20 C
Bengaluru
Saturday, January 18, 2020

ಹೆಲಿ ಟೂರ್, ಟಾಂಗಾ ವ್ಯವಸ್ಥೆ ಆಕರ್ಷಣೆ

Latest News

ತಲೆಯಲ್ಲಿ ಮೂರು, ಮುಖಕ್ಕೆ ಒಂದು ಬುಲೆಟ್​ ಹೊಕ್ಕಿ ಗಾಯಗೊಂಡರೂ 7 ಕಿ.ಮೀ. ಚಲಿಸಿ ದೂರು ದಾಖಲಿಸಿದ ಮಹಿಳೆ!

ಚಂಡೀಗಢ: ತಲೆಯಲ್ಲಿ ಮೂರು ಹಾಗೂ ಮುಖಕ್ಕೆ ಒಂದು ಬುಲೆಟ್​ ಹೊಕ್ಕು ಗಾಯಗೊಂಡರೂ ಸುಮಾರು 7 ಕಿ.ಮೀ. ಚಲಿಸಿ ಮಹಿಳೆಯೊಬ್ಬಳು ಜಮೀನು ಕಸಿದ ಪ್ರಕರಣದಡಿಯಲ್ಲಿ...

ಮನೆಗೆ ಮರಳುವಾಗ ನಾಪತ್ತೆಯಾಗಿದ್ದ ಭಾರತೀಯ ಮೂಲದ ಮಹಿಳೆ ತನ್ನ ಕಾರಿನ ಟ್ರಂಕ್​ನಲ್ಲೇ ಶವವಾಗಿ ಪತ್ತೆ

ವಾಷಿಂಗ್ಟನ್​: ಕಳೆದ ತಿಂಗಳು ಮನೆಗೆ ಮರಳುತ್ತಿದ್ದವಳು ನಾಪತ್ತೆಯಾಗಿದ್ದಾಳೆ ಎಂದು ಕುಟುಂಬದವರು ದೂರು ದಾಖಲಿಸಿದ್ದ ಭಾರತೀಯ ಮೂಲದ ಅಮೆರಿಕ ಮಹಿಳೆ ತನ್ನ ಕಾರಿನ ಟ್ರಂಕ್​ನಲ್ಲಿ...

ಡಿ.14ರಿಂದ ತಲಕಾಡು ಪಂಚಲಿಂಗ ದರ್ಶನ

ತಲಕಾಡು: ಡಿಸೆಂಬರ್ 14ರಿಂದ ಹತ್ತು ದಿನಗಳ ಕಾಲ ತಲಕಾಡಿನಲ್ಲಿ ನಡೆಯಲಿರುವ ವಿಶ್ವಪ್ರಸಿದ್ಧ ಪಂಚಲಿಂಗ ದರ್ಶನ ಮಹೋತ್ಸವವನ್ನು ಅಚ್ಚುಕಟ್ಟಾಗಿ ನೆರವೇರಿಸಲು ಜಿಲ್ಲಾಡಳಿತ ವತಿಯಿಂದ ಅಗತ್ಯ...

ಕಿಡ್ನಿ ಕಸಿಗೆ ನೆರವು ನೀಡಲು ಯುವಕನ ಮನವಿ

ವಿಜಯವಾಣಿ ಸುದ್ದಿಜಾಲ ಮಂಡ್ಯ ಎರಡೂ ಕಿಡ್ನಿಗಳ ವೈಫಲ್ಯದಿಂದ ಬಳಲುತ್ತಿರುವ ಯುವಕ ನೆರವಿಗೆ ಮನವಿ ಮಾಡಿದ್ದಾನೆ.ತಾಲೂಕಿನ ಕೊತ್ತತ್ತಿ ಗ್ರಾಮದ ವಿನೋದ್‌ಕುಮಾರ್(28) ಎರಡೂ ಕಿಡ್ನಿ ವೈಫಲ್ಯದಿಂದ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ ಮಿಸ್​ ಮಾಡಿಕೊಂಡ್ರೆ ನಿಮಗೆ ನಷ್ಟ!

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ...

ಶಿವಮೊಗ್ಗ: ಜ.23ರಿಂದ 27ರವರೆಗೆ ನಡೆಯಲಿರುವ ಸಹ್ಯಾದ್ರಿ ಉತ್ಸವದ ಅಂಗವಾಗಿ ಹಲವು ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಿದ್ದು, ಹೆಲಿಕ್ಯಾಪ್ಟರ್ ಮೂಲಕ ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದರು.

ಕೃಷಿನಗರದಲ್ಲಿ ಕೆಸರು ಗದ್ದೆ ಓಟ, ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಿಂದ ಸೂರಗೊಂಡನಕೊಪ್ಪವರೆಗೆ ಸೈಕಲ್ ಸ್ಪರ್ಧೆ, ಅಬ್ಬಲಗೆರೆಯಲ್ಲಿ ಎತ್ತಿನಗಾಡಿ ಓಟ, ಅಂಬೇಡ್ಕರ್ ಭವನದಲ್ಲಿ ದೇಹದಾರ್ಢ್ಯ ಸ್ಪರ್ಧೆ, ಗೋಪಾಳದ ಯುವಜನ ಮತ್ತು ಸಬಲೀಕರಣ ಮೈದಾನದಲ್ಲಿ ಲಾನ್ ಟೆನ್ನಿಸ್, ಈಜು, ಸ್ಕೇಟಿಂಗ್ ಸೇರಿ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಸ್ ಟೂರ್ ಪ್ಯಾಕೇಜ್: ಉತ್ಸವದ ಮೂಲಕ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಬ್ಸಿಡಿ ದರದಲ್ಲಿ ಖಾಸಗಿ ಬಸ್​ಗಳ ಮೂಲಕ ಟೂರ್ ಪ್ಯಾಕೇಜ್ ಮಾಡಲಾಗಿದೆ. ಒಟ್ಟು 7 ಮಾರ್ಗದಲ್ಲಿ ಪ್ರವಾಸಕ್ಕೆ ವ್ಯವಸ್ಥೆ ಮಾಡಿದ್ದು, ಕೇವಲ 100 ರೂ. ದರ ನಿಗದಿಪಡಿಸಲಾಗಿದೆ. ಸೈನ್ಸ್ ಮೈದಾನದಿಂದ ಪ್ರತಿದಿನ ಬೆಳಗ್ಗೆ 7.30ಕ್ಕೆ ಬಸ್​ಗಳು ಹೊರಟು ಸಂಜೆ 5.30ಕ್ಕೆ ವಾಪಾಸಾಗಲಿವೆ ಎಂದರು.

ಗುಣಮಟ್ಟದ ಖಾಸಗಿ ಬಸ್​ಗಳ ಮೂಲಕ ಪ್ರವಾಸ ಆಯೋಜಿಸಲಾಗುವುದು. ಮಧ್ಯಾಹ್ನದ ಊಟದ ವೆಚ್ಚವನ್ನು ಸಹ ಭರಿಸಲಾಗುವುದು. ಸಾರ್ವಜನಿಕರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಕಡಿಮೆ ವೆಚ್ಚದಲ್ಲಿ ಭೇಟಿ ನೀಡಲು ಇದು ಉತ್ತಮ ಅವಕಾಶ. ಚಾರಣಪ್ರಿಯರಿಗೆ ಚಾರಣ ಮಾರ್ಗವನ್ನು ಗುರುತಿಸಿ ಗೈಡೆಡ್ ಚಾರಣ ಮಾಡಿಸಲಾಗುವುದು ಎಂದು ಹೇಳಿದರು.

ಬಸ್ ಟೂರ್ ಮಾರ್ಗಗಳು

1. ಶಿವಮೊಗ್ಗ, ಹರಕೆರೆ, ಗಾಜನೂರು, ಸಕ್ರೆಬೈಲು, ಮಂಡಗದ್ದೆ, ಚಿಬ್ಬಲಗುಡ್ಡ, ಮೃಗವಧೆ, ಕುಪ್ಪಳಿ

2. ಶಿವಮೊಗ್ಗ, ಸೂರಗೊಂಡನಕೊಪ್ಪ, ಅಂಜನಾಪುರ ಡ್ಯಾಂ, ಹುಚ್ಚರಾಯಸ್ವಾಮಿ ದೇವಸ್ಥಾನ, ಉಡತಡಿ, ಬಳ್ಳಿಗಾವೆ, ತೊಗರ್ಸಿ

3. ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಸಾಗರ ಮಾರಿಕಾಂಬಾ ದೇವಸ್ಥಾನ, ಇಕ್ಕೇರಿ, ಕೆಳದಿ, ಶ್ರೀಧರ ಆಶ್ರಮ, ವರದಹಳ್ಳಿ, ಜೋಗ

4. ಶಿವಮೊಗ್ಗ, ಕೋಡೂರು, ಕಾರಣಗಿರಿ, ನಗರಕೋಟೆ, ನಿಟ್ಟೂರು, ಸಿಗಂದೂರು

5. ಶಿವಮೊಗ್ಗ, ಹರಕೆರೆ, ಗಾಜನೂರು, ಸಕ್ರೆಬೈಲು, ಮಂಡಗದ್ದೆ, ತೀರ್ಥಹಳ್ಳಿ ರಾಮೇಶ್ವರ, ಕುಂದಾದ್ರಿ, ಆಗುಂಬೆ

6. ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಸ್ಥಾನ, ಗಾಜನೂರು ಜಲಾಶಯ, ಸಕ್ರೆಬೈಲು, ಕೂಡ್ಲಿ, ಸೇಕ್ರೆಡ್ ಹಾರ್ಟ್ ಚರ್ಚ್, ತ್ಯಾವರೆಕೊಪ್ಪ, ಮುದ್ದಿನಕೊಪ್ಪ ಟ್ರೀ ಪಾರ್ಕ್

7. ನಗರದ ವ್ಯಾಪ್ತಿಯ ಪ್ರಮುಖ ಸ್ಥಳಗಳು.

ಹೆಲಿಟೂರಿಸಂ: ನಗರದ ವೈಮಾನಿಕ ಪ್ರವಾಸಕ್ಕಾಗಿ ಉತ್ಸವದ ದಿನಗಳಲ್ಲಿ ಇದೇ ಮೊದಲ ಬಾರಿಗೆ ಹೆಲಿ ಟೂರಿಸಂ ಆಯೋಜಿಸಲಾಗುತ್ತಿದೆ. 8 ನಿಮಿಷಕ್ಕೆ 2.5 ಸಾವಿರ ರೂ., 10 ನಿಮಿಷಕ್ಕೆ 3 ಸಾವಿರ ರೂ. ಹಾಗೂ 1.10 ಗಂಟೆಗೆ ಜೋಗ್ ಪ್ಯಾಕೇಜ್​ಗೆ 20 ಸಾವಿರ ರೂ. ನಿಗದಿಪಡಿಸಲಾಗಿದೆ. ಹೆಲಿಪ್ಯಾಡ್​ನಿಂದ ಹೆಲಿಕಾಪ್ಟರ್ ಟೇಕಾಫ್ ಆಗಲಿದೆ ಎಂದು ಡಿಸಿ ತಿಳಿಸಿದರು.

ಟಾಂಗಾ ಟೂರ್:  ನಗರದ ಪ್ರವಾಸಿ ತಾಣಗಳಿಗೆ, ಕಾರ್ಯಕ್ರಮದ ಮುಖ್ಯ ವೇದಿಕೆಗೆ ಸೇರಿ ಇನ್ನಿತರ ಸ್ಥಳಗಳಿಗೆ ಸಾರ್ವಜನಿಕರನ್ನು ಕರೆದೊಯ್ಯಲು ‘ಟಾಂಗಾ ಟೂರ್’ ವ್ಯವಸ್ಥೆ ಮಾಡಲಾಗಿದೆ. ಅಲಂಕೃತವಾಗಿರುವ ಟಾಂಗಾಗಳು ನೆಹರು ಮೈದಾನ ಬಳಿ ಲಭ್ಯರಲಿದೆ ಎಂದರು.

ಉತ್ಸವದ ಅಂಗವಾಗಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಕೂಡ ಆಯೋಜಿಸಿದ್ದು, ಜ.24ರಂದು ಬೆಳಗ್ಗೆ 9.30 ಗಂಟೆಗೆ ಆರಂಭವಾಗಲಿದೆ ಎಂದು ಹೇಳಿದರು.

ನೋಂದಣಿಗೆ ಮನವಿ: ಕ್ರೀಡೆಗಳ ಕುರಿತಾದ ಮಾಹಿತಿ ಹಾಗೂ ನೋಂದಣಿಗೆ ಲೋಕೇಶ್(9483778002), ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಶಿವಲಿಂಗು (8762778402, 08182-255293), ಹೆಲಿಟೂರ್ ಬುಕ್ಕಿಂಗ್​ಗೆ ಚಂದನ್ (9742038039), ಬಸ್​ಟೂರ್​ಗಾಗಿ ದರ್ಶನ್ (9591522903) ಅವರನ್ನು ಸಂರ್ಪಸಿ ಬುಕ್ಕಿಂಗ್ ಮಾಡುವಂತೆ ಕೋರಿದರು.

ಇದೇವೇಳೆ ಸಹ್ಯಾದ್ರಿ ಉತ್ಸವದ ಆಕರ್ಷಕ ಪೋಸ್ಟರ್​ಗಳನ್ನು ಡಿಸಿ ಬಿಡುಗಡೆ ಮಾಡಿದರು. ಎಡಿಸಿ ಅನುರಾಧಾ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಹನುಮನಾಯ್ಕ, ಯುವಜನಸೇವಾ ಮತ್ತು ಕ್ರೀಡಾಧಿಕಾರಿ ರಮೇಶ್, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಮತ್ತಿತರರು ಉಪಸ್ಥಿತರಿದ್ದರು.

ಗಾಯಕ ರಘು ದಿಕ್ಷೀತ್ ಮೆರಗು: ಸಹ್ಯಾದ್ರಿ ಉತ್ಸವಕ್ಕೆ ಗಾಯಕ ರಘು ದಿಕ್ಷೀತ್ ಆಗಮಿಸಲಿದ್ದು, ಮೆರಗು ನೀಡಲಿದ್ದಾರೆ ಎಂದು ಡಿಸಿ ದಯಾನಂದ್ ಹೇಳಿದರು. ರಘು ದಿಕ್ಷೀತ್ ಹೊರತುಪಡಿಸಿ ಪ್ರಮುಖರು ಉತ್ಸವಕ್ಕೆ ಬರುತ್ತಿಲ್ಲ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯವರು ರಘು ದೀಕ್ಷೀತ್ ಬರುವ ಖರ್ಚು ವೆಚ್ಚ ನೀಡಲಿದ್ದಾರೆ. ನಟ ಸುದೀಪ್ ಅವರನ್ನು ಕೇಳಿಕೊಂಡಿದ್ದೆವು. ಆದರೆ ಕಾರ್ಯ ಒತ್ತಡದಿಂದ ಅವರು ಬರುತ್ತಿಲ್ಲ. ಇನ್ನುಳಿದಂತೆ ಸ್ಥಳೀಯ ಪ್ರತಿಭೆಗಳು ಮತ್ತು ಶಾಲಾ ಮಕ್ಕಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದ್ದೇವೆ ಎಂದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...