More

  ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

  ಬೀದರ್: ತಾಲ್ಲೂಕಿನ ಟಿ. ಮಿರ್ಜಾಪುರ ಗ್ರಾಮದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
  ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು. ಕುಂಭ ಕಳಶ ಹೊತ್ತ ಮಹಿಳೆಯರು ಮೆರವಣಿಗೆಯ ಮೆರುಗು ಹೆಚ್ಚಿಸಿದರು.
  ಹೇಮರೆಡ್ಡಿ ಮಲ್ಲಮ್ಮ ತೊಟ್ಟಿಲು, ಮಹಾ ಪ್ರಸಾದ ವಿತರಣೆ ಕಾರ್ಯಕ್ರಮಗಳಲ್ಲಿ ಭಕ್ತರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡರು.
  ಶ್ರೀ ಹೇಮರೆಡ್ಡಿ ಮಲ್ಲಮ್ಮ ರೆಡ್ಡಿ ಜನ ಸಂಘ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಾಣಿಕರೆಡ್ಡಿ ಬಕ್ಕಾರೆಡ್ಡಿ, ಮುಖಂಡ ಅನಂತ ರೆಡ್ಡಿ ಟಿ. ಮಿರ್ಜಾಪುರ ಮೊದಲಾದವರು ಮುಂದಾಳತ್ವ ವಹಿಸಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts