18.1 C
Bangalore
Saturday, December 7, 2019

ಹೆಸ್ಕಾಂ ಮತ್ತೆ ಎಡವಟ್ಟು

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಯಲ್ಲಾಪುರ: ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ 63ರ ಪಕ್ಕದಲ್ಲಿ ಹೆಸ್ಕಾಂ ವತಿಯಿಂದ ವಿದ್ಯುತ್ ಕಂಬ ಅಳವಡಿಸುತ್ತಿರುವ ಕಾಮಗಾರಿಯು ಅಧ್ವಾನಗಳ ಆಗರವಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಕಳೆದ ತಿಂಗಳು ನಾಯಕನಕೆರೆ ಬಳಿ ರಸ್ತೆಗೆ ಹೊಂದಿಕೊಂಡು ಕಂಬ ಅಳವಡಿಕೆಯ ಮೂಲಕ ಎಡವಟ್ಟು ಮಾಡಿಕೊಂಡಿದ್ದ ಹೆಸ್ಕಾಂ ಈಗ, ರಸ್ತೆ ಪಕ್ಕದಲ್ಲಿ ಪೈಪ್​ಲೈನ್ ಮಧ್ಯದಲ್ಲೇ ಕಂಬ ಅಳವಡಿಸುವ ಮೂಲಕ ಮತ್ತೊಮ್ಮೆ ಜನರ ಆಕ್ಷೇಪಕ್ಕೆ ಗುರಿಯಾಗಿದೆ.

ಹೆದ್ದಾರಿಯ ಇಕ್ಕೆಲಗಳಲ್ಲಿ ಪಕ್ಕಾ ಗಟಾರ್ ನಿರ್ಮಾಣ ಮಾಡಲು ವಿದ್ಯುತ್ ಕಂಬಗಳನ್ನು ತೆಗೆಯಲಾಗಿತ್ತು. ಈ ಕಂಬಗಳನ್ನು ಮರು ಅಳವಡಿಕೆ ಮಾಡುವ ಕಾಮಗಾರಿಯನ್ನು ಕಳೆದ ತಿಂಗಳು ಹೆಸ್ಕಾಂ ಕೈಗೆತ್ತಿಕೊಂಡಿತು. ಆಗ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಕಂಬಗಳನ್ನು ಅಳವಡಿಸಲಾಗುತ್ತಿತ್ತು. ಅಸಮರ್ಪಕವಾಗಿ ಅಳವಡಿಸಿದ ವಿದ್ಯುತ್ ಕಂಬಗಳಿಂದ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟಾಗಬಹುದು ಎಂಬ ಮಾತು ಕೇಳಿ ಬಂದಿತು. ಸಂಘಟಿತರಾದ ಸ್ಥಳೀಯರು, ‘ಅವೈಜ್ಞಾನಿಕವಾಗಿ ವಿದ್ಯುತ್ ಕಂಬಗಳನ್ನು ಅಳವಡಿಸಬಾರದು. ವಿದ್ಯುತ್ ಕಂಬಗಳನ್ನು ಮೊದಲಿದ್ದಂತೆ ಚರಂಡಿಯ ಪಕ್ಕದಲ್ಲಿ ಅಳವಡಿಬೇಕು. ಈ ಕುರಿತು ಹೆಸ್ಕಾಂ ಕೂಡಲೇ ಕ್ರಮ ಕೈಗೊಂಡು, ಸಂಭವನೀಯ ಅಪಾಯವನ್ನು ತಪ್ಪಿಸಬೇಕು. ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹೆಸ್ಕಾಂಗೆ ಸೂಚನೆ ನೀಡಿ, ಕೂಡಲೇ ಕಂಬಗಳನ್ನು ಚರಂಡಿಯ ಹೊರ ಭಾಗದಲ್ಲಿ ಅಳವಡಿಸುವಂತೆ ಆದೇಶ ನೀಡಬೇಕು’ ಎಂದು ಆಗ್ರಹಿಸಿ ತಹಸೀಲ್ದಾರರಿಗೆ ಮನವಿಯನ್ನೂ ಸಲ್ಲಿಸಿದರು.

ಸ್ಥಳೀಯರ ಆಶಯದಂತೆ ಈಗ ಗಟಾರ್ ಹೊರಗೆ ಕಂಬ ಅಳವಡಿಸುವ ಕಾಮಗಾರಿ ಕೆಲ ದಿನಗಳಿಂದ ನಡೆಯುತ್ತಿದೆ. ಆದರೆ ಈಗ ಗಟಾರ್ ಪಕ್ಕದಿಂದ ಹಾದು ಹೋಗುತ್ತಿರುವ ನೀರು ಪೂರೈಕೆ ಹಾಗೂ ಕೇಬಲ್ ಅಳವಡಿಕೆಗೆ ಸಂಬಂಧಿಸಿದ ಎರಡು ಪೈಪ್​ಲೈನ್​ಗಳ ಮಧ್ಯದಲ್ಲಿ ವಿದ್ಯುತ್ ಕಂಬ ನೆಡಲಾಗಿದೆ. ಇನ್ನೂ ಪೈಪ್​ಲೈನ್ ಅಳವಡಿಕೆ ಪೂರ್ತಿ ಮುಗಿದಿಲ್ಲ. ಸದ್ಯದಲ್ಲೇ ಅದು ಮುಂದುವರಿಯಲಿದೆ. ಆ ಪೈಪ್​ಲೈನ್ ಅಳವಡಿಕೆಗೆ ವಿದ್ಯುತ್ ಕಂಬಗಳು ಮತ್ತೆ ಅಡ್ಡಿಯಾಗಲಿವೆ.

ಇಂತಹ ಅವೈಜ್ಞಾನಿಕ ಕಾಮಗಾರಿ ಕೈಗೊಳ್ಳುವ ಮುನ್ನ ಅದರ ಪೂರ್ವಾಪರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಹಾಗೆ ಮಾಡದೇ ಪೈಪ್​ಲೈನ್ ಮಧ್ಯದಲ್ಲಿಯೇ ಕಂಬ ಅಳವಡಿಸಿರುವುದರಿಂದ ಪೈಪ್​ಲೈನ್​ನಲ್ಲಿ ಕೇಬಲ್ ಅಥವಾ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ ಮತ್ತೆ ವಿದ್ಯುತ್ ಕಂಬ ತೆಗೆಯುವುದು ಅನಿವಾರ್ಯವಾಗಲಿದೆ. ವಿವೇಚನೆಯಿಲ್ಲದೇ ಇಂತಹ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಇಲಾಖೆ ಅನಗತ್ಯವಾಗಿ ಹಣ ಪೋಲು ಮಾಡಲಾಗುತ್ತಿದೆ ಎಂಬ ಆಕ್ರೋಶ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ.

ಎರಡು ಪೈಪ್​ಲೈನ್​ಗಳಿಗೂ ಮಧ್ಯದಲ್ಲಿ ವಿದ್ಯುತ್ ಕಂಬ ಹಾಕಿರುವುದರಿಂದ ಮುಂದಿನ ದಿನಗಳಲ್ಲಿ ಮತ್ತೆ ಅದನ್ನು ತೆರವುಗೊಳಿಸಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಪೈಪ್​ಲೈನ್ ಹೊರಭಾಗದಲ್ಲಿ ವಿದ್ಯುತ್ ಕಂಬ ಅಳವಡಿಸಬೇಕು. ಸಮರ್ಪಕವಾಗಿ ಕಾಮಗಾರಿ ಕೈಗೊಳ್ಳುವವರೆಗೆ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಬಾರದು. – ಪ್ರಕಾಶ ಕಟ್ಟಿಮನಿ ಸ್ಥಳೀಯರು

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...