ್ಷ್ಯ ವಹಿಸಿದರೆ ಸಾಕು ಅಪಘಾತ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ. ಹೆದ್ದಾರಿಯಲ್ಲಿ ನಡೆದ ಅಪಘಾತ ಪ್ರಕರಣಗಳಲ್ಲಿ ಶೇ. 60ರಷ್ಟು ರಾಂಗ್ ಸೈಡ್ ವಾಹನ ಓಡಿಸಿದ್ದರಿಂದಲೇ ಆಗಿವೆ ಎಂಬುದು ಪೊಲೀಸ್ ಅಧಿಕಾರಿಗಳ ಅಭಿಪ್ರಾಯವಾಗಿದೆ.

ಎಚ್ಚೆತ್ತುಕೊಳ್ಳಬೇಕಿದೆ ಪ್ರಯಾಣಿಕರು:ಸರ್ಕಾರಿ ಬಸ್ ಸೇರಿ ಯಾವುದೇ ವಾಹನ ರಾಂಗ್ ಸೈಡ್​ನಿಂದ ಸಂಚರಿಸುವಾಗ ಅಪಘಾತವಾಗಿ ವಾಹನದಲ್ಲಿದ್ದವರು ಮೃತಪಟ್ಟರೆ ಅದೊಂದು ಉದ್ದೇಶಪೂರ್ವಕ ಅಪಘಾತ ಎನ್ನುವ ಆರೋಪದ ಮೇಲೆ ಅಂಥವರಿಗೆ ಜೀವ ವಿಮಾ ಪರಿಹಾರವೂ ಸಿಗುವುದಿಲ್ಲ. ಬಸ್, ಟಂಟಂ, ಟೆಂಪೋ ಸೇರಿ ಯಾವುದೇ ವಾಹನ ಚಾಲಕರು ರಾಂಗ್ ಸೈಡ್ ಓಡಿಸಲು ಮುಂದಾದರೆ, ಪ್ರಯಾಣಿಕರು ಕೂಡಲೇ ಅದನ್ನು ತಡೆಯಬೇಕು. ಅಂಥ ಚಾಲಕರ ವಿರುದ್ಧ ಪೊಲೀಸರಿಗೆ ದೂರು ನೀಡುವ ಮೂಲಕ ಪಾಠ ಕಲಿಸಬೇಕು. ಇಲ್ಲವಾದರೆ ನಿಮ್ಮನ್ನು ನಂಬಿಕೊಂಡ ಕುಟುಂಬ ಬೀದಿ ಪಾಲಾಗುವುದು ಗ್ಯಾರಂಟಿ.

ಹೆದ್ದಾರಿಯಲ್ಲಿ ಗಾಡಿ ಓಡಿಸುವುದೇ ದುಸ್ತರವಾಗಿದೆ. ಜಾಗೃತರಾಗದಿದ್ದರೆ ಜೀವ ಕಳೆದು ಹೋದಂತೆ ಆಗುತ್ತದೆ. ರೋಡ್ ಹಂಪ್ಸ್ ಇದ್ದಲ್ಲಿ ಮಾಹಿತಿ ಫಲಕವಿಲ್ಲ. ಡಾಂಬರೀಕರಣ ಮಾಡಿರುವ ರಸ್ತೆ ಅರ್ಧಕ್ಕೆ ನಿಲ್ಲಿಸಿದ್ದರೆ, ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಸಿಲ್ಲ. ಇದರಿಂದ ವಾಹನ ಓಡಿಸುವಾಗ ತುಂಬ ಹಿಂಸೆ ಅನುಭವಿಸಬೇಕಾಗುತ್ತಿದೆ. ಈ ಕುರಿತು ಹೆದ್ದಾರಿ ಪ್ರಾಧಿಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.

| ಈಶ್ವರ ಎಂ. ಟ್ಯಾಕ್ಸಿ ಚಾಲಕ ಹರಿಹರ

ಹೆದ್ದಾರಿ ವಿಸ್ತರಣೆ ಮಾಡುತ್ತಿರುವುದು ಸ್ವಾಗತಾರ್ಹ. ಆದರೆ, ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಕೊಡಬೇಕು. ಆದರೆ, ಇಲ್ಲಿ ಯಾವುದೇ ಸುರಕ್ಷತೆ ಕ್ರಮ ಅನುಸರಿಸುತ್ತಿಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.

| ಸುರೇಶ ಹೊಸರಿತ್ತಿ, ಕಾರು ಚಾಲಕ

ಕಾಮಗಾರಿ ನಡೆದ ಭಾಗದಲ್ಲಿ ಸಮರ್ಪಕವಾಗಿ ನಾಮಫಲಕ ಅಳವಡಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಯಾವ ಭಾಗದಲ್ಲಿ ಸರಿಯಾಗಿ ಅಳವಡಿಕೆ ಮಾಡಿಲ್ಲ ಎಂಬುದನ್ನು ಕೂಡಲೇ ಪರಿಶೀಲಿಸಿ ಸಂಬಂಧಪಟ್ಟವರಿಗೆ ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ. ವಾಹನ ಸವಾರರು ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ತುಸು ಎಚ್ಚರಿಕೆಯಿಂದ ಚಲಾಯಿಸಬೇಕು.

| ಮಲ್ಲಿಕಾರ್ಜುನ, ವ್ಯವಸ್ಥಾಪಕ ನಿರ್ದೇಶಕ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಚಿತ್ರದುರ್ಗ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...